LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮಾ.೧೬ ಸಿಎಂರಿಂದ ಸಚಿವರಿಗೆ ಡಿನ್ನರ್ ಪಾರ್ಟಿ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೆ `ಡಿನ್ನರ್ ರಾಜಕೀಯ' ಸದ್ದು ಮಾಡುತ್ತಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೆಲವೇ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಚಿವರಿಗೆ ವಿಶೇಷ ಔತಣಕೂಟ ಏರ್ಪಡಿಸಿದ್ದಾರೆ. ಮಾರ್ಚ್ ೧೬ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸ `ಕಾವೇರಿ'ಯಲ್ಲಿ ಸಚಿವರಿಗೆ ಡಿನ್ನರ್ ಪಾರ್ಟಿ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸಮಯದಲ್ಲೇ ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿರುವುದು ಗಮನಾರ್ಹವಾಗಿದೆ.
ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷರಾಗಿ ೬ ವರ್ಷ ಪೂರ್ಣಗೊಂಡ ನೆಪದಲ್ಲಿ ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ಆಯೋಜಿಸಿದ್ದರು. ಅದರ ಬೆನ್ನಲ್ಲೇ ಮಾರ್ಚ್ ೧೨ರಂದು ಸಿಎಂ ಮತ್ತು ಡಿಸಿಎಂ ಬಣಗಳಿಗೆ ಸೇರಿರುವ ಕೆಲವು ಶಾಸಕರು ಪ್ರತ್ಯೇಕವಾಗಿ ಸಭೆ ನಡೆಸಿದ್ದು ರಾಜಕೀಯ ಚರ್ಚೆಗೆ ಕಾರಣವಾಗಿತ್ತು.
ಈ ಸಭೆಯಲ್ಲಿ ಸಚಿವ ಸ್ಥಾನ ಆಕಾಂಕ್ಷಿ ಶಾಸಕರು ಸಂಪುಟ ಪುನರ್‌ರಚನೆಗಾಗಿ ಒತ್ತಡ ಹೇರುವ ತಂತ್ರಗಾರಿಕೆ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಈ ಬೆಳವಣಿಗೆಗಳ ನಡುವೆಯೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಿಗೆ ಡಿನ್ನರ್ ಕೂಟ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ವಿವಿಧ ರೀತಿಯ ಚರ್ಚೆಗೆ ಗ್ರಾಸವಾಗಿದೆ.
ಈ ಡಿನ್ನರ್ ಸಭೆಯಲ್ಲಿ ಮುಂದಿನ ರಾಜಕೀಯ ತಂತ್ರಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಜಿಬಿಎ ಚುನಾವಣೆಗಳ ತಯಾರಿ, ಒಳಮೀಸಲಾತಿ ವಿಚಾರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಶೀಘ್ರದಲ್ಲೇ ಘೋಷಣೆಯಾಗಬಹು ದಾದ ಪಂಚ ರಾಜ್ಯಗಳ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ
ಕಾರ್ಯಗಳಲ್ಲಿ ಯಾರು ಭಾಗವಹಿಸ ಬೇಕು ಎಂಬುದರ ಕುರಿತಾಗಿಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.
ಒಟ್ಟಿನಲ್ಲಿ ಡಿಕೆ ಶಿವಕುಮಾರ್ ಅವರ ಡಿನ್ನರ್ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯೋಜಿಸಿರುವ ಈ ಔತಣಕೂಟ ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಆಂತರಿಕ ರಾಜಕೀಯದ ಮೇಲೆ ಅದರ ಪರಿಣಾಮ ಹೇಗಿರಲಿದೆ ಎಂಬುದರ ಬಗ್ಗೆ ಕುತೂಹಲ ಹೆಚ್ಚಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು