LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಮಾರ್ನಮಿ ಟ್ರೇಲರ್ ರಿಲೀಸ್"

ಆಕರ್ಷಕ ಶೀರ್ಷಿಕೆ ಜೊತೆಗೆ ವಿಭಿನ್ನ ಕಥೆ ಹೊಂದಿರುವ ಮಾರ್ನಮಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ನಟ ಸುದೀಪ್ಟ್ರೇಲರ್ ಅನಾವರಣ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.ಟ್ರೇಲರ್ ಅದ್ಭುತವಾಗಿದೆ.ಇಂಟ್ರೆಸ್ಟಿಂಗ್ ಆಗಿದೆ. ಈ ರೀತಿ ಹಾರ್ಡ್ ವರ್ಕ್, ಈ ರೀತಿ ಇನ್ವಾಲ್ಮೆಂಟ್, ಎಮೋಷನ್ ಇಲ್ಲದೆ ಇಂತಹ ಕಥೆಗಳನ್ನು ಪರದೆ ಮೇಲೆ ತರುವುದು
ಚಾಲೆಂಜ್. ಆ ವಿಷಯದಲ್ಲಿ ಈ ತಂಡ ಗೆದ್ದಿದೆ, ನಿರ್ದೇಶಕರು ತುಂಬಾ ಎಫರ್ಟ್ ಹಾಕಿದ್ದಾರೆ. ಅವರದ್ದೇ ಊರಿನಕಥೆಯನ್ನು ಪರದೆ ಮೇಲೆತರುವುದು ಸುಲಭವಲ್ಲ ಆದರೆ ನಿರ್ದೇಶಕರು ಅದನ್ನುಸಾಧಿಸಿದ್ದಾರೆ. ಚರಣ್ ರಾಜ್ಸಂಗೀತ ಚೆನ್ನಾಗಿದೆ. ಈ ಚಿತ್ರ ದೊಡ್ಡ ರೀತಿ ಯಶಸ್ಸು ಕಾಣಲಿದೆ ಎಂದುಸುದೀಪ್ ಶುಭ ಹಾರೈಸಿದರು.

ನಾಯಕ ರಿತ್ವಿಕ್ ಮಠದ್ ಮಾತನಾಡಿ, ನನ್ನ ಜೀವನದಲ್ಲಿ ಒಬ್ಬ ಸ್ಟಾರ್ ನ ಹತ್ತಿರದಿಂದ ನೋಡಿದ್ದು ಅಂದರೆ ಅದು ಸುದೀಪ್.. ಅವರು ತುಂಬಾ ಸ್ವೀಟ್. ಅವರು ಸಿನಿಮಾ ಅಂದರೆ ಪ್ರೋತ್ಸಾಹ ಕೊಟ್ಟೇ ಕೊಡುತ್ತಾರೆ.ಕರಾವಳಿ ಭಾಗದಲ್ಲಿ ನಡೆದ ಕಥೆಯನ್ನು ಮಾರ್ನಮಿ ಸಿನಿಮಾ ಮೂಲಕ ಹೇಳಲು ಹೊರಟಿದ್ದೇವೆ ನಿಮ್ಮ ಬೆಂಬಲ ಇರಲಿ ಎಂದರು. ನಿರ್ದೇಶಕ ರಿಶಿತ್ ಶೆಟ್ಟಿ ಮಾತನಾಡಿ, ನಾನು ಕಿಚ್ಚ ಅವರ ಅಭಿಮಾನಿ, ಕಿಚ್ಚ ಸರ್ ಹಾಡುಗಳಿಗೆ ನಾನು ಸ್ಕೂಲ್ ಹಾಗೂ ಗಣೇಶೋತ್ಸವ ಸಮಯದಲ್ಲಿ ಡ್ಯಾನ್ಸ್ ಮಾಡಿದ್ದೆ. ಈಗ ಅವರು ನಮ್ಮ ಚಿತ್ರದ ಟ್ರೇಲರ್ ಲಾಂಚ್ ಮಾಡಿದ್ದಾರೆ. ಇದು ಕನಸೋ? ನನಸೋ? ಎನಿಸುತ್ತಿದೆ. ಡೈರೆಕ್ಟರ್ ಆಗಬೇಕು ಎನ್ನುವುದು ನನ್ನ ಕನಸು, ಅದು ನನಸಾಗಿದೆ. ನನ್ನ ಚಿತ್ರಕ್ಕೆ ಬೇಕಾದ ನಾವಂದುಕೊಂಡ ಎಲ್ಲಾ ಕಲಾವಿದರು, ಟೆಕ್ನಿಷಿಯನ್ಸಿಕ್ಕಿದಾರೆ.

ಸಿನೆಮಾ ನವೆಂಬರ್ ೨೮ಕ್ಕೆ ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ಕಿಚ್ಚ ಹಾರೈಸಿದ್ದಾರೆ. ಇದು ದೇವರು, ದೊಡ್ಡವರು, ಹೆತ್ತವರ ಆಶೀರ್ವಾದ. ಎಂದರು. ಕೆಲ ಸಿನಿಮಾಗಳಲ್ಲಿ ಸಹ ನಿರ್ದೇಶಕ, ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ರಿಶಿತ್ ಶೆಟ್ಟಿ ಮಾರ್ನಮಿ ಸಿನಿಮಾ ಮೂಲಕ ನಿರ್ದೇಶಕರಾಗಿದ್ದಾರೆ. ಚಿತ್ರದಲ್ಲಿ ರಿತ್ವಿಕ್ ಹಾಗೂ ಚೈತ್ರಾ ಜೆ ಆಚಾರ್ ಜೊತೆಗೆ ಸುಮನ್ ತಲ್ವಾರ್, ಪ್ರಕಾಶ್ ತುಮಿನಾಡು, ಸೋನು ಗೌಡ , ಜ್ಯೋತೀಶ್ ಶೆಟ್ಟಿ, ರೋಚಿತ್, ಸ್ವರಾಜ್ ಶೆಟ್ಟಿ, ಮೈಮ್ ರಾಮದಾಸ್ ಹಾಗೂ ಚೈತ್ರಾ ಶೆಟ್ಟಿ ಸೇರಿದಂತೆ ಮುಂತಾದವರು ನಟಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು