LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಬುಡಕಟ್ಟು ಜನಾಂಗದ ದನಿ `ಬಿರ್ಸಾಮುಂಡ': ಸಚಿವ ನಾಗೇಂದ್ರ

ಚಾಮರಾಜನಗರ: ಅಪ್ರತಿಮ ದೇಶಪ್ರೇಮಿಯಾಗಿದ್ದ ಭಗವಾನ್ ಬಿರ್ಸಾಮುಂಡ ಅವರು ದೇಶದ ಎಲ್ಲಾ ಬುಡಕಟ್ಟು ಜನಾಂಗದ ದನಿಯಾಗಿದ್ದರು ಎಂದು ಯುವಜನ ಸೇವಾ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅಭಿಪ್ರಾಯಪಟ್ಟರು.

ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ‘ಭಗವಾನ್ ಶ್ರೀ ಬಿರ್ಸಾಮುಂಡ ಜಯಂತಿ’ ಹಾಗೂ ‘ಜನಜಾತೀಯ ಗೌರವ್ ದಿವಸ್-2023’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬ್ರಿಟಿಷರು ಬುಡಕಟ್ಟು ಜನಾಂಗದವರ ಹಕ್ಕುಗಳನ್ನು ಕಸಿದು ಶೋಷಣೆ ಮಾಡುತ್ತಿದ್ದುದನ್ನು ಬಾಲ್ಯದಿಂದಲೇ ಅರಿತಿದ್ದ ಬಿರ್ಸಾಮುಂಡ ಅವರು ಅದಿವಾಸಿ ಯುವಕರನ್ನು ಸಂಘಟಿಸಿ ಗೆರಿಲ್ಲಾ ಯುದ್ದದ ತರಬೇತಿ ನೀಡಿ ಬ್ರಿಟಿಷರೊಂದಿಗೆ ಯುದ್ಧ ಮಾಡಿ ಹಿಮ್ಮೆಟ್ಟಿಸಿದ್ದರು. ಉತ್ತಮ ನಾಯಕತ್ವ ಗುಣ ಹೊಂದಿದ್ದ ಬಿರ್ಸಾಮುಂಡ ಜೀವಂತವಿರುವವರೆಗೂ ಬ್ರಿಟಿಷರು ಅರಣ್ಯ ಪ್ರವೇಶಿಸದಂತೆ ತಡೆದು ಬ್ರಿಟಿಷರಿಗೆ ಸಿಂಹಸ್ವಪ್ನರಾಗಿದ್ದರು ಎಂದರು.

ರಾಜ್ಯಸರ್ಕಾರ ಬುಡಕಟ್ಟು ಸಮುದಾಯದ ಅಭಿವೃದ್ಧಿಗಾಗಿ ಹಲವಾರು ಯೋಜನೆ, ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಅದಿವಾಸಿ ಜನರಲ್ಲಿ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಈ ಹಿಂದೆ 6 ತಿಂಗಳ ಅವಧಿಗೆ ನೀಡುತ್ತಿದ್ದ ಪೌಷ್ಠಿಕ ಆಹಾರವನ್ನು ವರ್ಷಪೂರ್ತಿ ನೀಡಲು ಸರ್ಕಾರ ಮುಂದಾಗಿದೆ. ಅದಿವಾಸಿ ಜನರ ಜೊತೆ ಸರ್ಕಾರವಿದೆ.

ಬುಡಕಟ್ಟು ಜನರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಉತ್ತಮ ಆರೋಗ್ಯ ಹೊಂದಬೇಕು. ಸರ್ಕಾರದ ಸೌಲಭ್ಯಗಳನ್ನು ಅದಿವಾಸಿಗಳು ಸದ್ಭಳಕೆ ಮಾಡಿಕೊಂಡು ಅರ್ಥಿಕವಾಗಿ ಸದೃಢರಾಗಬೇಕು. ಬಿರ್ಸಾಮುಂಡ ಅವರ ಅದರ್ಶ ನಾಯಕತ್ವ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಚಿವರಾದ ನಾಗೇಂದ್ರ ಅವರು ತಿಳಿಸಿದರು.

ಕಾರ್ಯಕ್ರಮದ ಉಪಸ್ಥಿತಿ ವಹಿಸಿ, ಕುಡುಗೋಲು-ಕಣರೋಗ ಕುರಿತ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಬಿರ್ಸಾಮುಂಡ ಜಯಂತಿ ವಿಶೇಷವಾದ ಕಾರ್ಯಕ್ರಮವಾಗಿದ್ದು, ದೇಶಾದ್ಯಂತ ಆಚರಿಸಲಾಗುತ್ತಿದೆ. ಬಿರ್ಸಾಮುಂಡ ಅವರು ಬ್ರಿಟಿಷರ ವಿರುದ್ಧ ಹೋರಾಡಿ ಸಾಮಾನ್ಯ ಬುಡಕಟ್ಟು ಜನಾಂಗಕ್ಕೆ ಬದುಕು ಕಟ್ಟಿಕೊಟ್ಟರು. ಅದಿವಾಸಿ ಜನರ ಏಳಿಗೆಗೆ ಹಾಗೂ ಒಳಿತಿಗೆ ಶ್ರಮಿಸಿದ ಮುಂಚೂಣಿ ನಾಯಕರಾಗಿದ್ದಾರೆ ಎಂದರು.

ಜಿಲ್ಲೆಯಲ್ಲಿ ಅತಿಹೆಚ್ಚು ಬುಡಕಟ್ಟು ಸಮುದಾಯಗಳಿವೆ. ಇತ್ತಿಚೆಗೆ ಕಾಡಂಚಿನ ಹಾಡಿಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬುಡಕಟ್ಟು ಜನರ ಸಮಸ್ಯೆಗಳನ್ನು ಅರಿತಿದ್ದೇನೆ. ಅದಿವಾಸಿ ಜನರ ಪ್ರಗತಿಗಾಗಿ ಕಾರ್ಯಕ್ರಮಗಳನ್ನು ಸರ್ಕಾರ ಪ್ರಾಮಾಣಿಕವಾಗಿ ಜಾರಿಗೊಳಿಸುತ್ತಿದೆ. ಅಗತ್ಯವಾಗಿರುವ ಮನೆಗಳನ್ನು ಹಂತಹಂತವಾಗಿ ನೀಡಲಾಗುವುದು. ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಜನವನ ಸಾರಿಗೆ ವ್ಯವಸ್ಥೆಯನ್ನು ಮರುಚಾಲನೆಗೊಳಿಸಲಾಗಿದೆ ಎಂದು ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ತಿಳಿಸಿದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎಂ.ಆರ್. ಮಂಜುನಾಥ್ ಮಾತನಾಡಿದರು.
ಯಳಂದೂರು ಬಿಳಿಗಿರಿರಂಗನಬೆಟ್ಟದ ಬುಡಕಟ್ಟು ಸಮುದಾಯದ ಮುಖಂಡರಾದ ಡಾ. ಸಿ. ಮಾದೇಗೌಡ ಉಪನ್ಯಾಸ ನೀಡಿದರು.
ಇದೇ ವೇಳೆ ಬುಡಕಟ್ಟು ಸಮುದಾಯದ ಒಳಿತಿಗೆ ಶ್ರಮಿಸಿ ಸಾಧನೆಗೈದ ಬೆಟ್ಟಕುರುಬ ಜನಾಂಗದ ರಮೇಶ, ನಾಟಿ ವೈದ್ಯರಾದ ಮಾದಮ್ಮ ಹಾಗೂ ಸೋಲಿಗ ಸಂಸ್ಕøತಿಗೆ ಕೊಡುಗೆ ನೀಡಿದ ಕೋಣೂರುಗೌಡ ಇತರರನ್ನು ಸನ್ಮಾನಿಸಿ ಗೌರವಿಸಲಾಯಿತು.

ಅಲ್ಲದೆ ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣಗಳನ್ನು ಧರಿಸಿದ ಮಕ್ಕಳು ಕಾರ್ಯಕ್ರಮದಲ್ಲಿ ಗಮನ ಸೆಳೆದರು. ವೇದಿಕೆ ಮುಂಭಾಗದಲ್ಲಿ ಉತ್ತರಕನ್ನಡ ಜಿಲ್ಲೆಯ ಡೆಕ್ಕೆ ಕುಣಿತ ಹಾಗೂ ಸೋಲಿಗರ ಗೊರವರ ನೃತ್ಯ ಎಲ್ಲರ ಮನಸೂರೆಗೊಂಡಿತು.
ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಮರಿತಿಬ್ಬೇಗೌಡ, ನಗರಸಭಾ ಸದಸ್ಯರಾದ ಎಂ. ಮಹೇಶ್, ದೆಹಲಿಯ ಅದಿವಾಸಿ ಸಮನ್ವಯ ಮಂಚ್ ಭಾರತ್ ಅಧ್ಯಕ್ಷರಾದ ವಿ. ಮುತ್ತಯ್ಯ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಎಸ್ಪಿ ಪದ್ಮಿನಿ ಸಾಹು, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಬಿ. ಕಲ್ಲೇಶ್, ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಪ್ರೊ. ಎಲ್. ಶ್ರೀನಿವಾಸ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೆ. ಮಂಜುಳ, ಗಿರಿಜನ ಪ್ರಗತಿ ಫೌಂಡೇಷನ್ ಅಧ್ಯಕ್ಷರಾದ ಡಾ. ರತ್ನಮ್ಮ, ಗಿರಿಜನ ಮುಖಂಡರಾದ ಕೇತಮ್ಮ, ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಬುಡಕಟ್ಟು ಸೋಲಿಗ ಅಭಿವೃದ್ಧಿ ಸಂಘಗಳ ಪದಾಧಿಕಾರಿಗಳು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು