LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Udupi

`ಕೈ’ಗೆ ಹೆಚ್ಚಿನ ಸ್ಥಾನ! ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸದ ಮಾತು

ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲೀಗ ಬಿಜೆಪಿಯ 25 ಸಂಸದರಿದ್ದರೂ ಕರ್ನಾಟಕದ ಯಾವುದೇ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿಲ್ಲ. ರಾಜ್ಯದ ಜನರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ವಿಶ್ವಾಸವಿದೆ ಎಂದಿದ್ದಾರೆ.

ರಾಮಮಂದಿರ ಕುರಿತು ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ನಾನು ದೇಣಿಗೆ ನೀಡಿದ್ದೇನೆ. ರಾಮ- ಕೃಷ್ಣ, ಪರಮೇಶ್ವರನ ಮೇಲೆ ನನಗೆ ಬಹಳ ಭಕ್ತಿ ಇದೆ. ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುವೆ ಎಂದು ತಿಳಿಸಿದ್ದಾರೆ.
ನಾನು ನಮ್ಮ ಸಂಸ್ಕೃತಿ, ಭಕ್ತಿಯನ್ನು ಆಚರಿಸುತ್ತೇನೆ.

ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡಲ್ಲ. ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ. ನಾನು ದೈವೀ ಭಕ್ತಳು ಎಂದು ಪದೇ ಪದೇ ಹೇಳುತ್ತೇನೆ ಎಂದಿದ್ದಾರೆ. ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗಿಯೇ ಹೋಗುತ್ತೇನೆ. ರಾಮ ಮಂದಿರ ಅವರದ್ದೂ ಅಲ್ಲ ನಮ್ಮದೂ ಅಲ್ಲ. ಅಯೋಧ್ಯಾ ರಾಮ ಮಂದಿರ 140 ಕೋಟಿ ಜನರದ್ದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರ ನೀಡುತ್ತಿದ್ದು, ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದಿರುವ ಅವರು, ಶ್ರೀಮಠದ ಪರ್ಯಾಯಕ್ಕೆ ಮುಖ್ಯಮಂತ್ರಿಯವರು 10 ಕೋಟಿ ರೂಪಾಯಿ ಬಿಡುಗಡೆ ಮಾಡಲು ಕ್ರಮ ವಹಿಸಿದ್ದಾರೆ.

ಇದೇ ಮೊದಲ ಬಾರಿಗೆ ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕುಟುಂಬ ಸಮೇತ ಪಾಲ್ಗೊಳ್ಳುತ್ತಿರುವೆ. ಪರ್ಯಾಯ ಮಹೋತ್ಸವಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.ವಿವಿಧ ಕಾರಣಗಳಿಂದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ಪರ್ಯಾಯ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಕಳೆದ ನಾಲ್ಕೂವರೆ ವರ್ಷಗಳಿಂದ ಸುದ್ದಿಯಲ್ಲಿರದ ಬಿಜೆಪಿ ಸಂಸದ ಅನಂತಕುಮಾರ ಹೆಗಡೆಯವರು ಚುನಾವಣೆ ಸಮೀಪಿಸುತ್ತಿರುವಂತೆ ದಿಢೀರ್ ಮುನ್ನೆಲೆಗೆ ಬಂದಿದ್ದಾರೆ. ಅವರಿಗೆ ಕಾಂಗ್ರೆಸ್ ಮತ್ತು ಮುಖ್ಯಮಂತ್ರಿಯವರನ್ನು ಟೀಕಿಸುವ ಯಾವುದೇ ನೈತಿಕತೆ ಇಲ್ಲ ಎಂದು ಇದೇ ಸಂದರ್ಭದಲ್ಲಿ ಹೆಗಡೆ ಬಗ್ಗೆ ವಾಗ್ದಾಳಿ ನಡೆಸಿದರು.

ಬೆಳಗಾವಿಯ ಖಾನಾಪುರ ಕೂಡ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಆದರೆ, ಈವರೆಗೆ ಒಮ್ಮೆಯೂ ಸಂಸದರು ಭೇಟಿ ನೀಡಿಲ್ಲ. ಜನರ ಸಮಸ್ಯೆಗಳನ್ನು ಆಲಿಸಿಲ್ಲ. ಆದರೀಗ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುತ್ತ ಮುನ್ನಲೆಗೆ ಬರುತ್ತಿದ್ದಾರೆ. ಸಂಸದರಾಗಿ ಜವಾಬ್ದಾರಿ ಸ್ಥಾನದಲ್ಲಿರುವವರು ಜವಾಬ್ದಾರಿಯುತವಾಗಿ ಮಾತನಾಡುವುದೂ ಮುಖ್ಯ. ಮೊದಲಿನಿಂದಲೂ ಇಂತಹ ಹೇಳಿಕೆಗಳನ್ನು ನೀಡುವುದೇ ಅವರ ಕೆಲಸವಾಗಿದೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು