LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Hassan

ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದಾರೆ.ಇಂದು ಮೂರನೇ ದಿನದ ಕಾರ್ಯಾಚರಣೆ ಆರಂಭಿಸಿದ್ದ ಇಟಿಎಫ್ ಸಿಬ್ಬಂದಿ ಮುಂಜಾನೆಯೇ ಕಾಡಾನೆ ಇರುವ ಸ್ಥಳವನ್ನು ಪತ್ತೆ ಮಾಡಿದ್ದರು. ದೈತ್ಯಾಕಾರದ ಕಾಡಾನೆ ಜೊತೆ ಕ್ಯಾಪ್ಟನ್ ಕಾಡಾನೆ ಸಹ ಇತ್ತು. ಈ ವೇಳೆ ಕುಮ್ಕಿ ಆನೆಗಳೊಂದಿಗೆ ತೆರಳಿ ನರಹಂತಕ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಲಾಯಿತು.
ಚುಚ್ಚುಮದ್ದು ನೀಡುತ್ತಿದ್ದಂತೆ ನರಹಂತಕ ಒಂಟಿಕೋರೆ ಕಾಡಾನೆ ಹಾಗೂ ಕ್ಯಾಪ್ಟನ್ ಕಾಡಾನೆ ಜೊತೆಯಲ್ಲಿಯೇ ಓಡ ಲಾರಂಭಿಸಿದ್ದವು. ಬೆನ್ನಟ್ಟಿದ ಕಾರ್ಯಾಚರಣೆ ತಂಡ ಎರಡು ಕಾಡಾನೆಗಳನ್ನು ಬೇರ್ಪಡಿಸಿತು. ಸ್ವಲ್ಪ ದೂರು ಓಡಿ ಪ್ರಜ್ಞೆತಪ್ಪಿ ಬಿದ್ದ ಕಾಡಾನೆಯನ್ನು, ಕುಮ್ಕಿ ಆನೆಗಳು ಸುತ್ತುವರಿದವು. ಬಳಿಕ ಕಾಡಾನೆಗೆ ನೀರು ಹಾಕಿ ಆರೈಕೆ ಮಾಡಿ ಹಗ್ಗದಲ್ಲಿ ಕಟ್ಟಲಾಯಿತು.ಕಾಡಾನೆಯನ್ನು ಸ್ಥಳಾಂತರ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನರಹಂತಕ ಕಾಡಾನೆ ಸೆರೆಯಿಂದ ಬೇಲೂರು ಭಾಗದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು