LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಲವ್ ಸೀಸನ್ಸ್: ಮಳೆಯಾಗೋ ಮೊದಲೇ ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆ!

ಒಂದು ವಿಭಿನ್ನ ಪ್ರೇಮ ಕಥನವೆಂಬ ಸುಳಿವಿನ ಮೂಲಕ ಪ್ರೇಕ್ಷಕರನ್ನು ಸೆಳೆದಿದ್ದ ಚಿತ್ರ ಲವ್ ಸೀಸನ್ಸ್. ಕೃತ್ವಿಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಮೊದಲ ಲಿರಿಕಲ್ ವೀಡಿಯೋ ಸಾಂಗ್ ಇದೀಗ ಬಿಡುಗಡೆಗೊಂಡಿದೆ. ಈ ಮೂಲಕ ಮಧುರವಾದ ಸಾಹಿತ್ಯ, ಸಂಗೀತದ ಗೀತೆಯ ಮೂಲಕ ಲವ್ ಸೀಸನ್ಸ್ ಮ್ಯೂಸಿಕ್ ಹಂಗಾಮಕ್ಕೆ ಚಾಲನೆ ಸಿಕ್ಕಂತಾಗಿದೆ.
ಎನ್.ಆರ್ ಸ್ಟುಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಮಳೆಯಾಗೋ ಮೊದಲೇ ಕೊಡೆ ಹಿಡಿದು ಬರುವೆ, ನಗು ಮುಗಿವಾ ಮೊದಲೇ ಹೊಸ ಖುಷಿಯ ಕೊಡುವೆ ಎಂಬ ಮೋಹಕ ಸಾಲುಗಳನ್ನು ಕಾಂತಾರಾ ಖ್ಯಾತಿಯ ಪ್ರಮೋದ್ ಮರವಂತೆ ಬರೆದಿದ್ದಾರೆ. ವೀರ್ ಸಮರ್ಥ್ ಸಂಗೀತ ಸಂಯೋಜಿಸಿರುವ ಗೀತೆಗೆ ಸರೆಗಮಪ ಸೀಸನ್ 10 ಸ್ಪರ್ಧಿಯಾಗಿ ಪ್ರಸಿದ್ಧಿ ಪಡೆದಿದ್ದ ಪ್ರಜ್ಞಾ ಮರಾಠೆ ಮತ್ತು ಅರ್ಮಾನ್ ಮಲಿಕ್ ಧ್ವನಿಯಾಗಿದ್ದಾರೆ. ಈ ಹಿಂದೆ ಟೀಸರ್ ಬಿಡುಗಡೆಯ ಸಂದರ್ಭದಲ್ಲಿಯೇ ವೀರ್ ಸಮರ್ಥ್ ಈ ಸಿನಿಮಾದ ಹಾಡುಗಳ ಬಗ್ಗೆ ಒಂದಷ್ಟು ವಿಚಾರಗಳನ್ನು ಹಂಚಿಕೊAಡಿದ್ದರು. ಇದೀಗ ಬಿಡುಗಡೆಗೊಂಡಿರೋ ಹಾಡು ಆ ಮಾತುಗಳನ್ನು ನಿಜವಾಗಿಸಿದಂತಿದೆ.
ಎನ್.ಆರ್ ಸ್ಟುಡಿಯೋಸ್ ಬ್ಯಾನರ್‌ನಡಿಯಲ್ಲಿ ಎನ್.ಆರ್ ಮಂಜುನಾಥ (ನೀಲೇರಿ) ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೃತ್ವಿಕ್ ನಿರ್ದೇಶನ, ವೀರ್ ಸಮರ್ಥ್ ಸಂಗೀತ ಸಂಗೀತ ನಿದೇಶನ ಈ ಚಿತ್ರಕ್ಕಿದೆ. ಕೆ.ಕಲ್ಯಾಣ್, ಪ್ರಮೋದ್ ಮರವಂತೆ ಮುಂತಾದವರು ಸಾಹಿತ್ಯ ಬರೆದಿದ್ದಾರೆ. ಅವಿನಾಶ ಶಾಸ್ತ್ರೀ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನ, ಭಜರಂಗಿ ಮೋಹನ್ ನೃತ್ಯ ಸಂಯೋಜನೆಯಿರುವ ಈ ಚಿತ್ರದಲ್ಲಿ ಮುಕುಂದ ರಾಮಸ್ವಾಮಿ ನಾಯಕನಾಗಿ ನಟಿಸಿದ್ದಾರೆ. ದಿಯಾ ಕೀರ್ತಿ, ಚಂದನಾ ಗೌಡ ಮತ್ತು ಶ್ವೇತಾ ಕೊಗ್ಲೂರು ನಾಯಕಿಯರಾಗಿ ಜೊತೆಯಾಗಿದ್ದಾರೆ. ಮಂಡ್ಯ ರಮೇಶ್, ರಾಜೇಶ್ ನಟರಂಗ, ಸಂಗೀತಾ ಅನಿಲ್, ಜಯತೀರ್ಥ, ಚೇತನ್ ದುರ್ಗ, ಕಾಮಿಡಿ ಕಿಲಾಡಿ ಸದಾನಂದ, ಹುಲಿ ಕಾರ್ತಿಕ್, ಬೇಬಿ ರಿತು ಸಿಂಗ್ ಮುಂತಾದವರ ತಾರಾಗಣವಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು