LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮೋದಿ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೆ ಮಂಜುನಾಥ್-ಯದುವೀರ್ ನಿರ್ಧಾರ?

ಬೆಂಗಳೂರು: 2024 ರ ಲೋಕಸಭಾ ಚುನಾವಣೆಯ ಹಿನ್ನೆಲೆ ಸದ್ಯದಲ್ಲೇ ಪಕ್ಷ ಸೇರ್ಪಡೆಯಾಗಲಿರುವ ಡಾ.ಸಿ.ಎನ್ ಮಂಜುನಾಥ್ ಹಾಗೂ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದೊಡ್ಡ ಪ್ರಮಾಣದಲ್ಲಿ ಪಕ್ಷ ಸೇರ್ಪಡೆಯಾಗಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ನಾವು ಪಕ್ಷ ಸೇರ್ಪಡೆಯಾಗುವುದೇ ಟ್ರೆಂಡ್ ಆಗಬೇಕು ಎಂಬುದಾಗಿ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.ಡಾ.ಮಂಜುನಾಥ್, ವೈದ್ಯಕೀಯ ಕ್ಷೇತ್ರದಲ್ಲಿ ಅಪಾರವಾದ ಹೆಸರು ಪಡೆದವರು. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜಮನೆತನದವರು. ಇಂತಹ ಇಬ್ಬರು ಗಣ್ಯರು ಅಧಿಕೃತವಾಗಿ ಬಿಜೆಪಿಯಿಂದ ಇದೀಗ ಟಿಕೆಟ್ ಪಡೆದಿರುವುದು ಸಾಮಾನ್ಯ ವಿಚಾರವೇ ಅಲ್ಲ.

ಹೀಗಾಗಿ, ಈ ಇಬ್ಬರು ನಾಯಕರು ಕೂಡ ದೆಹಲಿ ಮಟ್ಟದಲ್ಲೇ ಪಕ್ಷ ಸೇರ್ಪಡೆಯಾದರೆ ಉತ್ತಮ ಎಂಬುದು ಅವರವರ ಅನಿಸಿಕೆ, ಅಭಿಪ್ರಾಯವಾಗಿದೆ.ದೆಹಲಿ ನಾಯಕರ ಮಟ್ಟದಲ್ಲೇನೋ ಸರಿ. ಆದರೆ ಸೇರ್ಪಡೆ ಯಾವಾಗ ಮಾಡಿಕೊಳ್ಳುವುದು? ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿಯೇ ಪಕ್ಷ ಸೇರ್ಪಡೆಯಾದರೆ ಬೆಲೆ ಇರಲಿದೆ. ಒಬ್ಬರು ರಾಜಮನೆತನದವರು, ಇನ್ನೊಬ್ಬರು ವೈದ್ಯಕೀಯ ಲೋಕದಲ್ಲಿ ಅಪಾರ ಹೆಸರು ಗಳಿಸಿರುವವರು.

ಇಲ್ಲಿ ಪಕ್ಷ ಸೇರ್ಪಡೆ ಆಗುವುದರಿಂದ ಅಂತಹ ದೊಡ್ಡ ಬದಲಾವಣೆ ಏನೂ ಆಗುವುದಿಲ್ಲ.ಹೀಗಾಗಿ, ದೆಹಲಿಗೆ ಹೋಗಿ ಸೇರೋಣ ಎಂಬ ಚಿಂತನೆ ನಡೆಸಿದ್ದು, ಮತ್ತೊಂದೆಡೆ ಮಾರ್ಚ್ 20 ರೊಳಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಮಾಡುವ ಸಂದರ್ಭದಲ್ಲಿ ಸೇರ್ಪಡೆಯಾಗೋಣ ಎಂದು ಉಭಯ ನಾಯಕರು ಅಂದಾಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು