LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಜನವಿರೋಧಿ ನಿರ್ಧಾರ ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ಘಟಕದ ವತಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಗೂ ಮುನ್ನಾ ಆನಂದರಾವ್ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೂ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇದೊಂದು ಜನವಿರೋಧಿ ನಿರ್ಧಾರ ಎಂದು ತೀವ್ರವಾಗಿ ಖಂಡಿಸಿ ಮಾತನಡಿದರು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದಾಗಿ ಬಡ, ಮಧ್ಯಮ ವರ್ಗದವರೆಗೆ ಸಾಕಷ್ಟು ಹೊರೆಯಾಗಲಿದೆ. ಇದರಿಂದಾಗಿ ಸಾಮಾನ್ಯ ಜನರಿಗೆ ಅನಾನುಕೂಲವಾಗಲಿದೆ. ಆಡಳಿತ ನಿರ್ವಹಿಸುವಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ವಿಫಲರಾಗಿದ್ದಾರೆ ಎಂದು ದೂರಿದ್ದಾರೆ.ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ ಈ ಸರ್ಕಾರ ಎಲ್ಲಾ ರೀತಿಯಲ್ಲೂ ವಿಫಲವಾಗಿದೆ. ಈ ಸರ್ಕಾರಕ್ಕೆ ಮಾನಮರ್ಯಾದೆಯಿಲ್ಲ.

ಜನರಿಗೆ ಮೋಸ ಮಾಡುವ ಮೂಲಕ ಗ್ಯಾರಂಟಿಯೋಜನೆಗಳಿಗೆ ಹಣ ಹೊಂದಿಸುತ್ತಿದ್ದಾರೆ. ಕಳೆದ ನಾಲ್ಕೈದು ತಿಂಗಳಿಂದ ಆಡಳಿತ ಕುಸಿದಿದೆ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.ಬೆಲೆ ಏರಿಕೆ ಮಾಡಿರುವ ಸಿದ್ದರಾಮಯ್ಯಗೆ ನಾಚಿಕೆಯಾಗಬೇಕು. ವಿಧಾನಪರಿಷತ್‍ನ ಪಕ್ಷದ ಸಚೇತಕ ಎನ್. ರವಿಕುಮಾರ್ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಸೇರಿದಂತೆ ಅನೇಕ ಪ್ರಮುಖ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು