LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಕೆನರಾ ಬ್ಯಾಂಕ್ ಸಂಸ್ಥೆಯಲ್ಲಿ ಅರ್ಥಪೂರ್ಣ ರಾಜ್ಯೋತ್ಸವ

ಬೆಂಗಳೂರು: ಅತೀ ಪುರಾತನ ಇತಿಹಾಸ ಹೊಂದಿರುವ ಕನ್ನಡ ಕೇವಲ ಭಾಷೆಯಲ್ಲ, ಸಂಸ್ಕೃತಿ, ಸಂಸ್ಕಾರ, ಕಲೆ, ಧಾರ್ಮಿಕತೆ ಪರಂಪರೆ ಜೊತೆಗೆ ಜೀವನ ಪದ್ಧತಿಯೂ ಹೊಂದಿದೆ. ಕನ್ನಡ ಸಾಹಿತ್ಯ ಸಮೃದ್ಧವಾಗಿದೆ. ಈಚಿನ ದಿನಗಳಲ್ಲಿ ಯುವಜನತೆ ಕನ್ನಡ ಸಾಹಿತ್ಯದತ್ತ ಒಲವು ತೋರುತ್ತಿರುವುದು ಹರ್ಷದಾಯಕ ಸಂಗತಿ ಎಂದು ಖ್ಯಾತ ಹಾಸ್ಯ ಲೇಖಕ ಶ್ರೀ ಎಂ ಎಸ್  ನರಸಿಂಹ ಮೂರ್ತಿಯವರು ಅಭಿಪ್ರಾಯಪಟ್ಟರು..

ಎಂ.ಎಸ್. ನರಸಿಂಹಮೂರ್ತಿಯವರು ಬೆಂಗಳೂರಿನ ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯವರು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.ಕನ್ನಡ ಭಾಷೆಗೆ ವಿಶ್ವ ಮಾನ್ಯತೆ ಇದೆ. ತನ್ನದೇಯಾದ ಭವ್ಯ ಇತಿಹಾಸವಿದೆ. ಸಾವಿರಾರು ವರ್ಷಗಳಿಂದ ಜೀವಂತಿಕೆ ಪಡೆದುಕೊಂಡು ಬಂದಿರುವ ಹೆಮ್ಮೆಯ ಕನ್ನಡ ಭಾಷೆ, ಭಾಷೆಯಾಗಿ ಉಳಿಯದೇ ನಡೆ, ನುಡಿ, ಸಂಸ್ಕೃತಿಯಲ್ಲಿ ಅದು ಬಿಂಬಿತವಾಗಿದೆ ಎಂದರು.

ಕೆನರಾ ಬ್ಯಾಂಕ್ ನ ವಿಭಾಗೀಯ ಮ್ಯಾನೇಜರ್ ಪ್ರಹ್ಲಾದ್ ರಾವ್ ರವರು ಮಾತನಾಡಿ, ಕೆನರಾ ಬ್ಯಾಂಕ್ ಕನ್ನಡ ಭಾಷೆಗೆ ಮೊದಲಿನಿಂದಲೂ ಹೆಚ್ಚಿನ ಪ್ರಾಶಸ್ತ್ಯ ವನ್ನು ಕೊಡುತ್ತಾ ಬರುತ್ತಿದೆ. ಕನ್ನಡ ಭಾಷೆಯನ್ನು ಉಳಿಸುವ ಮತ್ತು ಬೆಳಸುವ ಜವಾಬ್ದಾರಿ ನಮ್ಮ ಕೈಲಿದೆ ಎಂದರು.

ಯೂತ್ಸ್ ಫಾರ್ ಬ್ಯಾಂಕ್ ಜಾಬ್ಸ್ ನ ಅಧ್ಯಕ್ಷರಾದ ಶ್ರೀ ವೆಂಕಟೇಶ ಶೇಷಾದ್ರಿಯವರು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಬಗ್ಗೆ ಉಪಯುಕ್ತ ಮಾಹಿತಿ ನೀಡಿದರು ಮತ್ತು ಕರ್ನಾಟಕ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಸಂಸ್ಥೆಯ ನಿರ್ದೇಶಕ ಶ್ರೀ ರಾಘವೇಂದ್ರ ರವರು ಸ್ವಾಗತಿಸಿದರು ಮತ್ತು ಸಂಸ್ಥೆಯ ಸಾಧನೆಯ ಬಗ್ಗೆ ಪೂರ್ಣ ವಿವರ ನೀಡಿದರು.

ಕುಮಾರಿ ಅಕ್ಷತಾ ಕಾರ್ಯಕ್ರಮವನ್ನು ರೂಪಿಸಿದರು. ಸಂಸ್ಥೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರಾದ ಶ್ರೀ ಶ್ರವಣ್, ಚಂದನ್ ಕುಮಾರ್ , ಕರಿಬಸಪ್ಪ, ಕುಸುವ, ಸಿಂಚನಾ, ತೇಜಸ್ವಿನಿ, ಸೌಮ್ಯ ಮತ್ತು ಧನುಶ್ರೀ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪನ್ಯಾಸಕರಾದ ವೆಂಕಟೇಶ ಬಾಬು ಮತ್ತು ಅನುಶ್ರೀ ರವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು