LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಏಂ-18 ಇದು ಹಾರರ್, ಸೆಸ್ಪೆನ್ಸ್, ಥ್ರಿಲ್ಲರ್ ಸರಕು

ವಿನೂತನ ಶೀರ್ಷಿಕೆ `ಏಂ-18' ಚಿತ್ರದ ಮುಹೂರ್ತ ಸಮಾರಂಭವು ಶ್ರೀ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ಹಿರಿಯ ಸಾಹಿತಿ ಡಾ.ವಿ.ನಾಗೇಂದ್ರ ಪ್ರಸಾದ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಛಾಲೆಂಜಿಂಗ್ ಸ್ಟಾರ್ ದರ್ಶನ್ ಅಳಿಯ ನಟ ಮನೋಜ್ ಕ್ಯಾಮೆರಾ ಆನ್ ಮಾಡಿದರು. ಅಪ್ಪಾಜಿ ಪ್ರೊಡಕ್ಷನ್ಸ್ ಅಡಿಯಲ್ಲಿ ಹಿರೇಮಗಳೂರು ಮೂಲದ ಎ.ಟಿ.ಎಂ.ಮಂಜು ನಿರ್ಮಾಣ ಮಾಡುವುದರ ಜತೆಗೆ ನಾಯಕನಾಗಿ ಬಣ್ಣ ಹಚ್ಚುತ್ತಿರುವುದು ಹೊಸ ಅನುಭವ. ಮೋಹನ್ ಚಿಕ್ಕಿ ಮೂರನೇ ಸಿನಿಮಾಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಉತ್ತರಕಾಂಡದ ಸೋನಿಯಾ ರಾವುತ್ ಸಹ ನಿರ್ಮಾಪಕಿ ಹಾಗೂ ಹಾಡಿಗೆ ಹೆಜ್ಜೆ ಹಾಕುತ್ತಿದ್ದಾರೆ. ಚಿತ್ರವು ಕನ್ನಡ ಸೇರಿದಂತೆ ತೆಲುಗು, ಹಿಂದಿ, ತಮಿಳು ಮತ್ತು ಮಲೆಯಾಳಂ ಭಾಷೆಗಳಲ್ಲಿ ಸಿದ್ದಗೊಳ್ಳುತ್ತಿರುವುದು ವಿಶೇಷ.ಮುಖ್ಯ ಪಾತ್ರದಲ್ಲಿ ಎ.ಟಿ.ಎಂ.ಮಂಜು, ತನಿಷಾ ಕುಪ್ಪಂಡ, ಸೋನಿಯಾ ರಾವುತ್. ಖಳನಾಗಿ ದೀಪು ಇವರೊಂದಿಗೆ ವರ್ಧನ್, ವಿಜಿ, ಪೂಜಾ ಮುಂತಾದವರು ಅಭಿನಯಿಸಿದ್ದಾರೆ. ಶಶಿಕುಮಾರ್.ಜೆ.ಕೆ ಸಾಹಿತ್ಯ, ಛಾಯಾಗ್ರಹಣ ಮುಂಜಾನೆ ಮಂಜು, ಸಂಕಲನ ರಘು ಶಿವರಾಮ್, ಸಾಹಸ ವೈಲೆಂಟ್ ವೇಲು, ನಿರ್ಮಾಣ ನಿರ್ವಹಣೆ ಮಂಜುನಾಥ್ ದೈವಜ್ಞ ಅವರದಾಗಿದೆ.ನಂತರ ಮಾತನಾಡಿದ ನಿರ್ದೇಶಕರು, ಗೆಳೆಯ ನಿರ್ದೇಶಕ ಆರ್ಯ ಮಹೇಶ್ ಸಹಕಾರ ಎಂದಿಗೂ ಮರೆಯಲಾಗದು. ನಿರ್ಮಾಪಕರು ಹೇಳಿದ ಒಂದು ಏಳೆಯನ್ನು ಬಳಸಿಕೊಂಡು ಅದನ್ನು ವಿಸ್ತಾರ ಮಾಡಿಕೊಳ್ಳಲಾಗಿದೆ. ಚಿತ್ರವು ಎರಡು ಪಾತ್ರಗಳ ಸುತ್ತ ಸಾಯಂಕಾಲ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ನಡೆಯುವ ಘಟನೆಯಲ್ಲಿ ನಾಲ್ಕೈದು ಎಲಿಮೆಂಟ್ಸ್ ಬರುತ್ತದೆ. ಚಿಕ್ಕಮಗಳೂರು ಸ್ಥಳದಲ್ಲಿ ಸಂಪೂರ್ಣ ಚಿತ್ರೀಕರಣವನ್ನು ಒಂದೇ ಹಂತದಲ್ಲಿ ಮುಗಿಸಲು ಯೋಜನೆ ಹಾಕಲಾಗಿದೆ ಅಂತ ಮೋಹನ್ ಚಿಕ್ಕಿ ಮಾಹಿತಿ ಹರಿಬಿಟ್ಟರು.ಶಾಲೆ ಕಾಲೇಜು ದಿನಗಳಿಂದಲೂ ನಾಟಕ ಪ್ರೇಮಿ. ಅಂದಿನಿಂದಲೇ ಸಿನಿಮಾ ಮಾಡಬೇಕೆಂಬ ಹುಚ್ಚು ಇತ್ತು. ಅದಕ್ಕೆ ಈಗ ಕಾಲ ಕೂಡಿಬಂದಿದೆ. 2000 ಇಸವಿಯಲ್ಲಿ ಅಪ್ಪನೊಂದಿಗೆ ಕೆಮ್ಮಣ್ಣುಗುಂಡಿಗೆ ಹೋಗಿದ್ದಾಗ ಅಲ್ಲಿ ನೋಡಿದಂತ ಘಟನೆಯನ್ನು ನಿರ್ದೇಶಕರಿಗೆ ಹೇಳಿದೆ. ಈ ಸ್ಥಳ ಹಾಗೂ ಆ ಸ್ಥಳದ ಮಧ್ಯೆ ಮೂಲಭೂತ ಸೌಕರ್ಯವಿಲ್ಲದ ಹಾದಿಯಲ್ಲಿ ಮುಖ್ಯ ಕಾರಣವನ್ನು ಸಂಶೋಧನೆ ಮಾಡಲು ಹೋಗುತ್ತಿದ್ದಾಗ ಒಂದಷ್ಟು ಅಡಚಣೆಗಳು ಬರುತ್ತದೆ. ಕೊನೆಗೆ ಅದರಿಂದ ರಕ್ಷಣೆ ಸಿಗುತ್ತದಾ?, ಇಲ್ಲವಾ ಎಂಬುದನ್ನು ಹೇಳ ಹೊರಟದ್ದೀವೆ. ಅಲ್ಲದೆ ಮೂಢನಂಬಿಕೆ ಅಂಶವನ್ನು ತೆಗೆದುಕೊಳ್ಳಲಾಗಿದೆ ಎಂದು ಎ.ಟಿ.ಎಂ.ಮಂಜು ಹೇಳಿದರು.
ತನಿಷಾ ಕುಪ್ಪಂಡ ಹೇಳುವಂತೆ, ಅಂಕಿತಾ ಹೆಸರಿನಲ್ಲಿ ಕಾಡು ದಾರಿಯಲ್ಲಿ ಅಪರಿಚಿತ ವ್ಯಕ್ತಿಯೊಂದಿಗೆ ಪಯಣಿಸುವಾಗ ಸಣ್ಣ ಪುಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಯಾರು ಯಾರಿಗೆ ಒಳ್ಳೇದು, ಕೆಟ್ಟದ್ದು ಮಾಡುತ್ತಾರೆ ಎಂಬುದನ್ನು ಹೇಳ ಹೊರಟಿದ್ದಾರೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು