LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಮಹಾ ಶಿವರಾತ್ರಿ ಜಾತ್ರೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಕೆ.ವೆಂಕಟೇಶ್

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಂಬರಲಿರುವ ಮಹಾ ಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಲೆ ಮಹದೇಶ್ವರ ಬೆಟ್ಟದ ಲೋಕೋ ಪಯೋಗಿ ಇಲಾಖೆಯ ತಪೋಭವನ ಸಭಾಂಗಣದಲ್ಲಿಂದು ಮಹಾಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಾಶಿವರಾತ್ರಿ ಜಾತ್ರೆಗೆ ಲಕ್ಷಾಂತರ ಭಕ್ತಾಧಿಗಳು ಕ್ಷೇತ್ರಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು.

ಪರ ಮಾಡುವ ಸ್ಥಳದಲ್ಲಿ ಟ್ಯಾಂಕರ್ ಮೂಲಕ ಶುದ್ದ ಕುಡಿಯುವ ನೀರನ್ನು ಪೂರೈಸಬೇಕು. ಪಾದಯಾತ್ರೆ ಮೂಲಕ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳಿಗೂ ಶುದ್ಧ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದರು.ಭಕ್ತಾದಿಗಳಿಗೆ ನೆರಳಿನ ವ್ಯವಸ್ಥೆ ಮಾಡಬೇಕು. ಸರತಿ ಸಾಲಿನಲ್ಲಿ ದರ್ಶನ ಮಾಡುವವರಿಗೆ ಸಹ ನೆರಳಿಗೆ ಅಗತ್ಯ ವ್ಯವಸ್ಥೆ ಇರಬೇಕು. ತುರ್ತು ಸಂದರ್ಭಗಳಲ್ಲಿ ಅವಶ್ಯವಿರುವ ಕಡೆಗಳಲ್ಲಿ ನೆರಳು ಮತ್ತು ನೀರಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು.

ಖಾಯಂ ಶೌಚಾಲಯಗಳ ಜೊತೆಗೆ ತಾತ್ಕಾಲಿಕ ಶೌಚಾಲಯಗಳನ್ನು ಸಹ ಅಳವಡಿಸಬೇಕು ಎಂದು ಸಚಿವರು ತಿಳಿಸಿದರು.
ಜಾತ್ರೆ ಸಂದರ್ಭದಲ್ಲಿ ಹೆಚ್ಚು ಭಕ್ತರು ಬರುವುದರಿಂದ ಸ್ವಚ್ಚತಾ ನಿರ್ವಹಣೆಗೆ ಹೆಚ್ಚು ಪೌರಕಾರ್ಮಿಕರನ್ನು ನಿಯೋಜಿಸಿಕೊಳ್ಳಬೇಕು. ಪಾಳಿಯ ಮೇಲೆ ಸ್ವಚ್ಚತಾ ಕಾರ್ಯ ನಿರ್ವಹಣೆಯಾಗಬೇಕು. ಕ್ಷೇತ್ರದಲ್ಲಿ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ತಾಳುಬೆಟ್ಟದಿಂದಲೇ ಪ್ಲಾಸ್ಟಿಕ್ ವಸ್ತುಗಳನ್ನು ತರದಂತೆ ಭಕ್ತಾಧಿಗಳಿಗೆ ಮನವರಿಕೆ ಮಾಡಿಕೊಡಬೇಕು.

ಪ್ಲಾಸ್ಟಿಕ್ ನಿಯಂತ್ರಣದ ಕುರಿತು ಜಾಗೃತಿ ಮೂಡಿಸುವ ಕೆಲಸವನ್ನು ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಾತ್ರೆ ನಡೆಯುವ ದಿನಗಳಲ್ಲಿ ವಿಶೇಷ ದಾಸೋಹ ಇರಬೇಕು. ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸಬೇಕು. ಕೆ.ಎಸ್.ಆರ್.ಟಿ.ಸಿ ಬಸ್ಸುಗಳು, ಇನ್ನಿತರ ಲಘು ವಾಹನಗಳಿಗೂ ನಿಗದಿತ ಸ್ಥಳ ಇರಬೇಕು. ಜಾತ್ರೆಗೆ ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚು ಜನರು ಆಗಮಿಸುವ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಟಿ.ಸಿ ವತಿಯಿಂದ ಹೆಚ್ಚು ಸಂಖ್ಯೆಯಲ್ಲಿ ಬಸ್‍ಗಳ ವ್ಯವಸ್ಥೆ ಮಾಡಬೇಕು. ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಭಕ್ತಾಧಿಗಳಿಗೆ ಬಸ್ಸಿನ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದರು.

ಭದ್ರತೆಗಾಗಿ ಪೊಲೀಸ್ ನಿಯೋಜನೆ, ವಿದ್ಯುತ್ ದೀಪಾಲಂಕಾರ, ನಿರಂತರ ವಿದ್ಯುತ್ ಪೂರೈಕೆಯಂತಹ ವ್ಯವಸ್ಥೆ, ಸಾಂಸ್ಕøತಿಕ ಕಾರ್ಯಕ್ರಮಗಳ ಆಯೋಜನೆ, ಇತರೆ ಅಗತ್ಯ ಕ್ರಮ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಾದ ವೆಂಕಟೇಶ್ ಅವರು ತಿಳಿಸಿದರು.
ಸಾಲೂರು ಶ್ರೀಗಳಾದ ಶಾಂತ ಮಲ್ಲಿಕಾರ್ಜುನ ಸ್ವಾಮಿಜೀ, ಶಾಸಕರಾದ ಎಂ.ಆರ್. ಮಂಜುನಾಥ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉದೇಶ, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಸಂತೋಷ್‍ಕುಮಾರ್, ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ತಹಶೀಲ್ದಾರ್ ಮಂಜುಳ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು