LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಕಾಣೆಯಾಗಿದ್ದ ಯುವತಿ ಪತ್ತೆ ಲವ್‍ಜಿಹಾದ್ ಆರೋಪ

ಮಂಗಳೂರು: ದಕ್ಷಿಣ ಕನ್ನಡದ ನೆರೆಯ ಜಿಲ್ಲೆ, ಗಡಿನಾಡು ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಕೇಳಿಬಂದಿದೆ. ಮುಸ್ಲಿಂ ಲೀಗ್ ನಾಯಕರೊಬ್ಬರು ಲವ್ ಜಿಹಾದ್‍ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಕಾಸರಗೋಡಿನ ವಿಎಚ್‍ಪಿ ಸೇರಿ ಹಿಂದೂ ಪರ ಸಂಘಟನೆಗಳು ಅರೋಪಿಸಿವೆ. ಜಿಲ್ಲೆಯ ಬದಿಯಡ್ಕದಲ್ಲಿ ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಹಿಂದೂ ಪರ ಸಂಘಟನೆಗಳು ಈ ಆರೋಪ ಮಾಡಿವೆ.

ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಅನ್ಯಮತೀಯ ಯುವಕನ ಜೊತೆ ಠಾಣೆಗೆ ಹಾಜರಾಗಿದ್ದಾರೆ. ಮಿರ್ಶಾದ್ ಎಂಬಾತನ ಜೊತೆ ತೆರಳಿದ ಯುವತಿ ಠಾಣೆಗೆ ಹಾಜರಾಗಿದ್ದಾರೆ. ಈಕೆ ಕಾಸರಗೋಡಿನ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿದ್ದಾರೆ. ಆಕೆಯನ್ನು ಪೊಲೀಸರು ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸದ್ಯ ಆಕೆ ಸ್ವಇಚ್ಛೆಯಂತೆ ಯುವಕನ ಜೊತೆ ತೆರಳಿದ್ದಾರೆ.

ಇದರ ಬೆನ್ನಲ್ಲೇ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಲವ್ ಜಿಹಾದ್‍ಗೆ ಕೇರಳದ ಮುಸ್ಲಿಂ ಲೀಗ್ ನೇತಾರನೋರ್ವ ಷಡ್ಯಂತ್ರ ರೂಪಿಸಿ ಪ್ರೇಮಾಂಕುರವಾಗುವಂತೆ ಮಾಡಿದ್ದಾರೆ. ಆ ನೆಪದಲ್ಲಿ ಹಿಂದೂ ಯುವತಿಯೊಬ್ಬಳನ್ನು ಇಸ್ಲಾಂಗೆ ಮತಾಂತರಿಸಲು ಭಾರೀ ಸಂಚು ರೂಪಿಸಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ.ಯುವತಿಯ ತಂದೆಯ ದೂರಿನಂತೆ ಬದಿಯಡ್ಕ ಪೊಲೀಸರು ನಾಪತ್ತೆ ಕೇಸು ದಾಖಲಿಸಿದ್ದರು. ದೂರಿನಲ್ಲಿ ಪೋಷಕರು ಯುವತಿಯ ಅಪಹರಣದ ಅನುಮಾನ ವ್ಯಕ್ತಪಡಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು