LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಚುನಾವಣಾ ಬಾಂಡ್‍ನಿಂದ ಮೋದಿ ಮುಖವಾಡ ಕಳಚಿ ಬಿದ್ದಿದೆ ಸಚಿವ ಎಂ.ಬಿ ಪಾಟೀಲ

ಬೆಂಗಳೂರು: ಚುನಾವಣಾ ಬಾಂಡ್ ವಿಷಯದಲ್ಲಿ ಸುಪ್ರೀಂಕೋರ್ಟ್ ತೆಗೆದುಕೊಂಡ ನಿರ್ಣಯದಿಂದ ಮೋದಿ ಅವರ ನೈತಿಕತೆಯ ಮುಖವಾಡ ಕಳಚಿಬಿದ್ದಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಪ್ರಹಾರ ಮಾಡಿದರು.ಮೋದಿಯವರು "ನಾನೂ ತಿನ್ನುವುದಿಲ್ಲ, ತಿನ್ನುವುದಕ್ಕೂ ಬಿಡುವುದಿಲ್ಲ" ಎಂದು ಹೇಳಿಕೊಳ್ಳುತ್ತಾ ಹುಸಿ ವರ್ಚಸ್ಸು ಸೃಷ್ಟಿಸಿಕೊಂಡಿದ್ದರು.

ಆ ಹುಸಿ ವರ್ಚಸ್ಸಿಗೆ ಈಗ ಸರಿಯಾದ ಹೊಡೆತ ಬಿದ್ದಿದೆ ಎಂದು ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದರು.
ಹೆಚ್ಚಿನ ಸಂದರ್ಭಗಳಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಳಿಗೆ ಒಳಗಾದ ನಂತರ ಅಥವಾ ಗುತ್ತಿಗೆಗಳನ್ನು ಪಡೆದ ನಂತರ ಬಿಜೆಪಿ ಹೆಸರಲ್ಲಿ ಚುನಾವಣಾ ಬಾಂಡ್ ತೆಗೆದುಕೊಂಡಿರುವುದು ಬಹಿರಂಗಗೊಂಡಿದೆ.

ಇದರಿಂದಾಗಿ, ಭ್ರಷ್ಟಾಚಾರ, ನೈತಿಕತೆಯ ಬಗ್ಗೆ ಪ್ರಸ್ತಾಪಿಸುತ್ತಿದ್ದ ಮೋದಿ ಅವರ ನಿಜವಾದ ಬಣ್ಣ ಏನು ಎಂಬುದು ಗೊತ್ತಾಗಿದೆ ಎಂದು ವಿವರಿಸಿದರು.ಚುನಾವಣಾ ಬಾಂಡ್ ರೂಪದಲ್ಲಿ ಕಾಂಗ್ರೆಸ್ ಪಕ್ಷಕ್ಕೂ ಒಂದಷ್ಟು ಹಣ ಬಂದಿದೆ. ಆದರೆ, ಅದು ಸಹಜವಾಗಿ ಬಂದಿರುವಂತದ್ದು. ಅದು ಯಾವುದೇ ಇಡಿ, ಸಿಬಿಐ ಇನ್ನಿತರ ಸಂಸ್ಥೆಗಳನ್ನು ಬಳಸಿಕೊಂಡು ಬೆದರಿಕೆ ಹಾಕಿ ವಸೂಲಿ ಮಾಡಿರುವಂತದ್ದಲ್ಲ ಎಂದು ಪಾಟೀಲ ಸಮರ್ಥಿಸಿಕೊಂಡರು.

ಚುನಾವಣಾ ಬಾಂಡ್ ವಿಷಯ ಇಷ್ಟಕ್ಕೇ ನಿಲ್ಲುವುದಿಲ್ಲ. ಇದರ ಆಳ ಬಹಳ ಇದೆ. ಇದು ಇನ್ನೂ ಮುಂದುವರಿಯಲಿದೆ. ಚುನಾವಣಾ ಬಾಂಡ್‍ಗೆ ಸಂಬಂಧಿಸಿದಂತೆ ಎಲ್ಲಾ ಪಕ್ಷಗಳನ್ನೂ ತನಿಖೆಗೆ ಒಳಪಡಿಸಲಿ ಎಂದು ಅವರು ಒತ್ತಿ ಹೇಳಿದರು.ಚುನಾವಣಾ ಬಾಂಡ್ ವ್ಯವಸ್ಥೆಯಿಂದ ಮತದಾನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಸಾಧ್ಯ ಎಂದು ಭಾವಿಸಲಾಗಿತ್ತು. ಆದರೆ, ಇದರ ದುರುಪಯೋಗವೇ ಜಾಸ್ತಿಯಾಗಿದೆ ಎಂದೂ ಅವರು ಹೇಳಿದರು.

ಮನಮೋಹನ್ ಸಿಂಗ್ ಅವರಿಗೆ ಅಭಿವೃದ್ಧಿಯ ಬಗ್ಗೆ ಹಾಗೂ ಜನರ ಕಷ್ಟನಷ್ಟಗಳ ಬಗ್ಗೆ ನಿಜವಾದ ಕಾಳಜಿ ಇತ್ತು. ಪ್ರವಾಹ, ಬರ ಸೇರಿದಂತೆ ಯಾವುದೇ ನೈಸರ್ಗಿಕ ವಿಪತ್ತು ಉಂಟಾದಾಗ ಕರ್ನಾಟಕ ಸೇರಿದಂತೆ ದೇಶದ ಯಾವುದೇ ಸ್ಥಳಕ್ಕೆ ಖುದ್ದು ಭೇಟಿ ನೀಡುತ್ತಿದ್ದರು. ಆದರೆ, ಮೋದಿ ಅವರಿಗೆ ಇಂತಹ ನಿಜವಾದ ಕಾಳಜಿ ಇಲ್ಲ. ಹೀಗಾಗಿಯೇ, ರಾಜ್ಯದಲ್ಲಿ ಬರ ಇದ್ದಾಗ ಅವರು ಈ ಕಡೆ ಸುಳಿಯಲಿಲ್ಲ. ಈಗ, ಚುನಾವಣೆ ಎಂದ ತಕ್ಷಣ ಎರಡು ಸಲ ಇಲ್ಲಿಗೆ ಭೇಟಿಕೊಟ್ಟಿದ್ದಾರೆ ಎಂದರು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು