LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮಧುಗೆ ಅಹಂ ಜಾಸ್ತಿಯಾಗಿದೆ: ಬೇಳೂರು

ಬೆಂಗಳೂರು: ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ಸ್ವಪಕ್ಷ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ಉಸ್ತುವಾರಿ ಸಚಿವರು ಸರಿ ಆಗಿದ್ದಾರೆ. ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ. ನಾವು ಶಾಸಕರಲ್ವಾ ನಮಗೂ ಜವಬ್ದಾರಿ ಇಲ್ವಾ ಎಂದು ಪ್ರಶ್ನಿಸಿದರು.

ನಾವು ಬಿಎಸ್ ಯಡಿಯೂರಪ್ಪ ಅವರ ಮಕ್ಕಳನ್ನ ಸೋಲಿಸಬೇಕು ಅಂತ ಇದ್ದೇವೆ. ಬಿವೈ ರಾಘವೇಂದ್ರ ಅವರನ್ನು ಸೋಲಿಸಬೇಕು ಅಂತ ಇದ್ದೇವೆ. ಆದರೆ ನಮ್ಮ ಸಚಿವರು ನಮ್ಮಲ್ಲೆ ಒಡಕು ಮೂಡಿಸುತ್ತಿದ್ದಾರೆ. ಮಧು ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿ ಮಗ. ಅವರ ತಂದೆ ಗರಡಿಯಲ್ಲಿ ಪಳಗಿದವರು ನಾವು. ಎಲ್ಲರನ್ನು ಒಗ್ಗೂಡಿಸಿ ಕರೆದುಕೋಡು ಹೋಗಬೇಕು. ಆದರೆ ಪಕ್ಷವನ್ನ ಒಡೆಯುವುದಲ್ಲ ಎಂದರು.

ಶಿವಮೊಗ್ಗದಲ್ಲಿ ಪಕ್ಷ ಒಡೆದು ಎರೆಡು ಬಣವಾಗಿದೆ. ಅವರೇ ಅದಕ್ಕೆ ಕುಮ್ಮಕ್ಕು ನೀಡುವುದಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತಗೆದುಕೊಳ್ಳಬೇಕು. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಅನ್ನೋದು ಹೈ ಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಒಬ್ಬ ಪ್ರಬಲ ಆಕಾಂಕ್ಷಿ ಎಂದು ಗೋಪಾಲಕೃಷ್ಣ ಹೇಳಿದರು.

ಮೂರು ತಿಂಗಳಲ್ಲಿ ಸರ್ಕಾರ ಬೀಳುತ್ತದೆ ಎಂಬ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಗೋಪಾಲಕೃಷ್ಣ, ಯಡಿಯೂರಪ್ಪ ಅವರು ಒಂದು ಮಾತು ತಿಳಿದುಕೊಳ್ಳಬೇಕು. ಹಿಂದೆ ಮಿಷನ್ 150 ಅಂತ ಹೇಳಿ ಯಡಿಯೂರಪ್ಪ ರಾಜ್ಯ ಓಡಾಡಿದ್ದರು. ಆದರೆ ಕೇವಲ 65 ಸೀಟ್‍ಗಳು ಬಂದಿವೆ. ಅವರ ನಾಯಕತ್ವದಲ್ಲೇ ಚುನಾವಣೆ ನಡೆದಿತ್ತು. ಮೋದಿ ಕರ್ಕೊಂಡು ಬಂದು ರಾಜ್ಯದಲ್ಲಿ ಓಡಾಡಿದ್ದಾರೆ. ಆದರೂ ಅಧಿಕಾರಕ್ಕೆ ಬಂದಿಲ್ಲ ಎಂದರು.

ರಾಜ್ಯದಲ್ಲಿ 136 ಸೀಟ್ ಜನ ಬೆಂಬಲ ಕೊಟ್ಟಿದ್ದಾರೆ. ಸರ್ಕಾರಕ್ಕೆ ಯಾವುದೇ ತೊಂದರೆ ಆಗಲ್ಲ. ಯಡಿಯೂರಪ್ಪ ಮಗ ಅಧ್ಯಕ್ಷ ಆದ ತಕ್ಷಣವೇ ಈ ರೀತಿಯ ಹೇಳಿಕೆ ಕೊಡುವುದು ಸರಿಯಲ್ಲ. ಮಗ ಬಂದ ತಕ್ಷಣವೇ ಚುನಾವಣೆ ಆದರೆ ಬಿಜೆಪಿ ಅಧಿಕಾರಕ್ಕೆ ಬರುತ್ತಾ ಎಂದು ಪ್ರಶ್ನಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು