LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಕಾಲದ ಕಾಮಗಾರಿಗಳಿಗೆ ಶಾಸಕ ಇಕ್ಬಾಲ್ ಹುಸೇನ್ ಮರು ಉದ್ಘಾಟನೆ

ಕನಕಪುರ: ಜೆ.ಡಿ.ಎಸ್ ಮಾಜಿ ಶಾಸಕಿ ಅನಿತಾಕುಮಾರ ಸ್ವಾಮಿಯವರ ಕಾಲದಲ್ಲಿ ಮಂಜೂರಾದ, ಮುಗಿದ ಕಾಮಗಾರಿಗಳಿಗೆ ಮರು ಉದ್ಘಾಟನೆಯ ಭಾಗ್ಯವನ್ನು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಮಾಡುತ್ತಿದ್ದಾ ರೆಂದು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ಜೆ.ಡಿ.ಎಸ್ ಮುಖಂಡ ರಾಮು ಆರೋಪಿಸಿದ್ದಾರೆ.

ನಗರದ ಖಾಸಗಿ ಕಲ್ಯಾಣಮಂಟಪದಲ್ಲಿ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು ಈ ಹಿಂದೆ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆ.ಡಿ.ಎಸ್ ಶಾಸಕಿ ಅನಿತಾ ಕುಮಾರಸ್ವಾಮಿಯವರ ಅನುದಾನದ ಕಾಮಗಾರಿಗಳು ಹಾಗೂ ಅವರು ಸರ್ಕಾರದ ಜೊತೆ ಹೋರಾಟ ಮಾಡಿ ಮಂಜೂರು ಮಾಡಿಸಿದ್ದ ಹಾಗೂ ಅಪೂರ್ಣ ಯೋಜನೆ ಗಳನ್ನು ಮತ್ತೊಮ್ಮೆ ಉದ್ಘಾಟನೆ ಮಾಡುವ ಕೆಲಸಕ್ಕೆ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಆರಂಭ ಮಾಡುತ್ತಿರುವುದು ಹಾಸ್ಯಾಸ್ಪದ ಎಂದರು.

ಇದಕ್ಕೆ ಪೂರಕವೆಂಬತೆ ಕಳೆದ ಮೂರು ದಿನಗಳ ಹಿಂದೆ ಮರಳವಾಡಿ ಹೋಬಳಿ ಕರಿಕಲ್‍ದೊಡ್ಡಿ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದಿಂದ ನಿರ್ಮಾಣವಾಗುತ್ತಿರುವ ಸಮುದಾಯ ಭವನವನ್ನು ಶಾಸಕಿ ಅನಿತಾ ಕುಮಾರ ಸ್ವಾಮಿ ಮಂಜೂರು ಮಾಡಿಸಿಕೊಂಡು ಬಂದಿದ್ದರು ಇಲ್ಲಿನ ಸ್ಥಳೀಯ ಕಾಂಗ್ರೆಸ್ ಎಂ.ಎಲ್.ಎ ತಮ್ಮ ಅನುದಾನ ಹಾಗೂ ಕಾಂಗ್ರೆಸ್ ಸರ್ಕಾರ ಮಂಜೂರು ಮಾಡಿದ ಅನು ದಾನ ಎಂಬಂತೆ ಹಳೆಯ ಕಾಮಗಾರಿಗಳಿಗೆ ಉದ್ಘಾಟನೆ ಮಾಡುವ ಕಾಯಕ ಆರಂಭಿಸಿದ್ದಾರೆ,ಇದೇ ರೀತಿ ಇವರು ಜೆ.ಡಿ.ಎಸ್ ಎಂ.ಎಲ್.ಎ ಅನಿತಾ ಕುಮಾರಸ್ವಾಮಿ ಯವರು ಮಂಜೂರು ಮಾಡಿಸಿದ್ದ ಕಾಮಗಾರಿಗಳು, ಗುದ್ದಲಿ ಪೂಜೆ ಮಾಡಿ ಸ್ಥಗಿತಗೊಂಡಿರುವ ಕಾಮಗಾರಿ ಗಳನ್ನು ಮರು ಉದ್ಘಾಟನೆ ಮಾಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇಕ್ಬಾಲ್ ಹುಸೇನ್ ತಮ್ಮ ಸರ್ಕಾರದಿಂದ ಇದುವರೆವಿಗೂ ನಯಾ ಪೈಸೆ ಹಣವನ್ನು ಅಭಿವೃದ್ಧಿಗೆ ತಂದಿಲ್ಲ, ಆದರೆ ಮತ್ತೊಬ್ಬರು ಮಂಜೂರು ಮಾಡಿಸಿರುವ ಕಾಮಗಾರಿ ಗಳಿಗೆ ಉದ್ಘಾಟನೆ ಮಾಡಲು ಇವರೇ ಬೇಕೆ?, ಕೇಂದ್ರ ಸರ್ಕಾರದ ಮಹತ್ವಾಂಕ್ಷೆ ಯೋಜನೆಯಾದ ರಾಷ್ಟ್ರೀಯ ಉದ್ಯೋಗ ಖಾತ್ರಿ(ನರೇಗಾ) ಕಾಮಗಾರಿಗಳನ್ನು ಸಹ ಉದ್ಘಾಟನೆ ಮಾಡುವ ಮಾಡಿ ಪ್ರಚಾರ ಪಡೆಯಲು ಹೊರಟಿದ್ದಾರೆ. ಇಂತಹ ಕೀಳು ಮಟ್ಟದ ಅಭಿರುಚಿಯನ್ನು ಬಿಟ್ಟು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ತಮ್ಮ ಸರ್ಕಾರವೇ ಇರುವುದರಿಂದ ಹೆಚ್ಚು ಹೆಚ್ಚು ಅನುದಾನ ಬಿಡುಗಡೆ ಮಾಡಿಕೊಂಡು ಅಭಿವೃದ್ಧಿಗೆ ಶ್ರಮಿಸಲಿ ಎಂದರು.ತೋಕಸಂದ್ರ ಗ್ರಾ.ಪಂ ಮಾಜಿ ಅಧ್ಯಕ್ಷ ಶಿವರುದ್ರ ಈ ಸಂದರ್ಭದಲ್ಲಿ ಜೊತೆಯಲ್ಲಿದ್ದು ಅವರೂ ಸಹ ಶಾಸಕರ ವರ್ತನೆಯನ್ನು ಖಂಡಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು