ನವದೆಹಲಿ: ಧಾರವಾಡ ಬಿಜೆಪಿ ಮುಖಂಡ, ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ನ ಜಾಮೀನು ಮೇಲೆ ಬಿಡುಗಡೆಯಾಗಿದ್ದ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.ಇದರಿಂದಾಗಿ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲು ಸೇರುವಂತಾಗಿದೆ. ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದು, 2 ವಾರಗಳಲ್ಲಿ ಸೆಷನ್ಸ್ ಕೋರ್ಟ್ಗೆ ಶರಣಾಗುವಂತೆ ಸೂಚಿಸಿದೆ.2016 ಜೂನ್ 15ರಂದು ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರನ್ನು ಬೆಳಿಗ್ಗೆ ಜಿಮ್‌ನಲ್ಲಿ ಕೊಲೆಗೈಯ್ಯಲಾಗಿತ್ತು. ವಿಚಾರಣೆ ನಡೆಸಿದ್ದ ನ್ಯಾಯಾಲಗಳು ಅಂತಿಮವಾಗಿ ಜೀವವಾದಿ ಶಿಕ್ಷೆಗೆ ಆದೇಶ ನೀಡಿದ ಪರಿಣಾಮ ಜೈಲಿನಲ್ಲಿದ್ದ ಕುಲಕರ್ಣಿಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಿದ ಪರಿಣಾಮ ಅವರಿಗೆ ರದ್ದಾಗಿದ್ದ ಶಾಸಕತ್ವವನ್ನು ಮರಳಿ ನೀಡಲಾಗಿತ್ತು. ಇದೀಗ ಸುಪ್ರೀಂಕೋರ್ಟ್ ಜಾಮೀನು ರದ್ದು ಪಡಿಸಿರುವ ಹಿನ್ನೆಲೆಯಲ್ಲಿ ಶಾಸಕತ್ವಕ್ಕೂ ಸಹ ಕುತ್ತು ಬಂದಿದೆ. ಸುಪ್ರೀಂಕೋರ್ಟ್ ತೀರ್ಪಿನಿಂದಾಗಿ ಹತ್ಯೆಗೊಳಗಾಗಿದ್ದ ಯೋಗೇಶ್‌ಗೌಡ ಕುಟುಂಬದವರು ತಮಗೆ ನ್ಯಾಯ ದೊರೆತಂತಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಹತ್ಯೆಗೊಳಗಾಗಿದ್ದ ಯೋಗೇಶ್‌ಗೌಡ ಸಹೋದರ ಗುರುನಾಥ್ ಗೌಡ ತಮ್ಮ ಕುಟುಂಬದವರನ್ನು ಪ್ರಕರಣದಲ್ಲಿ ರಾಜೀಯಾಗುವಂತೆ ಕೋರಲಾಗಿದ್ದರೂ ತಾವು ಸತ್ತರೂ ಸಹ ರಾಜೀಯಾಗುವುದಿಲ್ಲ ಎಂದು ಹೇಳಿದ್ದೆವು. ಇದೀಗ ನಮಗೆ ನ್ಯಾಯ ದೊರೆತಿದೆ ಎಂದು ಸುದ್ದಿವಾಹಿನಿಯೊಂದರೊಂದಿಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊAಡಿದ್ದಾರೆ. ಇಂದು ಸುಪ್ರೀಂಕೋರ್ಟ್ ನ್ಯಾ. ಪ್ರಶಾಂತ್ ಕುಮಾರ್ ನೇತೃತ್ವದ ದ್ವಿ ಸದಸ್ಯ ಪೀಠ ಕುಲಕರ್ಣಿ ಅವರ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.2023ರ ಚುನಾವಣೆ ಗೆದ್ದ ಬಳಿಕ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಶಾಸಕ ವಿನಯ್ ಕುಲಕರ್ಣಿ ಬಹುತೇಕ ಜೈಲಿನಲ್ಲೇ ಇದ್ದರು. ಜಾಮೀನು ಪೆರೋಲ್ ಹೀಗೆ ಎರಡೆರಡು ಬಾರಿ ಜೈಲಿನಿಂದ ಹೊರ ಬಂದಿದ್ದ ವಿನಯ್ ಕುಲಕರ್ಣಿ ಈಗ ಮತ್ತೆ ಜೈಲುಪಾಲಾಗಿದ್ದಾರೆ.ಕೊಲೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ 2026ರ ಏಪ್ರಿಲ್ 15ರಂದು ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿತು. ಏಪ್ರಿಲ್ 17ರಂದು ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ಮತ್ತೊಬ್ಬ ಆರೋಪಿ ಚನ್ನಕೇಶವ ಟಿಂಗರಿಕರ್‌ಗೆ ಏಳು ವರ್ಷಗಳ ಶಿಕ್ಷೆ ವಿಧಿಸಲಾಯಿತು. ಇನ್ನೂ ವಿಚಾರಣಾ ನ್ಯಾಯಾಲಯ ನೀಡಿದ ಆದೇಶ ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಜುಲೈ 31 ರಂದು ಹೈಕೋರ್ಟ್, ಮೇಲ್ಮನವಿ ಇತ್ಯರ್ಥವಾಗುವವರೆಗೆ ಅವರ ಶಿಕ್ಷೆ ಹಾಗೂ ಅಪರಾಧ ನಿರ್ಣಯಕ್ಕೆ ತಡೆ ನೀಡಿ, ಜಾಮೀನು ನೀಡಿತ್ತು. ಇದರ ಬೆನ್ನಲ್ಲೇ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಯೋಗೇಶಗೌಡ ಸಹೋದರ ಗುರುನಾಥಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.