LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

WFI ಚುನಾವಣೆ ಬೆನ್ನಲ್ಲೇ ಸಾಕ್ಷಿ ಮಲಿಕ್ ಕುಸ್ತಿ ತೊರೆಯುವ ಸಂದೇಶ...!

ನವದೆಹಲಿ: ರಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು ಗುರುವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಭಾವನಾತ್ಮಕವಾಗಿ ಮಾತನಾಡಿ ಕುಸ್ತಿಯನ್ನು ತೊರೆಯುವ ಹೇಳಿಕೆಯನ್ನು ನೀಡಿದ್ದಾರೆ.

ಗುರುವಾರ ನಡೆದ ಕುಸ್ತಿ ಫೆಡರೇಷನ್ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಕುಟುಂಬ ಮತ್ತು ಆಪ್ತರಿಗೆ ಅವಕಾಶ ನೀಡುವುದಿಲ್ಲ ಎಂದು ಕ್ರೀಡಾ ಸಚಿವಾಲಯವು ಕುಸ್ತಿಪಟುಗಳಿಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಉತ್ತರ ಪ್ರದೇಶ ಕುಸ್ತಿ ಫೆಡರೇಶನ್‍ನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಸಂಜಯ್ ಸಿಂಗ್ ಅವರು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಬಲಗೈ ಬಂಟರಾಗಿದ್ದರು ಎಂದು ಎಲ್ಲರಿಗೂ ಗೊತ್ತಿರುವ ವಿಚಾರ ಹೀಗಿದ್ದರೂ ಅವರನ್ನು ಚುನಾವಣೆಗೆ ನಿಲ್ಲಿಸಿದೆ ಎಂದು ಆರೋಪಿಸಿದರು.

ಈ ಕಾರಣಕ್ಕೆ ನಾನು ಕುಸ್ತಿಯನ್ನು ತ್ಯಜಿಸುವುದಾಗಿ ಟೋಕಿಯೊ ಒಲಿಂಪಿಕ್ಸ್‍ನಲ್ಲಿ ಪದಕ ವಿಜೇತೆ ಬಜರಂಗ್ ಪುನಿಯಾ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಾಕ್ಷಿ ಮಲಿಕ್ ಭಾವನಾತ್ಮಕವಾಗಿ ಹೇಳಿಕೆಯನ್ನು ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು