LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಈವಾರ ತೆರೆಯ ಮೇಲೆ ಮಾಸ್ ಲವ್ ಸ್ಟೋರಿ "ಪ್ರಣಯಂ"

ಬಿಚ್ಚುಗತ್ತಿ ಖ್ಯಾತಿಯ ನಟ ರಾಜವರ್ಧನ್, ನೈನಾ ಗಂಗೂಲಿ ನಟಿಸಿರುವ, ಮಾಸ್ ಪ್ರೇಮಕಥೆ ಯೊಂದನ್ನು ಹೇಳುವ "ಪ್ರಣಯಂ" ಚಿತ್ರ ಈವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಪಲ್ಲಕ್ಕಿ, ಪಾರಿಜಾತದಂಥ ನವಿರು ಪ್ರೇಮ ಕಥೆಗಳನ್ನು ನೀಡಿದ ಪರಮೇಶ್ ಅವರ ಬ್ಯಾನರ್ ನಲ್ಲಿ ಮೂಡಿಬಂದಿರುವ ಮತ್ತೊಂದು ಇನ್ ಟೆನ್ಸ್ ಲವ್ ಸ್ಟೋರಿ ಪ್ರಣಯಂ ಚಿತ್ರದಲ್ಲಿದೆ.

ಮನಸ್ವಿ ವೆಂಚರ್ಸ್ ಹಾಗೂ ಪಿಟು ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಪರಮೇಶ್ ಅವರೇ ಕಥೆ ಬರೆದು ನಿರ್ಮಿಸಿರುವ ಈ ಚಿತ್ರಕ್ಕೆ ಎಸ್. ದತ್ತಾತ್ರೇಯ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.ಬಿಚ್ಚುಗತ್ತಿ ಖ್ಯಾತಿಯ ನಟ ರಾಜವರ್ಧನ್, ನೈನಾ ಗಂಗೂಲಿ ಚಿತ್ರದ ನಾಯಕ, ನಾಯಕಿಯಾಗಿ ಅಭಿನಯಿಸಿದ್ದಾರೆ.

ಫೆಬ್ರವರಿ 9ಕ್ಕೆ ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆ ಕಾಣುತ್ತಿರುವ ಈ ಚಿತ್ರವು ತನ್ನ ಟ್ರೈಲರ್ , ಸಾಂಗ್ಸ್ , ಮೇಕಿಂಗ್ ಮೂಲಕವೇ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ.ಪ್ರಣಯಂ ಚಿತ್ರಕ್ಕೆ ಸಾಹಿತಿ ಜಯಂತ್ ಕಾಯ್ಕಿಣಿ ಅವರು 3 ಸುಂದರ ಪ್ರೇಮಗೀತೆಗಳನ್ನು ಬರೆದಿದ್ದು, ಮನೋಮೂರ್ತಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ವಿ.ನಾಗೇಶ್ ಆಚಾರ್ಯ ಕ್ಯಾಮೆರಾ ವರ್ಕ್ ಮಾಡಿದ್ದಾರೆ.
ಪರಮೇಶ್ ಅವರು ಒಂದು ಚಿತ್ರ ಮಾಡುವಾಗ ಅದಕ್ಕೆ ತುಂಬಾ ಎಫರ್ಟ್ ಹಾಕುತ್ತಾರೆ.

ತಾನೊಬ್ಬ ನಿರ್ಮಾಪಕ, ಬಂಡವಾಳ ಹಾಕುವುದಷ್ಟೇ ನನ್ನ ಕೆಲಸ ಎಂದುಕೊಳ್ಳದೆ ಎಲ್ಲಾ ವಿಭಾಗದಲ್ಲೂ ಜವಾಬ್ದಾರಿ ತೆಗೆದುಕೊಂಡು ತಾವೇ ನಿಭಾಯಿಸುತ್ತಾರೆ. ನಿಜಕ್ಕೂ ಅವರು ಜೋಷ್ ಇರುವಂಥ ನಿರ್ಮಾಪಕ. ಅದೇ ಕಾರಣಕ್ಕೆ ಅವರ ನಿರ್ಮಾಣದ ಚಿತ್ರಗಳು ಬಿಡುಗಡೆಗೂ ಮುನ್ನವೇ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತವೆ.

ಚಿತ್ರದ ಬಗ್ಗೆ ಮಾತನಾಡಿರುವ ನಿರ್ದೇಶಕ ದತ್ತಾತ್ರೇಯ ಚಿತ್ರದ ಕಾನ್ಸೆಪ್ಟ್ ಗೆ ಸೂಕ್ತವಾಗುವಂಥ ಸಾಕಷ್ಟು ಲೊಕೇಶನ್ ಗಳನ್ನು ಹುಡುಕಾಡಿದ ನಂತರವಫ ಕೊನೆಗೆ ಮಡಿಕೇರಿಯಲ್ಲಿ ನಮಗೆ ಬೇಕಾದ ಲೊಕೇಶನ್ ಸಿಕ್ತು. ಎಲ್ಲರ ಸಹಕಾರದಿಂದ ಸಿನಿಮಾ ಅದ್ಭುತವಾಗಿ ಮೂಬಂದಿದೆ. ನಾಗೇಶ್ ಅವರು ಇಡೀ ಚಿತ್ರವನ್ನು ತುಂಬಾ ಚೆನ್ನಾಗಿ ಶೂಟ್ ಮಾಡಿಕೊಟ್ಟಿದ್ದಾರೆ. ಕನ್ನಡ ಪ್ರೇಕ್ಷಕರು ಇಷ್ಟಪಡುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದರು.

ಈಗಿನ ಕಾಲದ ಸಾಕಷ್ಟು ಕುಟುಂಬಗಳಲ್ಲಿ ಈ ಥರದ ಘಟನೆಗಳು ನಡೆಯುತ್ತಲೇ ಇವೆ. ಅಂಥಾ ಒಂದು ಸ್ಟ್ರಾಂಗ್ ಕಂಟೆಂಟ್ ಇಟ್ಟುಕೊಂಡು ಪರಮೇಶ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.ವಿದೇಶದಿಂದ ಬರುವ ಎಂಬ ಗೌತಂ ಎಂಬ ಯುವಕನ ಪಾತ್ರದಲ್ಲಿ ರಾಜವರ್ಧನ್ ಕಾಣಿಸಿಕೊಂಡಿದ್ದಾರೆ. ಸ್ವಂತ ಸಂಬಂಧದಲ್ಲೇ ಹುಡುಗಿಯೊಬ್ಬಳನ್ನು ಮದುವೆಯಾಗ್ತಾನೆ. ಆನಂತರ 15-20 ದಿನಗಳಲ್ಲಿ ನಡೆಯುವ ಕಥೆ ತುಂಬಾ ಇಂಟರೆಸ್ಟಿಂಗ್ ಹಾಗೂ ಇನ್ ಟೆನ್ಸಿವ್ ಆಗಿದೆ.

ನಿರ್ಮಾಪಕ ಪರಮೇಶ್ ಅವರು ಈವರೆಗೆ 9 ಚಿತ್ರಗಳನ್ನು ನಿರ್ಮಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಒಂದೊಳ್ಳೆ ಸಿನಿಮಾ ಕೊಟ್ಟಿದ್ದೇನೆ. ಜನ ಕೈ ಹಿಡಿಯುತ್ತಾರೆಂಬ ನಂಬಿಕೆ ಇಟ್ಟುಕೊಂಡಿದ್ದಾರೆ.ಚಿಕ್ಕಮಗಳೂರು, ಮಡಿಕೇರಿಯಂಥ ಸುಂದರ ಲೊಕೇಶನ್ ಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಝಂಕಾರ್ ಮ್ಯೂಸಿಕ್ ಈ ಚಿತ್ರದ ಹಾಡುಗಳನ್ನು ಹೊರತಂದಿದೆ. ಕುನಾಲ್ ಗಾಂಜಾವಾಲ, ಶ್ರೇಯಾ ಘೋಷಾಲ್ ಇತರರು ದನಿಯಾಗಿದ್ದಾರೆ. ಚಿತ್ರದಲ್ಲಿ ಗೋವಿಂದೇಗೌಡ, ಮಂಥನ, ಪ್ರಶಾಂತ್, ಸಮೀಕ್ಷಾ, ಪ್ರಿಯಾ ತರುಣ್ ಉಳಿದ ಪಾತ್ರಗಳಲ್ಲಿ ನಟಿಸಿದ್ದಾರೆ. ಮದನ್ ಹರಿಣಿ ಅವರ ನೃತ್ಯ ನಿರ್ದೇಶನ, ಥ್ರಿಲ್ಲರ್ ಮಂಜು, ಮಾಸ್ ಮಾದ ಅವರ ಸಾಹಸ ನಿರ್ದೇಶನ ಪ್ರಣಯಂ ಚಿತ್ರಕ್ಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು