LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಮೇರು ನಟ ಡಾ.ವಿಷ್ಣುವರ್ಧನ್ ನಮ್ಮನ್ನಗಲಿ 14 ವರ್ಷ

ಮೇರು ನಟ ಡಾ.ವಿಷ್ಣುವರ್ಧನ್ ಅವರು ನಮ್ಮನ್ನಗಲಿ 14 ವರ್ಷಗಳಾದವು. ಆದರೆ ಇಂದಿಗೂ ಅವರ ಅಂತ್ಯಸಂಸ್ಕಾರಗೊಂಡ ಜಾಗವನ್ನು ಅಭಿವೃದ್ದಿಪಡಿಸುವ ಕೆಲಸವನ್ನು ಯಾವುದೇ ಸರ್ಕಾರ ಮಾಡಿಲ್ಲ. ವಾಸ್ತವದಲ್ಲಿ ಹಿರಿಯ ಕಲಾವಿದ ಬಾಲಕೃಷ್ಣ ಅವರಿಗೆ ಸರ್ಕಾರ ಅನುದಾನವಾಗಿ ನೀಡಿರುವ ಜಾಗವೇ ಅಭಿಮಾನ್ ಸ್ಟುಡಿಯೋ.

ಕನ್ನಡಿಗರು ಚಿತ್ರರಂಗದ ಕೆಲಸಗಳಿಗೆ ಮದರಾಸಿಗೆ ಹೋಗುವುದನ್ನು ತಪ್ಪಿಸಬೇಕು ಎಂದು ಕನಸು ಹೊತ್ತು ಬಾಲಣ್ಣನವರು ಸರ್ಕಾರದ ಬಳಿ ಇಪ್ಪತ್ತು ಎಕರೆ ಜಾಗವನ್ನು 99 ವರುಷಕ್ಕೆ ಅನುದಾನವಾಗಿ ಪಡೆದು ಅಭಿಮಾನ್ ಸ್ಟುಡಿಯೋ ನಿರ್ಮಿಸಿದ್ದರು. ಆದರೆ ಅವರ ಅಗಲಿಕೆಯ ನಂತರ 2004 ರಲ್ಲಿ ಅವರ ಮಕ್ಕಳು ಅದರಲ್ಲಿ ಹತ್ತು ಎಕರೆ ಜಾಗವನ್ನು ಮಾರಾಟ ಮಾಡಿ, ಸರ್ಕಾರಿ ಜಮೀನನ್ನು ದುರುಪಯೋಗಪಡಿಸಿಕೊಂಡಿದ್ದರು. ಈ ಕಾರಣದಿಂದ ಹಿಂದಿನ ಜಿಲ್ಲಾಧಿಕಾರಿ ಶಂಕರ್ ಅವರು ಅಭಿಮಾನ್ ಸ್ಟುಡಿಯೋ ಮುಟ್ಟುಗೋಲಿಗೆ ಆದೇಶಿಸಿದ್ದರು. ಆಗ ಬಾಲಕೃಷ್ಣ ಅವರ ಕುಟುಂಬಸ್ಥರು ನ್ಯಾಯಾಲಯದಲ್ಲಿ ತಡೆಯಾಜ್ಞೆಯನ್ನು ತಂದಿದ್ದರು.

ಈ ನಡುವೆ, ಡಾ.ವಿಷ್ಣುವರ್ಧನ್ ಅವರ ಸ್ಮಾರಕವು ಮೈಸೂರಿಗೆ ಸ್ಥಳಾಂತರಗೊಂಡಿತು. ಆದರೆ ಅಭಿಮಾನಿಗಳು ಸ್ಮಾರಕ ಎಲ್ಲೇ ಆದರೂ ಅಂತ್ಯಸಂಸ್ಕಾರಗೊಂಡ ಜಾಗದಲ್ಲಿಯೇ ಪುಣ್ಯಭೂಮಿ ಇರಬೇಕು ಎಂದು ಹಠವಿಡಿದು, ಪ್ರತಿವರ್ಷದ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆಯನ್ನು ಅತ್ಯಂತ ಅದ್ದೂರಿಯಾಗಿ ಅಭಿಮಾನ್ ಸ್ಟುಡಿಯೋದ ಡಾ.ವಿಷ್ಣು ಪುಣ್ಯಭೂಮಿಯಲ್ಲಿ ಆಚರಿಸುತ್ತಾ ಬರುತ್ತಿದ್ದಾರೆ. ಆದರೆ, ಈಗ ಅಭಿಮಾನ್ ಸ್ಟುಡಿಯೋದ ಮಾಲೀಕರು ಅಭಿಮಾನಿಗಳಿಗೆ ಒಳಪ್ರವೇಶಿಸಲು ನಿರ್ಬಂಧಗಳನ್ನು ವಿಧಿಸುವುದರ ಜೊತೆಗೆ, ಪ್ರತಿವರ್ಷದ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆಗೆ ಹಲವಾರು ತೊಂದರೆಗಳನ್ನು ನೀಡುತ್ತಿದ್ದಾರೆ.

ಈ ಕುರಿತಾಗಿ ಮಾನ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವಶಿವರಾಜ್ ತಂಗಡಗಿ ಅವರನ್ನು ಭೇಟಿಮಾಡಿ ಅಹವಾಲನ್ನು ಸಲ್ಲಿಸಲಾಗಿದೆ. ಒಬ್ಬೇ ನಟನಿಗೆ ಎರಡೆರಡು ಕಡೆ ಸ್ಮಾರಕ, ಪುಣ್ಯಭೂಮಿ ಮಾಡುವುದು ಸರ್ಕಾರಕ್ಕೆ ಕಷ್ಟವಾದರೆ, ಆ ಜಮೀನಿಗೆ ತಗಲುವ ಮತ್ತು ಪುಣ್ಯಭೂಮಿ ಅಭಿವೃದ್ಧಿಗೆ ಬೇಕಾಗುವ ಹಣವನ್ನು ಅಭಿಮಾನಿಗಳೇ ನೀಡುವುದಾಗಿ ತಿಳಿಸಿರುತ್ತೇವೆ.

ಆದರೂ ಯಾವುದೇ ಸೂಕ್ತಪ್ರತಿಕ್ರಿಯೆಗಳು ಅವರಿಂದ ಬರದೇ ಇರುವುದರಿಂದ ಇದೇ ಡಿಸೆಂಬರ್ 17 ರಂದು ಡಾ.ವಿಷ್ಣುವರ್ಧನ್ ಅಭಿಮಾನಿ ಸಂಘಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆಯನ್ನು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೆಳಿಗ್ಗೆ ಹತ್ತರಿಂದ ಸಂಜೆ ಆರು ಗಂಟೆ ತನಕ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ನಾಡಿನ ಎಲ್ಲಾ ಕನ್ನಡಪರ ಸಂಘಟನೆಗಳು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕಲಾವಿದರ ಸಂಘ ಆದಿಯಾಗಿ ಡಾ.ವಿಷ್ಣುವರ್ಧನ್ ಅವರ ಒಡನಾಡಿಗಳೆಲ್ಲರೂ ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಅಂದು ಸುಮಾರು ಐವತ್ತು ಸಾವಿರ ಜನ ಸೇರುವ ನಿರೀಕ್ಷೆ ಇದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು