LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪಾಕ್‍ನಲ್ಲಿ ಠಾಣೆ ಮೇಲೆ ಉಗ್ರರ ದಾಳಿ 10 ಪೊಲೀಸರು ದುರ್ಮರಣ

ಇಸ್ಲಾಮಾಬಾದ್: ಪಾಕಿಸ್ತಾನದ ದೇರಾ ಇಸ್ಮಾಯಿಲ್ ಖಾನ್‍ನಲ್ಲಿರುವ ಚೋಡ್ವಾನ್ ಪೊಲೀಸ್ ಠಾಣೆಯಲ್ಲಿ ತಡರಾತ್ರಿ ನಡೆದ ಉಗ್ರರ ದಾಳಿಯಲ್ಲಿ 10 ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಮತ್ತು 6 ಮಂದಿ ಗಾಯಗೊಂಡಿದ್ದಾರೆ.

ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಉಗ್ರರು ಪೊಲೀಸ್ ಠಾಣೆಯ ಮೇಲೆ ಸ್ನೈಪರ್‍ಗಳ ಗುಂಡಿನ ದಾಳಿ ನಡೆಸಿ ನಂತರ ಕಟ್ಟಡಕ್ಕೆ ಪ್ರವೇಶಿಸಿದ್ದರು.ಕಟ್ಟಡದೊಳಗೆ ಪ್ರವೇಶಿಸಿದ ನಂತರ ಭಯೋತ್ಪಾದಕರು ಹ್ಯಾಂಡ್ ಗ್ರೆನೇಡ್‍ಗಳನ್ನು ಬಳಸಿದ್ದಾರೆ.

ಪೊಲೀಸ್ ಠಾಣೆಯಲ್ಲಿ ನಡೆದ ಉಗ್ರರ ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬುದೂ ಸ್ಪಷ್ಟವಾಗಿಲ್ಲ. ಫೆಬ್ರವರಿ 8 ರಂದು ದೇಶವು ರಾಷ್ಟ್ರೀಯ ಚುನಾವಣೆಗೆ ಹೋಗುವ ಮೂರು ದಿನಗಳ ಮೊದಲು ಈ ದಾಳಿ ನಡೆದಿದೆ.ಮೃತಪಟ್ಟ ಪೊಲೀಸರು ಚುನಾವಣೆ ಹಿನ್ನೆಲೆಯಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST