ಚಿತ್ರದುರ್ಗ: ಜಿಲ್ಲೆಯಲ್ಲಿ ಭೀಕರ ಬರಗಾಲ ಆವರಿಸಿದ್ದು, ಸಂಕಷ್ಟದಲ್ಲಿ ರುವ ರೈತರಿಗೆ ಬೆಳೆ ನಷ್ಟ ಪರಿಹಾರ ಹಾಗೂ ಬೆಳೆ ವಿಮೆ ಹಣವನ್ನು ತ್ವರಿತವಾಗಿ ಬಿಡುಗಡೆ ಮಾಡಲು ಅಧಿಕಾರಿಗಳು ಕೂಡಲೇ ಕ್ರಮವಹಿಸಬೇಕು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಸೂಚಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ತ್ರೆöÊಮಾಸಿಕ ಕೆಡಿಪಿ ಹಾಗೂ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರ ಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ. ಜಿಲ್ಲೆಯಲ್ಲಿ ಸಂಭವಿಸಿರುವ ಒಟ್ಟು 1,923 ಕೋಟಿ ರೂ. ಕೃಷಿ ಹಾಗೂ ತೋಟಗಾರಿಕೆ ಬೆಳೆ ನಷ್ಟಕ್ಕೆ ಎದುರಾಗಿ, ಬೆಳೆ ವಿಮೆ ಯೋಜನೆಯಡಿ230 ಕೋಟಿ ರೂ. ಹಾಗೂ ಎನ್‌ಡಿಆರೆಫ್‌ನಿಂದ227 ಕೋಟಿ ರೂ. ಸೇರಿದಂತೆ ಒಟ್ಟು 457 ಕೋಟಿ ರೂ. ಬಿಡುಗಡೆಯಾಗಬೇಕಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.2027ರ ಜನವರಿ 31 ರೊಳಗೆ ಹೊಸದುರ್ಗ ಬಹುಗ್ರಾಮ ಕುಡಿಯು ವ ನೀರು ಯೋಜನೆ ಹಾಗೂ 2027ರ ಜೂನ್ ಅಂತ್ಯದೊಳಗೆ ಚಿತ್ರ ದುರ್ಗ ಹಾಗೂ ಹಿರಿಯೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಪೂರ್ಣಗೊಳಿಸಬೇಕು. ಜಿಲ್ಲೆಯಲ್ಲಿ ದುರಸ್ತಿಯಲ್ಲಿ ರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಕ್ಷಣವೇ ಕಾರ್ಯಾರಂಭಗೊಳಿಸಬೇಕು ಎಂದು ಸಚಿವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರರಿಗೆ ಸ ಚಿವರು ಸೂಚನೆ ನೀಡಿದರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಗ್ರಾಮಗಳಿಗೆ ತಕ್ಷಣವೇ ಪರಿಹಾರ ಕಲ್ಪಿಸಬೇ ಕು. ಒಬೇನಹಳ್ಳಿ, ಉಪ್ಪನಾಯಕನಹಳ್ಳಿ ಸೇರಿದಂತೆ ನೀರಿನ ತೀವ್ರ ಅಭಾವವಿರುವ ಗ್ರಾಮಗಳಲ್ಲಿ ಕೊಳವೆಬಾವಿ ಕೊರೆಸಿ, ಅಲ್ಲಿಗೆ ತಕ್ಷಣವೇ ನಿರಂತರ ಜ್ಯೋತಿ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರು ಪೂರೈಸಬೇಕು. ಬೆಸ್ಕಾಂ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು. ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಅಧಿಕಾರಿಗಳು ಖುದ್ದು ಭೇಟಿ
ನೀಡಿ ಪರಿಸ್ಥಿತಿ ಅವಲೋಕಿಸಬೇಕು. ಸಬೂಬು ಹೇಳುವುದನ್ನು ಬಿಟ್ಟು, ಜನರಿಗೆ ಕುಡಿಯುವ ನೀರು ಒದಗಿಸಲು ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಾಕೀತು ಮಾಡಿದರು.ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ತಿಪ್ಪೇಸ್ವಾಮಿ ಮಾತನಾಡಿ, ಜಿಲ್ಲೆಯ 22 ಹೋಬಳಿಗಳ ಪೈಕಿ ಈಗಾಗಲೇ 10 ಕಡೆ ಗೋಶಾಲೆಗಳನ್ನು ಆರಂಭಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಉಳಿದ 12 ಕಡೆಗಳಲ್ಲೂ ಮೂಲ ಸೌಕರ್ಯ ಕಲ್ಪಿಸಿ ತಕ್ಷಣವೇ ಗೋಶಾಲೆಗಳನ್ನು ಪ್ರಾರಂಭಿಸಬೇಕು. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವುದರಿಂದ ಮೇವಿನ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಆಗಬಾರದು ಎಂದು ಸಚಿವರು ತಿಳಿಸಿದರು.ಬರಗಾಲ ಆವರಿಸಿರುವುದರಿಂದ ಜಿಲ್ಲೆಯ ಕುರಿ ಮತ್ತು ಮೇಕೆ ಸಾಕಾಣಿಕೆದಾರರು ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂದುಳಿದ ವರ್ಗಗಳ ಜನರೇ ಹೆಚ್ಚಾಗಿ ಕುರಿ ಸಾಕಾಣಿಕೆಯನ್ನು ನಂಬಿ ಬದುಕುತ್ತಿದ್ದಾರೆ. ಸರ್ಕಾರದ ಮಾರ್ಗಸೂಚಿಯಂತೆ ಸದ್ಯ ದನಕರುಗಳಿಗೆ ಮಾತ್ರ ಗೋಶಾಲೆಗಳಲ್ಲಿ ಅವಕಾಶವಿದೆ. ಆದರೆ, ಕುರಿ ಮತ್ತು ಮೇಕೆಗಳಿಗೂ ಮೇವು ಒದಗಿಸುವ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.ಡಿಸೆಂಬರ್ 15ರೊಳಗೆ ಜಿಲ್ಲೆಯ ಎಲ್ಲಾ ರಸ್ತೆ ಗುಂಡಿಗಳು ಮುಚ್ಚಬೇಕು: ಜಿಲ್ಲೆಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿ ವಿಳಂಬ ವಾಗುತ್ತಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಆಗುತ್ತಿದೆ. ಅಪಘಾತಗಳು ಸಂಭವಿಸುತ್ತಿವೆ. ಡಿಸೆಂಬರ್ 15ರೊಳಗೆ ಜಿಲ್ಲೆಯ ಎಲ್ಲಾ ರಸ್ತೆಗಳ ಗುಂಡಿಗಳನ್ನು ಸಂಪೂರ್ಣವಾಗಿ ಮುಚ್ಚಬೇಕು. ತಪ್ಪಿದಲ್ಲಿ ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಸಚಿವ ಟಿ.ರಘುಮೂರ್ತಿ ಎಚ್ಚರಿಕೆ ನೀಡಿದ ರು.ಕಳೆದ ಆಗಸ್ಟ್ ತಿಂಗಳಲ್ಲಿ ನಡೆದ ಸಭೆಯಲ್ಲೇ ಸೆಪ್ಟೆಂಬರ್ ಅಂತ್ಯ ದೊಳಗೆ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಸೂಚಿಸಲಾಗಿತ್ತು. ಆ ದರೆ, ನವೆಂಬರ್ ಕಳೆಯುತ್ತಿದ್ದರೂ ನಿರೀಕ್ಷಿತ ಪ್ರಗತಿಯಾಗಿಲ್ಲ. ಜಿಲ್ಲೆ ಯಲ್ಲಿರುವ ಒಟ್ಟು 2,300 ಕಿ.ಮೀ.ರಸ್ತೆಯಲ್ಲಿ ಕೇವಲ 700 ಕಿ. ಮೀ. ಮಾತ್ರ ಗುಂಡಿ ಮುಚ್ಚಲಾಗಿದೆ ಎಂದರೆ ಹೇಗೆ, ಇನ್ನುಳಿದ ಕಾಮಗಾರಿಯನ್ನು ಯಾವಾಗ ಮುಗಿಸುತ್ತೀರಿ ಎಂದು ಎಂಜಿನಿಯರ್‌ಗಳÀನ್ನು ತರಾಟೆಗೆ ತೆಗೆದುಕೊಂಡರು. ಇಲಾಖೆ ಪ್ರಗತಿ ವರದಿ ಕನ್ನಡದಲ್ಲಿರಲಿ: ರಾಜ್ಯದಲ್ಲಿ ಕನ್ನಡವೇ ಆಡ ಳಿತ ಭಾಷೆಯಾಗಿರಬೇಕು ಎಂಬುದು ಸರ್ಕಾರದ ಸ್ಪಷ್ಟ ನಿಲುವು. ಬಹುತೇಕ ಅಧಿಕಾರಿಗಳು ಕನ್ನಡಿಗರೇ ಆಗಿದ್ದು, ಕನ್ನಡ ಮಾಧ್ಯಮದಲ್ಲೇ ಓದಿ ಬಂದವರಾಗಿದ್ದರೂ ಕೆಡಿಪಿ ಸಭೆಗೆ ಇಂಗ್ಲಿಷ್‌ನಲ್ಲಿ ಪ್ರಗತಿ ವರದಿ ಸಲ್ಲಿಸಿರುವುದು ಸರಿಯಲ್ಲ. ಮುಂದಿನ ಸಭೆಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲೇ ಮಾಹಿತಿ ನೀಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಪ್ರೊ.ಎ.ಬಿ.ರಾಮಚಂದ್ರಪ್ಪ ಹೇಳಿದರು.ಹಲವು ಇಲಾಖೆಗಳು ಇಂಗ್ಲಿಷ್‌ನಲ್ಲಿ ಮಾಹಿತಿ ನೀಡಿರುವುದನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದ ಅವರು, ಜಿಲ್ಲಾ ವಿಪತ್ತು ನಿರ್ವಹ ಣೆ, ಜಲಾಶಯಗಳ ನೀರಿನ ಲಭ್ಯತೆ, ಗ್ರಾಮೀಣ ಕುಡಿಯುವ ನೀರು, ಪಶುಪಾಲನೆ, ಕೃಷಿ, ಆರೋಗ್ಯ, ರಾಷ್ಟಿçಯ ಹೆದ್ದಾರಿ, ನಗರಾಭಿವೃದ್ಧಿ ಹಾಗೂ ತೋಟಗಾರಿಕೆ ಇಲಾಖೆಗಳು ಅರ್ಧ ಕನ್ನಡ, ಅರ್ಧಇಂಗ್ಲಿಷ್‌ನಲ್ಲಿ ವರದಿ ನೀಡಿವೆ. ಕನಿಷ್ಠ ಊರುಗಳ ಹೆಸರನ್ನೂ ಇಂಗ್ಲಿಷ್‌ನಲ್ಲಿ ಬರೆದಿದ್ದೀರಿ. ಇದು ನಮ್ಮ ಭಾಷೆ ಮತ್ತು ಸಂಸ್ಕೃತಿಗೆ ತೋರುವ ಅಗೌರವ ಎಂದರು.ಈ ಸಭೆಯಲ್ಲಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಎನ್.ವೈ. ಗೋಪಾಲಕೃಷ್ಣ, ಡಾ.ಎಂ.ಚಂದ್ರಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಜಿಲ್ಲಾಧಿಕಾರಿ ಎಸ್.ರಮ್ಯಾ, ಜಿಪಂ ಸಿಇಒ ಡಾ.ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.