LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬ್ರಿಟಿಷರೊಂದಿಗೆ ಆರ್‌ಎಸ್‌ಎಸ್ ಶಾಮೀಲಾಗಿದ್ದರು: ಎಂಬಿಪಿ ಗಂಭೀರ ಆರೋಪ

ವಿಜಯಪುರ : ರಾಜ್ಯದಲ್ಲಿ ಆರ್ ಎಸ್ ಎಸ್ ಪಥ ಸಂಚಲನ ಕುರಿತು ಈಗಾಗಲೇ ಭಾರಿ ಚರ್ಚೆಗೆ ಗ್ರಾಸವಾಗಿದ್ದು ಅದರಲ್ಲೂ ಚಿತ್ತಾಪುರದಲ್ಲಿ ಆರ್‌ಎಸ್ ಪಥ ಸಂಚಲನ ಕುರಿತು ಕಲ್ಬುರ್ಗಿ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ. ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರು ಆರ್ ಎಸ್ ಎಸ್ ನವರು ಬ್ರಿಟಿಷರ ಜೊತೆಗೆ ಶಾಮೀಲಾಗಿದ್ದರು ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಆರ್ ಎಸ್ ಎಸ್ ನವರು ಬ್ರಿಟಿಷರ ಜೊತೆಗೆ ಶಾಮೀಲಾಗಿದ್ದರು. ಆರ್ ಎಸ್ ಎಸ್ ಸ್ವತಂತ್ರ ಹೋರಾಟದಲ್ಲಿ ಯಾಕೆ ಪಾಲ್ಗೊಂಡಿರಲಿಲ್ಲ? ಸ್ವತಂತ್ರ ಹೋರಾಟ ಎಂಬುವುದೇ ಒಂದು ದೊಡ್ಡ ಸುನಾಮಿ. ಯಾಕೆ ಆರ್ ಎಸ್ ಎಸ್ ಆ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ? ಇವರೆಲ್ಲ ದೇಶಭಕ್ತರಂತೆ, ಇವರಿಂದ ನಾವು ಕಲಿಯಬೇಕಾ? ಯಾರು ಸ್ವತಂತ್ರ ಹೋರಾಟದಲ್ಲಿ ಭಾಗವಹಿಸಿಲ್ಲವೋ ಅವರಿಂದ ನಾವು ಈಗ ಕಲಿಯಬೇಕಿದೆ ಎಂದು ಟಾಂಗ್ ನೀಡಿದರು.

ರಾಜ್ಯದಲ್ಲಿ ಆರ್ ಎಸ್ ಎಸ್ ಗೆ ಕಡಿವಾಣ ಹಾಕುವ ವಿಚಾರವಾಗಿ ಯಾವುದೇ ಕಾರ್ಯಕ್ರಮ ಇರಲಿ, ಅನುಮತಿ ಪಡೆಯಲೇಬೇಕು. ಇದರಲ್ಲಿ ಕೇವಲ ಆರ್‌ಎಸ್‌ಎಸ್ ಸಂಘಟನೆ ಅಂತ ಬರಲ್ಲ. ಆರ್ ಎಸ್ ಎಸ್ ಆಗಿರಲಿ ದಲಿತ ಸಂಘಟನೆ ಲಿಂಗಾಯತ ಸಂಘಟನೆ ಇತರೆ ಯಾವುದೇ ಸಂಘಟನೆ ಇದ್ದರೂ ಕೂಡ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಎಲ್ಲರೂ ಅನುಮತಿ ಪಡೆದು ಕಾರ್ಯಕ್ರಮ ಮಾಡಬೇಕು ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದರು .

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು