LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟಿಸಿದ ಸಚಿವ ಮುನಿಯಪ್ಪ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ಹೋಬಳಿ ಹೆಗ್ಗಡಹಳ್ಳಿ ಗ್ರಾಮ ಪಂಚಾಯಿತಿ ಗೂಳ್ಯ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಸರ್ಕಾರಿ ಶಾಲಾ ಕಟ್ಟಡ ಹಾಗೂ ಹೆಗ್ಗಡಹಳ್ಳಿ ಪಂಚಾಯಿತಿಯ ಘನತ್ಯಾಜ್ಯ ವಿಲೇವಾರಿ ಘಟಕವನ್ನು. ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಉದ್ಘಾಟಿಸಿದರು.

ವಿವಿಧ ಕಾರ್ಯಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದ್ದು ಇದೇ ಕಾರಣದಿಂದ ಈ ಭಾಗದಲ್ಲಿ ಅಭಿವೃದ್ದಿ ಕಾರ್ಯಗಳು ಕುಂಠಿತ ವಾಗಿರುವ ವಿಚಾರ ನನ್ನ ಗಮನಕ್ಕೆ ಬಂದಿದೆ ಇಲ್ಲಿ ಸ್ವಚ್ಚತಾ ಕಾರ್ಯಗಳು ಸೇರಿದಂತೆ ಮೂಲಭೂತ ಸೌಲಭ್ಯಗಳಿಗೆ ಅದ್ಯತೆ ನೀಡಿ ಕುಡಿಯುವ ನೀರು, ಶೌಚಾಲಯ, ರಸ್ತೆ, ಚರಂಡಿಗಳ ಅಭಿವೃದ್ದಿಗೆ ಅದ್ಯತೆ ನೀಡಲಾಗುವುದು ಸಾರ್ವಜನಿಕರು ಸಹ ಸ್ವಚ್ಚತಾ ವಿಚಾರಗಳಲ್ಲಿ ಸಹಕಾರ ನೀಡುವ ಮೂಲಕ ಸ್ವಚ್ಛ ಗ್ರಾಮ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ಮಾದ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು ರಾಜ್ಯದಲ್ಲಿ ಪಡಿತರರಿಗೆ ನೀಡುವ ಅಕ್ಕಿ ಬದಲು ಹಣವನ್ನು ಅವರ ಖಾತೆಗೆ ಜಮೆ ಮಾಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಪಡಿತರರಿಗೆ ನೀಡಲಾಗುತ್ತಿರುವ ಹಣದ ಬದಲು ಅಕ್ಕಿಯನ್ನು ನೀಡಲು ಸರ್ಕಾರ ಚಿಂತನೆ ಮಾಡಲಾಗುತ್ತಿದ್ದು ಅದಷ್ಠು ಬೇಗ ಪಡಿತರರಿಗೆ ಅಕ್ಕಿಯನ್ನು ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ಜಿಲ್ಲಾ ಎಸ್ ಟಿ ಬ್ಲಾಕ್ ಅದ್ಯಕ್ಷ ಮುನಿರಾಜು, ತೂಬಗೆರೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ರಂಗಪ್ಪ ಕಾರ್ಯದರ್ಶಿ ರವಿ ಸಿದ್ದಪ್ಪ ತಹಶೀಲ್ದಾರ್ ಶ್ರೀ ವಿದ್ಯಾ ವಿಭಾ ರಾಥೋಡ್ ಗ್ರಾಮ ಪಂಚಾಯತಿ ಅದ್ಯಕ್ಷೆ ಅಂಜಿನಮ್ಮ ಉಪಾಧ್ಯಕ್ಷ ಜಗನ್ನಾಥ ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯರು ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು