LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮಕ್ಕಳಿಂದ ಮಲಗುಂಡಿ ಸ್ವಚ್ಛ ಪ್ರಕರಣ ಬಿಜೆಪಿಯಿಂದ ಅಧ್ಯಯನ ಸಮಿತಿ

ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರಿನ ಸಮೀಪದ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಖಂಡಿಸಿದ್ದಾರೆ. ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿಯನ್ನು ರಚಿಸಿ ಅವರು ಆದೇಶ ಹೊರಡಿಸಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ಶ್ರೀಮತಿ ಭಾರತಿ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಶ್ರೀಮತಿ ಗೀತಾ ವಿವೇಕಾನಂದ, ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಶ್ರೀಮತಿ ಪ್ರಮೀಳಾ ನಾಯ್ಡು ಅವರು ಈ ಸಮಿತಿಯಲ್ಲಿ ಇರುವರು.

ಮಲದ ಗುಂಡಿ ಸ್ವಚ್ಛತೆ, ಮಕ್ಕಳಿಗೆ ಶಿಕ್ಷೆ ಕೊಡುವುದು ಸೇರಿದಂತೆ ಅಲ್ಲಿನ ಸಮಸ್ಯೆಗಳನ್ನೂ ಈ ಸಮಿತಿ ಪರಿಶೀಲಿಸಲಿದೆ. ಸ್ಥಳಕ್ಕೆ ಭೇಟಿ ಕೊಟ್ಟು ವಾಸ್ತವಾಂಶಗಳನ್ನು ಪರಿಶೀಲಿಸಿ ಈ ಸಮಿತಿಯು ರಾಜ್ಯಾಧ್ಯಕ್ಷರಿಗೆ ವರದಿ ಕೊಡಲಿದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು