LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ವೈಜ್ಞಾನಿಕವಾಗಿ ಮಲತ್ಯಾಜ್ಯ ವಿಲೇವಾರಿಗೆ ಅಗತ್ಯ ಕ್ರಮ: ಶಾಸಕ ಶರತ್ ಬಚ್ಚೇಗೌಡ

ಹೊಸಕೋಟೆ: ಗ್ರಾಮಗಳಲ್ಲಿ ಉತ್ಪಾದನೆಯಾಗುವ ಮಲ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ದೃಷ್ಟಿಯಿಂದ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.ಅವರು ತಾಲೂಕಿನ ತಿರುಮಲಶೆಟ್ಟಿಹಳ್ಳಿ ಗ್ರಾಮದಲ್ಲಿ ಅಂದಾಜು 90 ಲಕ್ಷ ರೂ.ಗಳ ವೆಚ್ಚದಲ್ಲಿ ಮಲ ತ್ಯಾಜ್ಯ ವಿಲೇವಾರಿಘಟಕಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಗ್ರಾಮಾಂತರ ಜಿಲ್ಲೆ ನೀರು ಸರಬರಾಜು ಇಲಾಖೆ ವತಿಯಿಂದ ಅನುದಾನವನ್ನ ಒದಗಿಸಿ ಮಲ ತ್ಯಾಜ್ಯ ವಿಲೇವಾರಿ ಘಟಕವನ್ನು ನಿರ್ಮಾಣ ಮಾಡಲಾಗುತ್ತಿದೆ. ಒಳಚರಂಡಿ ಇಲ್ಲದ ಗ್ರಾಮಗಳಲ್ಲಿ ಒಳಚರಂಡಿ ಸಂಸ್ಕರಣಾ ಘಟಕದ (ಎಸ್‍ಟಿಪಿ) ಟ್ಯಾಂಕ್‍ಗಳಲ್ಲಿ ಶೇಖರಣೆಯಾಗಿ ಮಲವನ್ನು ಸಕ್ಕಿಂಗ್ ಯಂತ್ರಗಳ ಮೂಲಕ ಸಂಗ್ರಹಣೆ ಮಾಡಿ ಈ ಘಟಕದಲ್ಲಿ ಶೇಖರಿಸಿ ನಂತರ ನೀರನ್ನು ಶುದ್ಧೀಕರಿಸಿ ಹರಿಸುವುದರ ಮೂಲಕ ಒಣಗಿದ ಮಲವನ್ನು ಗೊಬ್ಬರ ಮಾಡಿ ಅದನ್ನು ಕೆಜಿ ಲೆಕ್ಕದಲ್ಲಿ ಮಾರಾಟ ಮಾಡಲಾಗುವುದು.

ಇದರಿಂದ ಅವೈಜ್ಞಾನಿಕವಾಗಿ ಕಾರ್ಮಿ ಕರನ್ನು ಎಸ್‍ಟಿಪಿ ಪ್ಲಾಂಟ್‍ಗೆ ಇಳಿಸಿ ಮಲವನ್ನು ವಿಲೇವಾರಿ ಮಾಡುವುದು ನಿವಾರಣೆಯಾಗಲಿದೆ ಎಂದರು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನ್ನಪೂರ್ಣ ಶಂಕರ್ ಮಾತನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಗ್ರಾಮಗಳಲ್ಲಿ ಮಲದ ಗುಂಡಿಗಳೇ ಇದ್ದು ಅದನ್ನು ಸಮರ್ಪಕವಾಗಿ ವಿಲೇವಾರಿ ಮಾಡುವುದು ಕಷ್ಟ ಸಾಧ್ಯವಾಗಿತ್ತು. ಈಗ ವೈಜ್ಞಾನಿಕ ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡುತ್ತಿರುವುದರಿಂದ ಸಾಕಷ್ಟು ಅನುಕೂಲವಾಗಲಿದೆ ಎಂದರು.

ಟಿಎಪಿಸಿಎಂಎಸ್ ಅಧ್ಯಕ್ಷ ಬಾಬುರೆಡ್ಡಿ, ಅನುಗೊಂಡನಹಳ್ಳಿ ಹೋಬಳಿ ಕಾಂಗ್ರೆಸ್ ಮುಖಂಡ ಬೋಧನಹೊಸಹಳ್ಳಿ ಪ್ರಕಾಶ್, ಮಾನವ ಹಕ್ಕುಗಳ ಜಾಗೃತಿ ಸಮಿತಿ ಅಧ್ಯಕ್ಷ ಸಮೇತನಹಳ್ಳಿ ಲಕ್ಷ್ಮಣ ಸಿಂಗ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾರಾಯಣಪ್ಪ, ಮುಖಂಡರಾದ ಮಲ್ಲಸಂದ್ರ ಶೇಷಪ್ಪ, ಕೊರಳೂರು ಸುರೇಶ್, ಮುತ್ಕೂರು ಮುನಿರಾಜು, ರಾಜಪ್ಪ ಸೇರಿದಂತೆ ಹಲವಾರು ಗಣ್ಯರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು