LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಜನರ ಸಮಸ್ಯೆಗಳಿಗೆ ಸ್ಪಂದಿಸದ ಪಿಡಿಒ: ಎತ್ತಂಗಡಿ ಮಾಡಲು ಶಾಸಕ ಎಚ್ಚರಿಕೆ

ಮುಳಬಾಗಿಲು: ಜನರ ಸಮಸ್ಯೆಗಳಿಗೆ ಸ್ಪಂದಿಸದ ಹಾಗೂ ಸರ್ಕಾರಿ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಲು ವಿಫಲರಾಗಿರುವ ಗ್ರಾಮ ಪಂಚಾಯಿತಿ ಪಿಡಿಒ ಶ್ರೀನಿವಾಸ್ ರೆಡ್ಡಿ ಅವರನ್ನು ಕೂಡಲೇ ಅವರನ್ನು ಎತ್ತಂಗಡಿ ಮಾಡಲು ಜಿಲ್ಲಾ ಪಂಚಾಯತಿ ಸಿಇಓ ಅವರ ಅಗತ್ಯ ಕ್ರಮ ತೆಗೆದುಕೊಳ್ಳದೆ ಇದ್ದರೆ ನಾನೇ ಗ್ರಾಮ ಪಂಚಾಯತಿ ಕಚೇರಿ ಮುಂಭಾಗ ಸಾರ್ವಜನಿಕ ಜೊತೆಗೂಡಿ ಪ್ರತಿಭಟನೆ ಹಮ್ಮಿಕೊಳ್ಳುತ್ತೇನೆ ಎಂದು ಶಾಸಕ ಸೌಂದರ್ಯ ವಿ ಮಂಜುನಾಥ್ ತಿಳಿಸಿದರು.
ತಾಲ್ಲೂಕಿನ ತಾಯಿಲೂರಿನಲ್ಲಿ ತಾಲ್ಲೂಕು ಆಡಳಿತ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕದಿಂದ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿ.ತಾಲ್ಲೂಕು ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಏನೇ ಸಮಸ್ಯೆಗಳಿದ್ದರೂ ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುತ್ತೇನೆ ಉಳಿದ ಸಮಸ್ಯೆಗಳನ್ನು ಅಂತAತವಾಗಿ ಬಗೆಹರಿಸುವುದಾಗಿ ಭರವಸೆ ನೀಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹಲವಾರು ಯೋಜನೆಗಳಿಂದ ವಿವಿಧ ಸೌಲಭ್ಯ ಸಿಗುತ್ತಿದ್ದು ಇದರಿಂದ ವಂಚಿತರಾಗಿರುವವರು ಜನಸ್ಪಂದನ ಕಾರ್ಯಕ್ರಮದಲ್ಲಿ ತಮ್ಮ ಹವಾಲುಗಳನ್ನು ನೀಡಿದರೆ ಕೂಡಲೇ ಸರ್ಕಾರದ ಸವಲತ್ತುಗಳನ್ನು ಕಳುಹಿಸಿ ಕೊಡುತ್ತೇನೆ ಇದಕ್ಕೆ ನೀವೆಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಈ ಸಭೆಯಲ್ಲಿ ಸಾರ್ವಜನಿಕರಿಂದ 78 ಅರ್ಜಿಗಳು ಬಂದಿದೆ ಇದರ ಪೈಕಿ ಐವತ್ತರ ಅರ್ಜಿಗಳು ಪಿಡಿಓ ಶ್ರೀನಿವಾಸ ಬಂದಿದೆ ಇದು ನಾಚಿಕೆಗೇಡಿನ ವಿಷಯ ಎಂದು ಆಕೋಶ ವ್ಯಕ್ತಪಡಿಸಿದರು. ತಾಲ್ಲೂಕಿನ 30 ಗ್ರಾಮ ಪಂಚಾಯತಿಗಳ ಪಿಡುಗುಗಳ ಪೈಕಿ ತಾಯಿಲೂರು ಪೀಡುವವರು ಸರ್ಕಾರಿ ಕರ್ತವ್ಯ ಮತ ಇದ್ದರೆ ಇದರಿಂದ ನನಗೆ ಅವಮಾನವಾಗುತ್ತದೆ ಸಾರ್ವಜನಿಕರಿಂದ ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದರು.
ತಾಯಿಲೂರು ರಸ್ತೆಗಳಲ್ಲಿ ಅಂಗಡಿಗಳನ್ನು ಆರಂಭಿಸಲು ಹಾಗೂ ದೇವಾಲಯಗಳ ಪಕ್ಕ ಮಾಂಸದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡುವ ಮೂಲಕ ಪೀಡುವ ಕಾರ್ಯ ಲೋಪ ಹೀಗಿದ್ದಾರೆ ಜೊತೆಗೆ ಸರ್ಕಾರದ ಯೋಜನೆಗಳನ್ನು ಸಾರ್ವಜನಿಕ ತಲುಪಿಸುವಲ್ಲಿ ವಿಫಲರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ತಾಲ್ಲೂಕಿನಲ್ಲಿ ದಕ್ಷತೆಯಿಂದ ಸಾರ್ವಜನಿಕ ಕೆಲಸಗಳನ್ನು ಮಾಡಿಕೊಡುವ ಹಾಗೂ ಸರ್ಕಾರಿ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ಅಧಿಕಾರಿಗಳು ಮಾತ್ರ ಇಲ್ಲಿ ಕೆಲಸ ಮಾಡಬೇಕು ಇಲ್ಲದಿದ್ದ ಪಕ್ಷದಲ್ಲಿ ಬೇರೆ ಕಡೆ ವರ್ಗಾವಣೆ ಮಾಡಿಕೊಂಡು ಹೋಗಬಹುದು ಎಂದು ಎಚ್ಚರಿಕೆ ನೀಡಿದರು.
ಯಾವುದೇ ಸರ್ಕಾರಿ ಕಚೇಗಳಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ನೀಡಿ, ಬೇರೆಯವರಿಗೆ ತೊಂದರೆ ನೀಡಿದರೆ ನಾನು ಸುಮ್ಮನೆ ಇರುವುದಿಲ್ಲ ಅವರು ವಿರುದ್ಧ ಕಾನೂನು ಕ್ರಮ ಜರಿಸಬೇಕಾಗುತ್ತದೆ ಎಂದು ತಿಳಿಸಿದರು.
ತಾಯಿಲೂರಿನಲ್ಲಿ ಮೂರು ಎಕರೆ ಸರ್ಕಾರಿ ಜಮೀನಿನಲ್ಲಿ ನಿವೇಶನ ರಹಿತರಿಗೆ ನಿವೇಶಗಳನ್ನು ಉಚಿತವಾಗಿ ನೀಡಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು. ತಾಯಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ಅಗತ್ಯ ಇರುವ ಮೂಲ ಸೌಲಭ್ಯಗಳನ್ನು ಕಳುಹಿಸುವ ನಿಟ್ಟಿನಲ್ಲಿ ಈಗಾಗಲೇ ವಿಶೇಷ ಯೋಜನೆ ರೂಪಿಸಲಾಗಿದೆ. ತಾಯ್ಲೂರಿನಲ್ಲಿ ಅಂಬೇಡ್ಕರ್ ಸಮುದಾಯ ಭವನ ನಿರ್ಮಿಸಲಾಗುವುದು ಜೊತೆಗೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಉನ್ನತಿಕರಣ ಸಲು ಸರ್ಕಾರದ ಗಮನಕ್ಕೆ ತರಲಾಗುವುದು ಪರಿಶಿಷ್ಟ ಜಾತಿ ಮತ್ತು ಹಿಂದುಳಿದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇರುವ ಸ್ಮಶಾನ ವಿಸ್ತರಿಸಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಮುಂದೆ ನಡೆಯುವ ಜನಸ್ಪಂದನ ಕಾರ್ಯಕ್ರಮಕ್ಕೆ ಮುಂಚಿತವಾಗಿ ಗ್ರಾಮ ಲೆಕ್ಕಾಧಿಕಾರಿಗಳು ಪಿಡಿಓಗಳು ಹಾರೈಗಳು ಕರಪತ್ರಗಳನ್ನು ಮನೆಮನೆಗೆ ತಲುಪಿಸಿ ಆರ್ ವಿ ಮೂಡಿಸಬೇಕು ಇಲ್ಲದಿದ್ದರೆ ನಿಮ್ಮ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚಾಯಿಸಿದರು.
ತಹಸೀಲ್ದಾರ್ ವಿ ಗೀತಾ. ತಾಪಂ ಇಒ ಎನ್ ವಿ ಬಾಬು. ಡಿಸಿಸಿ ಬ್ಯಾಂಕ್ ನಿರ್ದೇಶಕ ನಲ್ಲೂರು ರಘುಪತಿ ರೆಡ್ಡಿ. ಮುಖಂಡ ಟಿಎಸ್ ರಮೇಶ್. ಗೊಲ್ಲಹಳ್ಳಿ ಜಗದೀಶ್. ಶ್ರೀನಿವಾಸ್. ಆರ್ ಐ ಸತೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು