LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

"ಕೋಲ್ಕತಾ ಟೆಸ್ಟ್ ಟಾಸ್‌ಗೆ ಮಹಾತ್ಮ ಗಾಂಧಿ-ನೆಲ್ಸನ್ ಮಂಡೇಲಾ ನಾಣ್ಯ"

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ಸ್ಮರಣೀಯವಾಗಿಸಲು ಭರದ ತಯಾರಿ ನಡೆಯುತ್ತಿದೆ. ಈ ಟೆಸ್ಟ್ ಸರಣಿಯು ಗಾಂಧಿ ಮತ್ತು ಮಂಡೇಲಾ ಅವರ ಸ್ಮರಣಾರ್ಥ' ಫ್ರೀಡಂ ಟ್ರೋಫಿ 'ಗಾಗಿ ನಡೆಯುತ್ತಿದ್ದು, ಅವರ ಅಹಿಂಸೆಯ ಸಂದೇಶವನ್ನು ಸಾರಲಿದೆ. ಹೀಗಾಗಿ ವಿಶೇಷ ಗೌರವ ಸಲ್ಲಿಸಲು ಬಂಗಾಳ ಕ್ರಿಕೆಟ್ ಸಂಸ್ಥೆ ( CAB ) ಒಂದು ವಿಶೇಷ ಚಿನ್ನದ ನಾಣ್ಯವನ್ನು ಪರಿಚಯಿಸಿದೆ.

ನವೆಂಬರ್ ೧೪ ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ, ಮಹಾತ್ಮ ಗಾಂಧಿ ಮತ್ತು ನೆಲ್ಸನ್ ಮಂಡೇಲಾ ಅವರ ಚಿತ್ರಗಳಿರುವ ಈ ನಾಣ್ಯವನ್ನು ಟಾಸ್ ಗಾಗಿ ಬಳಸಲಾಗುತ್ತದೆ. ಶಾಂತಿ, ಸ್ವಾತಂತ್ರ್ಯ ಮತ್ತು ಅಹಿಂಸೆಯ ಮೌಲ್ಯಗಳನ್ನು ಪ್ರತಿನಿಧಿಸುವ ಈ ನಾಣ್ಯವನ್ನು ಸರಣಿಗಾಗಿಯೇ ವಿಶೇಷವಾಗಿ ತಯಾರಿಸಲಾಗಿದೆ ಎಂದು CAB  ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದ್ದಾರೆ ಆರು ವರ್ಷಗಳ ಬಳಿಕ ಈಡನ್ ಗಾರ್ಡನ್ಸ್ ನಲ್ಲಿ ಟೆಸ್ಟ್ ಪಂದ್ಯ ನಡೆಯುತ್ತಿದ್ದು ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಪಂದ್ಯದ ಮೊದಲ ಮೂರು ದಿನಗಳ ಟಿಕೆಟ್‌ಗಳು ಬಹುತೇಕ ಮಾರಾಟವಾಗಿವೆ. ಸಿಎಬಿ ಖಜಾಂಚಿ ಸಂಜಯ್ ದಾಸ್ ಅವರ ಪ್ರಕಾರ ೧.೪ ಕೋಟಿ ಟಿಕೆಟ್ ಗಳಲ್ಲಿ ೯೬,೦೦೦ ಟಿಕೆಟ್‌ಗಳು ಈಗಾಗಲೇ ಮಾರಾಟವಾಗಿವೆ. ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ, ಪಂದ್ಯದ ವೇಳೆ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಆಟಗಾರರು ಮತ್ತು ಪ್ರೇಕ್ಷಕರ ಸುರಕ್ಷತೆಗಾಗಿ ಅಂಃ ಮತ್ತು ಕೋಲ್ಕತ್ತಾ ಪೊಲೀಸರು ವಿಶೇಷ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದಾರೆ. ಪಂದ್ಯದ ಮುನ್ನಾ ದಿನವಾದ ನವೆಂಬರ್
೧೩ ರಂದು, ಅಂಃ ಜಗಮೋಹನ್ ದಾಲ್ಮಿಯಾ ಸ್ಮರಣಾರ್ಥ ಉಪನ್ಯಾಸವನ್ನು ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಭಾರತ ಕ್ರಿಕೆಟ್ ನ ದಂತಕತೆ ಸುನೀಲ್ ಗವಾಸ್ಕರ್ ಅವರು ಮುಖ್ಯ
ಭಾಷಣ ಮಾಡಲಿದ್ದು, ಉಭಯ ತಂಡಗಳ ಕ್ರಿಕೆಟಿಗರು ಭಾಗವಹಿಸಲಿದ್ದಾರೆ. BCCI ಮತ್ತು ICCಎರಡನ್ನೂ ಮುನ್ನಡೆಸಿದ್ದ ದಾಲ್ಮಿಯಾ, ಭಾರತವನ್ನು ವಿಶ್ವ ಕ್ರಿಕೆಟ್‌ನಲ್ಲಿ ಪ್ರಬಲ ರಾಷ್ಟ್ರವನ್ನಾಗಿನರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದು ಉತ್ತಮ ಪಿಚ್: ಗಂಗೂಲಿ ಭಾನುವಾರ ಸಂಜೆ ಶುಭಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ ಕೋಲ್ಕತಾ ತಲುಪಿದ್ದು ಜಸ್ಮಿತ್ ಬುಮ್ರಾ ಮತ್ತು ಮುಖ್ಯ ಕೋಚ್ ಗೌತಮ್
ಗಂಭೀರ್ ತಂಡದೊಂದಿಗೆ ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು