LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಮುತ್ತರಸ" ನಾದ ಮಡೆನೂರ್ ಮನು

ರಿಯಾಲಿಟಿ ಶೋ ಮೂಲಕ ಜನಪ್ರಿಯರಾಗಿದ್ದ ಮಡೆನೂರು ಮನು, "ಕುಲದಲ್ಲಿ ಕೀಳ್ಯಾವುದೊ" ಚಿತ್ರದ ಮೂಲಕ ನಾಯಕನಾದರು. ಪ್ರಸ್ತುತ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಮನು, ತಮ್ಮ ನೂತನ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ್ದಾರೆ. ಚಿತ್ರಕ್ಕೆ "ಮುತ್ತರಸ" ಎಂದು ಹೆಸರಿಡಲಾಗಿದೆ. ಜೆ.ಕೆ.ಮೂವೀಸ್ ಲಾಂಛನದಲ್ಲಿ ಕೆ.ಎA.ನಟರಾಜ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಖ್ಯಾತ ನಟ ವಸಿಷ್ಠ ಸಿಂಹ, ಹಿರಿಯ ನಟರಾದ ಎಂ.ಎಸ್. ಉಮೇಶ್, ಕರಿ ಸುಬ್ಬು, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ಮುಂ ತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿ, ಮಡೆನೂರ್ ಮನು ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು. ಪದ್ಮಶ್ರೀ ಪುರಸ್ಕöÈತ ಮಂಜಮ್ಮ ಜೋಗತಿ ಅವರು ಶೀರ್ಷಿಕೆ ಅನಾವರಣ ಮಾಡಿದರು. ನಂತರ ಸಿನಿಮಾ ತಂಡದವರು ಹಾಗೂ ಗಣ್ಯರು ಮಾತನಾಡಿದರು. ಕೆಲವು ದಿನಗಳ ಹಿಂದೆ ನನ್ಮ ಜೀವನದಲ್ಲಿ ಆದ ಕಹಿ ಘಟನೆಗಳನೆಲ್ಲಾ ಮರೆತಿದ್ದೇನೆ. ಸದ್ಯಕ್ಕೆ ಯಾವುದೇ ಸಮಸ್ಯೆಗಳು ಇಲ್ಲ. ಆ ಸಮಯದಲ್ಲಿ ನನ್ನ ಜೊತೆಗೆ ನಿಂತವರಿಗೆ ನಾನು ಚಿರ ಋಣಿ. ಇಂದು ನನ್ನ ಹೊಸ ಸಿನಮಾದ ಶೀರ್ಷಿಕೆ ಬಿಡುಗಡೆಯಾಗಿದೆ. ಅನಾವರಣ ಮಾಡಿಕೊಟ್ಟ ವಸಿಷ್ಠ ಸಿಂಹ ಅವರು ಸೇರಿದಂತೆ ಪ್ರತಿಯೊಬ್ಬ ಗಣ್ಯರಿಗೆ ಧನ್ಯವಾದ.

ನಾನು ವಸಿಷ್ಠ ಸಿಂಹ ಅವರೊಟ್ಟಿಗೆ ತಲ್ವಾರ್ ಪೇಟೆ ಚಿತ್ರದಲ್ಲಿ ನಟಿಸಿದ್ದೇನೆ. ಇನ್ನೂ "ಮುತ್ತರಸ" ಚಿತ್ರದ ಶೀರ್ಷಿಕೆ ಕೊಟ್ಟದ್ದು ನಿರ್ದೇಶಕ ರಾಮ್ ನಾರಾಯಣ್ ಅವರು. ಮುಂದಿನ ತಿಂಗಳಿನಿAದ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಈ ಚಿತ್ರದ ನಿರ್ದೇಶಕರು ಯಾರು? ತಾರಾಬಳಗದಲ್ಲಿ ಯಾರಿದ್ದಾರೆ? ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ಈ ಸಂದರ್ಭದಲ್ಲಿ ಎನ್ ಆರ್ ರಮೇಶ್, ಶಿವಕುಮಾರ್ ನಾಯಕ್, ಯೋಗರಾಜ್ ಭಟ್ ಹಾಗೂ ನನ್ನ ಹಿಂದಿನ ಚಿತ್ರದ ನಿರ್ಮಾಪಕರಾದ ಸಂತೋಷ್ ಕುಮಾರ್, ವಿದ್ಯಾ ಮತ್ತು ನಿರ್ದೇಶಕ ರಾಮ್ ನಾರಾಯಣ್ ಅವರನ್ನು ನೆನೆಯುತ್ತೇನೆ ಎಂದು ತಿಳಿಸಿದ ನಟ ಮಡೆನೂರ್ ಮನು, ಈ ವರ್ಷದ ಕೊನೆಗೆ ನಾನು ನಟಿಸಿರುವ "ವಿಚಾರಣೆ" ಚಿತ್ರ ಸಹ ತೆರೆಗೆ ಬರಲಿದೆ ಎಂದು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು