LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜನರಿಗೆ ಮೋದಿ ಗ್ಯಾರಂಟಿ: ಶಾಸಕ ಎಸ್.ಸುರೇಶ್ ಕುಮಾರ್ ಅಭಿಮತ

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರ: ಶ್ರೀರಾಮಮಂದಿರ ವಾರ್ಡ್ ನಲ್ಲಿ ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪಿ.ಸಿ.ಮೋಹನ್ ರವರ ಪರ ಮನೆ, ಮನೆಗಳಿಗೆ ತೆರಳಿ ಮಾಜಿ ಶಿಕ್ಷಣ ಸಚಿವರು, ಶಾಸಕರಾದ ಎಸ್.ಸುರೇಶ್ ಕುಮಾರ್ ರವರು ಬಿಜೆಪಿ ಕೇಂದ್ರ ಸರ್ಕಾರದ ಪ್ರಧಾನಿ ನರೇಂದ್ರಮೋದಿ ರವರ 10ವರ್ಷದ ಸಾಧನೆಗಳನ್ನು ಮತದಾರರಿಗೆ ತಿಳಿಸಿ ಬಿಜೆಪಿ ಪಕ್ಷಕ್ಕೆ ಮತ ನೀಡುವಂತೆ ಮತಯಾಚನೆ ಮಾಡಿದರು.

ಎಸ್. ಸುರೇಶ್ ಕುಮಾರ್ ರವರು ಮಾತನಾಡಿ ದೇಶದ ಜನರಿಗೆ ಮೋದಿ ಗ್ಯಾರಂಟಿ ಬಗ್ಗೆ ನಂಬಿಕೆ ಇದೆ. ಪ್ರಧಾನಿ ನರೇಂದ್ರಮೋದಿರವರ ಪರ ದೇಶದಲ್ಲಿ ಅಲೆ ಇದೆ ಎಂದರು.ಕಳೆದ 10ವರ್ಷದಲ್ಲಿ ಪ್ರಧಾನಿ ನರೇಂದ್ರಮೋದಿರವರ ಪಾರದರ್ಶಕ ಆಡಳಿತದಿಂದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ. ಜನಧನ್, ಮುದ್ರ ಯೋಜನೆ, ಪಿ.ಎಂ.ವಿಶ್ವಕರ್ಮ ಯೋಜನೆ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಆಯುಷ್ಮಾನ್ ಭವ ಮತ್ತು ಜನೌಷಧಿ ಕೇಂದ್ರಗಳು ಸ್ಥಾಪನೆ.

ಕೇಂದ್ರ ಸರ್ಕಾರ ವಿವಿಧ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿದ ಕಾರಣದಿಂದ ದೇಶದಲ್ಲಿರುವ 25ಕೋಟಿ ಬಡತನ ರೇಖೆಯಿಂದ ಕೆಳಗಿರುವ ಜನರು ಆರ್ಥಿಕವಾಗಿ ಸಬಲರಾಗಿದ್ದಾರೆ ಎಂದಿದ್ದಾರೆ.ಕೇಂದ್ರ ಲೋಕಸಭಾ ಅಭ್ಯರ್ಥಿ ಪಿ.ಸಿ.ಮೋಹನ್ ರವರು ಬೆಂಗಳೂರುನಗರದ ಅಭಿವೃದ್ದಿ ಕುರಿತು ಲೋಕಸಭಾ ಸಭೆಯಲ್ಲಿ ಮಾತನಾಡಿ ನಗರಕ್ಕೆ ಸಬ್ ಅರ್ಬನ್ ರೈಲು ಮತ್ತು ಪ್ರಧಾನಿ ಅವಾಸ್ ಯೋಜನೆ ಮನೆಗಳ ನಿರ್ಮಾಣ ಯೋಜನೆ ಕಾರ್ಯಗತವಾಗಲು ಕಾರಣಕರ್ತರಾಗಿದ್ದಾರೆ.

ಸತತ 500ವರ್ಷಗಳ ಹೋರಾಟದ ಪ್ರತಿಫಲ ಪ್ರಧಾನಿ ನರೇಂದ್ರಮೋದಿರವರ ನೇತೃತ್ವದಲ್ಲಿ ಭವ್ಯ ಶ್ರೀರಾಮಮಂದಿರ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವುದು. ಬಿಜೆಪಿ ನುಡಿದಂತೆ ನಡೆದ ಪಕ್ಷ. ದೇಶದ ಜನರಿಗೆ ಮೋದಿ ಗ್ಯಾರಂಟಿ ಬಗ್ಗೆ ನಂಬಿಕೆ ಇದೆ 400ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಹೇಳಿದರು.

ಮಂಡಲ ಬಿಜೆಪಿ ಅಧ್ಯಕ್ಷರಾದ ಸುದರ್ಶನ್, ಮಾಜಿ ಪಾಲಿಕೆ ಸದಸ್ಯರುಗಳಾದ ಹೆಚ್.ಆರ್.ಕೃಷ್ಣಪ್ಪ, ದೀಪಾ ನಾಗೇಶ್ ಮತ್ತು ಬಿಜೆಪಿ ಮುಖಂಡರುಗಳಾದ ಬಿ.ಎನ್.ಶ್ರೀನಿವಾಸ್, ಸತೀಶ್ ಭಗವಾನ್,ಟಿ.ಎನ್.ರಮೇಶ್, ಕಿರಣ್, ಕೃಷ್ಣಮೂರ್ತಿ, ಮಂಜುನಾಥ್, ಮೋಹನ್ ರಾಜ್,ಪೂರ್ಣಿಮಾ ಪ್ರಧಾನಕಾರ್ಯದರ್ಶಿ ಮಹಿಳಾ ಮೋರ್ಚಾ ರಾಧಾಅಧ್ಯಕ್ಷರು ಮಹಿಳಾ ಮೋರ್ಚಾ ರಾಮಮಂದಿರ ವಾರ್ಡ್ ಹೇಮಾ, ಶ್ಯಾಮಲ, ಚಂದ್ರಕಲಾ ಜಯಂತಿ, ಚೈತನ್ಯ, ಹರಿಪ್ರಿಯಾ ಸತ್ಯ, ಗಾಯತ್ರಿ, ಸವಿತಾ, ಪದ್ಮ ಆಶಾ, ಲೀಲಾವತಿ, ಕುಸುಮರವರು ಕಾರ್ಯಕರ್ತರುಗಳು ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು