LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಆಟೋ ಚಾಲಕರಿಂದ ಸಚಿವರ ನಿವಾಸಕ್ಕೆ ಮುತ್ತಿಗೆ

ಬೆಂಗಳೂರು: ನಗರದಲ್ಲಿ ಎಲ್‌ಪಿಜಿ ಗ್ಯಾಸ್ ಸಮಸ್ಯೆ ಹೋಟೆಲ್ ಉದ್ಯಮಕ್ಕಷ್ಟೆ ಅಲ್ಲದೆ ಇದೀಗ ಆಟೋ ಚಾಲಕರ ದುಡಿಮೆ ಮೇಲೂ ಹೊಡೆತ ಕೊಟ್ಟಿದೆ. ಗಂಟೆಗಟ್ಟಲೆ ಆಟೋಗೆ ಗ್ಯಾಸ್ ತುಂಬಿಸಲು ಕಾದು ಕಾದು ಸುಸ್ತಾಗಿರುವ ಚಾಲಕರು ಇಂದು ಆಹಾರ ಸಚಿವ ಕೆ. ಹೆಚ್ ಮುನಿಯಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಹೆಬ್ಬಾಳದ ಸಂಜಯನಗರದಲ್ಲಿರುವ ಸಚಿವರ ಮನೆ ಎದುರು ಜಮಾಯಿಸಿದ ಆಟೋ ಚಾಲಕರು ಗ್ಯಾಸ್ ಕೊಡಬೇಕು ಎಂದು ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಹಲವೆಡೆ ಆಟೋಗಳಿಗೆ ಅಗತ್ಯವಾದ ಐPಉ ಗ್ಯಾಸ್ ಲಭ್ಯವಾಗದೇ ಇರುವುದರಿಂದ ಜೀವನೋಪಾಯಕ್ಕೆ ತೊಂದರೆ ಉಂಟಾಗಿದೆ ಎಂದು ಚಾಲಕರು ಅಳಲು ತೋಡಿಕೊಂಡಿದ್ದಾರೆ.
ಪ್ರತಿಭಟನಾಕಾರರ ಜೊತೆ ಮಾತನಾಡಿದ ಸಚಿವ ಮುನಿಯಪ್ಪ, ಕೇಂದ್ರ ಸರ್ಕಾರದಿಂದ ಪ್ರತಿದಿನ ಸುಮಾರು 3 ಸಾವಿರ ಸಿಲಿಂಡರ್‌ಗಳನ್ನು ಒದಗಿಸಲಾಗುತ್ತಿದ್ದು, ಪೂರೈಕೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಖಾಸಗಿ ಗ್ಯಾಸ್ ಬಂಕ್‌ಗಳಲ್ಲಿ ಹೆಚ್ಚುವರಿ ದರ ವಸೂಲಿ ನಡೆಯುತ್ತಿರುವ ಬಗ್ಗೆ ಮಾಹಿತಿ ದೊರೆತಿದ್ದು, ಸಂಬAಧಪಟ್ಟ ಬಂಕ್ ಮಾಲೀಕರನ್ನು ಕರೆದು ಚರ್ಚೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.
ಆಟೋ ಚಾಲಕರಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ ಸಚಿವರು, ಏಪ್ರಿಲ್ 10ರಂದು ಅಧಿಕಾರಿಗಳು ಮತ್ತು ಪೊಲೀಸರ ಜೊತೆ ಸಭೆ ನಡೆಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದಾಗಿ ಹೇಳಿದರು. ಇದೇ ವೇಳೆ, ಇಂದು ಮಧ್ಯಾಹ್ನದ ನಂತರವೂ ಅಧಿಕಾರಿಗಳ ಜೊತೆ ಚರ್ಚೆ ನಡೆಸುವುದಾಗಿ ಅವರು ತಿಳಿಸಿದರು. ಪ್ರತಿಭಟನೆ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟಿದ್ದಾರೆ. ವಿವಿಧ ಆಟೋ ಚಾಲಕರ ಸಂಘಟನೆಗಳು ಈ ಸಮಸ್ಯೆ ಪರಿಹಾರವಾಗದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿವೆ.
ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪೀಸ್ ಆಟೋ ಸಂಘಟನೆಯ ಅಧ್ಯಕ್ಷ ರಘು, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಸಚಿವರು ತೆರಳುವ ಎಲ್ಲೆಡೆ ಕಪ್ಪು ಬಾವುಟ ಪ್ರದರ್ಶನ ಮಾಡುವುದಾಗಿ ಹಾಗೂ ತೇಜಸ್ವಿ ಸೂರ್ಯ ಸೇರಿದಂತೆ ಸಂಸದರ ಮನೆಗಳಿಗೂ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು