LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಸಂವಿಧಾನ ಜಾಗೃತಿ ಜಾಥಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಸಚಿವ ಕೆ.ಹೆಚ್ ಮುನಿಯಪ್ಪ

ದೇವನಹಳ್ಳಿ: ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರೈಸುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ ಯಶಸ್ವಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದಲ್ಲಿ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮದ ಅನುಷ್ಠಾನ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

75ನೇ ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸಂವಿಧಾನದ ಆಶಯಗಳನ್ನು ಎಲ್ಲರಿಗೂ ತಲುಪಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಜಾಗೃತಿ ಜಾಥದ ಸ್ಥಬ್ಧ ಚಿತ್ರ ವು ಜನವರಿ 26 ರಿಂದ ಫೆಬ್ರವರಿ 23 ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದೆ.

ಜಾಗೃತಿ ಜಾಥದ ಸ್ಥಬ್ಧ ಚಿತ್ರ ಮೆರವಣಿಗೆಯು ಸುಗಮವಾಗಿ ಸಂಚರಿಸಲು ಜಿಲ್ಲಾಮಟ್ಟದ, ತಾಲೂಕು ಮಟ್ಟದಲ್ಲಿ ಪ್ರಗತಿ ಚಿಂತಕರು, ಸಮುದಾಯ ಮುಖಂಡರು, ಸಾಮಾಜಿಕ ಕಾರ್ಯಕರ್ತರನ್ನೊಳಗೊಂಡ ಸಮಿತಿ ರಚಿಸಬೇಕು, ಸಂವಿಧಾನ ಆಶಯಗಳನ್ನು ಒಳಗೊಂಡ ಸ್ಥಬ್ಧಚಿತ್ರ ಸಿದ್ದಪಡಿಸಬೇಕು. ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಸಂವಿಧಾನ ಜಾಗೃತಿ ಜಾಥ ನಡೆಯಬೇಕು.

ಜಾಗೃತಿ ಜಾಥ ಸಂಚರಿಸಲಿರುವ ಆಯಾ ವ್ಯಾಪ್ತಿಯಲ್ಲಿ ಪಂಚಾಯಿತಿ ಅಧ್ಯಕ್ಷರು, ಮುಖಂಡರು, ಅಧಿಕಾರಿಗಳು ಶಿಷ್ಟಾಚಾರದಂತೆ ಸಂವಿಧಾನ ಜಾಗೃತಿ ಜಾಥವನ್ನು ಸ್ವಾಗತಿಸಬೇಕು, ಹೀಗಾಗಿ ಸಂಚರಿಸುವ ಮಾರ್ಗ ವಿವರಣೆಯನ್ನು ಮೊದಲೇ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಿರಬೇಕು. ಒಟ್ಟಾರೆ ಯಾಗಿ ಯಾವುದೇ ಗೊಂದಲಗಳಿಲ್ಲದೇ ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಉಪಕಾರ್ಯದರ್ಶಿ ಟಿ.ಕೆ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಮುದಾಯ ಮುಖಂಡರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು