LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ನಾಳೆ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ: ಸಚಿವ ಕೆ.ವೆಂಕಟೇಶ್ ಮನವಿ

ಚಾಮರಾಜನಗರ: ಜಿಲ್ಲೆಯಾದ್ಯಂತ ಮಾರ್ಚ್ 3ರಂದು ಪಲ್ಸ್ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಆಗ ತಾನೆ ಹುಟ್ಟಿದ ಮಗುವಿನಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ಲಸಿಕೆ ಹಾಕಿಸುವಂತೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಮನವಿ ಮಾಡಿದ್ದಾರೆ.

ಮಾರ್ಚ್ 3ರಂದು ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಬೂತ್‍ಗಳಲ್ಲಿ ಪೋಲಿಯೋ ಲಸಿಕೆ ನೀಡಲಾಗುತ್ತದೆ. ಬೂತ್ ಕಾರ್ಯಕ್ರಮ ನಂತರದ ಮೊದಲ ಎರಡು ದಿನಗಳು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಹಾಗೂ ಮೂರನೇ ಹಾಗೂ ನಾಲ್ಕನೇ ದಿನ ಪಟ್ಟಣ ಪ್ರದೇಶದಲ್ಲಿ ಮಾತ್ರ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಹಾಕಲಾಗುತ್ತದೆ. ಪಟ್ಟಣ ಪ್ರದೇಶದಲ್ಲಿ ಒಟ್ಟು 41694 ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 234046 ಮನೆಗಳಿಗೆ ಭೇಟಿ ನೀಡಲಿದ್ದು, ಒಟ್ಟು ಮನೆಗಳ ಭೇಟಿ ಸಂಖ್ಯೆ 275740 ಆಗಿದೆ.

ಜಿಲ್ಲೆಯಲ್ಲಿ ಒಟ್ಟು 612 ಪಲ್ಸ್ ಪೋಲಿಯೋ ಬೂತುಗಳನ್ನು ತೆರೆಯಲಾಗಿದೆ. ಇದರಲ್ಲಿ ನಗರ ಪ್ರದೇಶಗಳಲ್ಲಿ 93 ಬೂತ್‍ಗಳು ಮತ್ತು ಗ್ರಾಮೀಣ ಪ್ರದೇಶದಲ್ಲಿ 519 ಬೂತ್‍ಗಳು ಕಾರ್ಯನಿರ್ವ ಹಿಸಲಿವೆ. ಚಾಮರಾಜನಗರ ತಾಲ್ಲೂಕಿನಲ್ಲಿ 189, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 156, ಕೊಳ್ಳೇಗಾಲ ತಾಲ್ಲೂಕು 90, ಹನೂರು ತಾಲ್ಲೂಕು 133 ಹಾಗೂ ಯಳಂದೂರು ತಾಲ್ಲೂಕಿನಲ್ಲಿ 44 ಬೂತ್‍ಗಳನ್ನು ತೆರೆಯಲಾಗಿದೆ. ಒಟ್ಟು 22 ಟ್ರ್ಯಾನ್ಸಿಟ್ ಹಾಗೂ 8 ಮೊಬೈಲ್ ತಂಡಗಳನ್ನು ರಚಿಸಲಾಗಿದೆ. ಮೇಲ್ವಿಚಾರಣೆಗಾಗಿ ಜಿಲ್ಲೆಯಾದ್ಯಂತ 128 ಮೇಲ್ವಿಚಾರಕರನ್ನು ಹಾಗೂ 2448 ಲಸಿಕಾ ಕಾರ್ಯಕರ್ತರನ್ನು ನಿಯೋಜಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 65835 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಅಂದಾಜು ಮಾಡಲಾಗಿದೆ. ಚಾಮರಾಜನಗರ ತಾಲೂಕಿನಲ್ಲಿ 22310, ಗುಂಡ್ಲುಪೇಟೆ ತಾಲೂಕಿನಲ್ಲಿ 13216, ಕೊಳ್ಳೇಗಾಲ ತಾಲೂಕಿನಲ್ಲಿ 10856, ಹನೂರು ತಾಲೂಕಿನಲ್ಲಿ 13597 ಹಾಗೂ ಯಳಂದೂರು ತಾಲೂಕಿನ 5856 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಗುರಿ ಹೊಂದಲಾಗಿದೆ.

ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಭಾರತದಲ್ಲಿ 1995 ರಿಂದಲೂ ಒಂದು ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ನಡೆಸಲಾಗುತ್ತಿದೆ. ಆಗತಾನೆ ಹುಟ್ಟಿದ ಮಗುವಿನಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಈ ಹಿಂದೆ ಎಷ್ಟೇ ಬಾರಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿದ್ದರೂ ಸಹ ಮಾರ್ಚ್ 3ರ ಭಾನುವಾರದಂದು ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು.

ಎಲ್ಲಾ ತಂದೆ ತಾಯಿಯರು, ಪೋಷಕರು, ಚುನಾಯಿತ ಪ್ರತಿನಿಧಿಗಳು, ಧಾರ್ಮಿಕ ಮತ್ತು ಸಮುದಾಯದ ಮುಖಂಡರು, ಎಲ್ಲಾ ಇಲಾಖೆ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಘ ಸಂಸ್ಥೆಯ ಪದಾಧಿಕಾರಿಗಳು, ತಮ್ಮ ಸಹಾಯ ಮತ್ತು ಸಹಕಾರ ನೀಡಿ ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು