LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮಾಚೋಹಳ್ಳಿ ಗ್ರಾಪಂಗೆ ಎಂ.ಕೆ.ತಿಮ್ಮಕ್ಕ ಉದ್ದಂಡಯ್ಯ ನೂತನ ಅಧ್ಯಕ್ಷೆ

ಯಲಹಂಕ: ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಾಸನಪುರ ಹೋಬಳಿ ಮಾಚೋಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಮಾಚೋಹಳ್ಳಿ ಗ್ರಾಮದ ಎಂಕೆ ತಿಮ್ಮಕ್ಕ ಉದ್ದಂಡಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಾಜಿ ಅಧ್ಯಕ್ಷೆ ಸರಸ್ವತಿ ಮಾಯಣ್ಣ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ 20 ಸದಸ್ಯರ ಬಲ ಹೊಂದಿದ್ದ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೇ ನಾಮಪತ್ರ ಸಲ್ಲಿಕೆಯದುದ್ದರಿಂದ ಅವಿರೋಧವಾಗಿ ಅಧ್ಯಕ್ಷರನ್ನು ಘೋಷಿಸಲಾಗಿದೆ ಎಂದು ಚುನಾವಣಾಧಿಕಾರಿ ಜಮೀರ್ ಪಾಷಾ ಘೋಷಿಸಿದರು.
ಅಧ್ಯಕ್ಷರಾಗಿ ಆಯ್ಕೆಯಾದ ಎಂ ತಿಮ್ಮಕ್ಕ ಉದಂಡಯ್ಯ ರವರಿಗೆ ಗ್ರಾಮ ಪಂಚಾಯಿತಿ ಸದಸ್ಯರು ಸಿಹಿ ತಿನಿಸಿ ಹೂ ಮಾಲೇ ತೋಡಿಸಿ ಸಂಭ್ರಮಿಸಿದರು.

ಬಳಿಕ ಮಾತನಾಡಿದ ನೂತನ ಅಧ್ಯಕ್ಷರು ಸ್ವಚ್ಛತೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಅಧ್ಯಕ್ಷರಾಗಲು ಸಹಕರಿಸಿದ ಯಲಹಂಕ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್, ವಾಣಿಶ್ರೀ ವಿಶ್ವನಾಥ್, ಮಾಜಿ ಅಧ್ಯಕ್ಷೆ ಸರಸ್ವತಿ ಮಾಯಣ್ಣ ಹಾಗೂ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರಿಗೆ ಅಭಿನಂದನೆ ತಿಳಿಸಿದರು. ಸಂದರ್ಭದಲ್ಲಿ ಮಾಜಿ ಅಧ್ಯಕ್ಷರಾದ ಎಂ ವಿ ರಾಮಕೃಷ್ಣಯ್ಯ, ಸರಸ್ವತಿ ಮಾಯಣ್ಣ, ಉಪಾಧ್ಯಕ್ಷ ಲಕ್ಷ್ಮಿದೇವಮ್ಮ, ಪಿಡಿಒ ವಿದ್ಯಾ, ಸೌಮ್ಯ ಶ್ರೀನಿವಾಸ್, ಸತೀಶ್ ಕುಮಾರ್, ಆನಂದ್,ಪ್ರಕಾಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು