LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Davanagere

ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಮಡಿವಾಳ ಮಾಚಿದೇವ ಸಂಘ ಪ್ರತಿಭಟನೆ

ದಾವಣಗೆರೆ: ರಾಜ್ಯದಲ್ಲಿ ನಡೆದ ಕೊಪ್ಪಳ ಜಿಲ್ಲಾ ಕಿನ್ನಾಳ ಗ್ರಾಮದ ಅಪ್ರಾಪ್ತೆ ಬಾಲಕಿ ಅನುಶ್ರೀ ಮೇಲಿನ ವಾಮಾಚಾರದ ಬಲಿ, ಹುಬ್ಬಳ್ಳಿ ನಗರದ ನೇಹಾ ಹಿರೇಮರ್ ಮತ್ತು ಅಂಜಲಿ ಅಂಬಿಗರ ಇವರನ್ನು ಹತ್ತೆಗೈದ ಆರೋಪಿಗಳನ್ನು ಹಾಗೂ ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ದೇವನೂರು ಗ್ರಾಮದ ಅರ್ಜುನಪ್ಪ ಹಣಮಂತನ ಮೇಲೆ ಹಲ್ಲೆ ಮಾಡಿರುವ ಹಲ್ಲೇಕೋರರನ್ನು ಗಲ್ಲು ಶಿಕ್ಷೆಗೆ ಗುರಿ ಪಡಿಸಲು ಒತ್ತಾಯಿಸಿ ದಾವಣಗೆರೆ ಜಿಲ್ಲಾ ಮಡಿವಾಳ ಮಾಚಿದೇವ ಸಂಘವು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು.

ನಗರದ ಜಯದೇವ ವೃತ್ತದಿಂದ ದಾವಣಗೆರೆ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಉಪ ವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ ಮಡಿವಾಳ ಸಮುದಾಯದ ಪದಾಧಿಕಾರಿಗಳು ರಾಜ್ಯದ ಮುಖ್ಯ ಮಂತ್ರಿಗಳಿಗೆ ರವಾನಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಕಾರ್ಯಾಧ್ಯಕ್ಷ ಹೆಚ್.ಜಿ.ಉಮೇಶ್, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದು, ಅತ್ಯಾಚಾರ, ಕೊಲೆಯಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಕೊಪ್ಪಳ ಜಿಲ್ಲಾ ಕಿನ್ನಾಳ ಗ್ರಾಮದ ಅಪ್ರಾಪ್ತೆ ಬಾಲಕಿ ಅನುಶ್ರೀ ಮೇಲೆ ವಾಮಾಚಾರ ಮಾಡಿ, ಆಕೆಯನ್ನು ಕತ್ತು ಕೊಯ್ದು ಅಮಾನುಷವಾಗಿ ಕೊಲೆ ಮಾಡಲಾಗಿದೆ.

ಅದರಲ್ಲೂ ಮಹಿಳೆಯರ ಮೇಲಿನ ದೌರ್ಜನ್ಯ, ಹತ್ಯೆ ಹೆಚ್ಚಾಗುತ್ತಿವೆ. ಪ್ರೀತಿಯ ಹೆಸರಿನಲ್ಲಿ ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರನ್ನು ಕಾಲೇಜು ಆವರಣದಲ್ಲಿ ದುಷ್ಕರ್ಮಿ ಫಯಾಜ್ ಹಲವಾರು ಬಾರಿ ಚಾಕುವಿನಿಂದ ಇರಿದುಕೊಲೆ ಮಾಡಿದ್ದು, ಇಡೀ ರಾಜ್ಯವೇ ಭಯಪಡುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಇದಲ್ಲದೇ ಹುಬ್ಬಳ್ಳಿಯಲ್ಲೇ ವಿಶ್ವ ಎಂಬಾತ ಅಂಜಲಿ ಅಂಬಿಗರ ಎನ್ನುವ ಯುವತಿಯನ್ನು ಕೊಲೆ ಮಾಡಿ, ಪರಾರಿಯಾಗುವ ವೇಳೆ ದಾವಣಗೆರೆ ಸಮೀಪದ ಮಾಯಕೊಂಡ ರೈಲ್ವೆ ನಿಲ್ಧಾಣದಲ್ಲಿ ಮಹಿಳೆಯೊಬ್ಬಳ ಮೇಲೆ ಹತ್ಯೆಗೆ ಯತ್ನಿಸಿ, ಪ್ರಯಾಣಿಕರ ಸಹಕಾರದಿಂದ ರೈಲ್ವೆ ಪೊಲೀಸರಿಗೆ ಸಿಕ್ಕು ಬಿದ್ದಿದ್ದು, ಇದೀಗ ಪ್ರಕರಣ ತನಿಖೆ ನಡೆಯುತ್ತಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಬಳಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಎಸ್‍ಎಸ್‍ಎಲ್ಸಿ ವಿದ್ಯಾರ್ಥಿನಿ ಮೀನಾ ಕೊಲೆ ನಡೆದಿತ್ತು. ನಂತರ ಪೊಲೀಸರು ಆರೋಪಿಯನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ. ಇದೇ ರೀತಿ ರಾಜ್ಯದಲ್ಲಿ ಹಲವಾರು ಹಲ್ಲೆ, ಅತ್ಯಾಚಾರ, ಹತ್ಯೆಯಂತಹ ಪ್ರಕರಣಗಳು ಪದೇಪದೇ ನಡೆಯುತ್ತಿದ್ದರೂ ಸಹ ರಾಜ್ಯದ ಗೃಹ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದರು.

ಕಲಬುರುಗಿ ಜಿಲ್ಲೆಯ ಸೇಡಂ ತಾಲೂಕಿನ ದೇವನೂರು ಗ್ರಾಮದಲ್ಲಿ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಾಡಿ ಜೀವನ ನಡೆಸುತ್ತಿದ್ದ ಅರ್ಜುನ್ ಹಣುಮಂತಪ್ಪ, ಮಹಮ್ಮದ್ ಸಮೀರುದ್ದೀನ್, ಅಬ್ದುಲ್ ರೆಹಮಾನ್ ಎಂಬಾತರನ್ನು ಕೊಠಡಿಯೊಂದರಲ್ಲಿ ಕೂಡಿ ಹಾಕಿದ್ದಲ್ಲದೇ ಅವರನ್ನು ವಿವಸ್ತ್ರಗೊಳಿಸಿ, ಗುಪ್ತಾಂಗಕ್ಕೆ ಬಾಟರಿಯಿಂದ ಕರೆಂಟ್ ಶಾಕ್ ನೀಡಿದ ಪ್ರಕರಣ ದಾಖಲಾಗಿದೆ. ಈ ಘಟನೆಯ ವಿಡಿಯೋ ತುಣುಕುಗಳು ರಾಜ್ಯದೆಲ್ಲೆಡೆ ಹರಿದಾಡುತ್ತಿದ್ದು, ಅಮಾನವಿಯವಾದ ರೀತಿಯಲ್ಲಿ ನಡೆದುಕೊಂಡ ಆರೋಪಿಗಳನ್ನು ಕಲಬುರುಗಿಯ ವಿಶ್ವವಿದ್ಯಾನಿಲಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಇದೇ ರೀತಿ ರಾಜ್ಯದಲ್ಲಿ ಹಲ್ಲೇ, ದೌರ್ಜನ್ಯ, ಅತ್ಯಾಚಾರ, ಕೊಲೆಯಂತಹ ಪ್ರಕರಣಗಳು ನಡೆಯುತ್ತಿದ್ದು, ರಾಜ್ಯದ ಜನರನ್ನು ಭಯಬೀತರನ್ನಾಗಿ ಮಾಡಿದೆ. ಅದರಲ್ಲೂ, ಯುವತಿಯರು ಮಹಿಳೆಯರು ಮನೆಯಿಂದ ಹೊರಗೆ ಹೋಗಲು ಹೆದರುವ ವಾತಾವರಣ ಸೃಷ್ಟಿಯಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಗೃಹ ಇಲಾಖೆ ಸೂಕ್ತ ರೀತಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವ ಜೊತೆಯಲ್ಲಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕು. ಇದಲ್ಲದೇ ಈ ಎಲ್ಲಾ ಪ್ರಕರಣಗಳಲ್ಲಿ ಅಮಾನವೀಯ, ವಿಕೃತವಾಗಿ ವರ್ತನೆ ಮಾಡಿರುವ ಎಲ್ಲಾ ಆರೋಪಿಗಳನ್ನು ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಹುಲಿಕಟ್ಟೆ ರಾಮಚಂದ್ರಪ್ಪ, ಎಂ.ವೈ.ಸತೀಶ್, ಜಿ.ಕಿಶೋರ್ ಕುಮಾರ್, ಆರ್.ಎನ್.ಮಾರುತಿ, ಅಂಜಿನಪ್ಪ ಪೂಜಾರ್, ಜಿ.ವಿಜಯ ಕುಮಾರ್, ಹನುಮಂತಪ್ಪ, ಕಕ್ಕರಗೊಳ್ಳ ಮಂಜುನಾಥ್, ಅಣಜಿ ಹನುಮಂತಪ್ಪ, ಐಗೂರು ಅಂಜಿನಪ್ಪ, ಅರಸೀಕೆರೆ ಬಸವರಾಜ್, ರವಿ ಚಿಕ್ಕಣ್ಣ, ಮಧುರಾ, ನಾಗಮ್ಮ, ಡೈಮಂಡ್ ಮಂಜುನಾಥ್, ಗೋಪಾಲ್, ಕೃಷ್ಣಮೂರ್ತಿ, ರವಿ, ಬಾತಿ ಶಂಕರ್, ಸುಭಾಷ್, ರಾಜಣ್ಣ, ಎಂ.ಕೆ.ಬಸವರಾಜ್ ಇತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು