ಬೆಂಗಳೂರು: ಅಧಿಕಾರಿ ಫರ್ವೇಜ್ ಅವರು ನಾಪತ್ತೆಯಾಗಿರುವುದಕ್ಕೆ ಸರ್ಕಾರವೇ ಹೊಣೆ ಎಂದು ವಿಪಕ್ಷ ಬಿಜೆಪಿ ಶಾಸಕರು ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿ ಸರ್ಕಾರದಲ್ಲಿ ಹಣವಿಲ್ಲದೆ ಅನುದಾನ ಬಿಡುಗಡೆಯಾಗದ ಪರಿಣಾಮ ಇಂಜಿನಿಯರ್ ಫರ್ವೇಜ್ ಅವರು ಪತ್ರ ಬರೆದಿಟ್ಟು ಕಣ್ಮರೆಯಾಗಿದ್ದಾರೆ ಎಂದು ದೂರಿದ್ದಾರೆ. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ ಸರ್ಕಾರ ಅಧಿಕಾರಿಯನ್ನು ಹುಡುಕುವ ಕೆಲಸ ಮಾಡಬೇಕು. ಸರ್ಕಾರದ ಬೊಕ್ಕಸ ಖಾಲಿಯಾಗಿ ಹಣವಿಲ್ಲದಿರುವುದಕ್ಕೆ ಈ ಪರಿಸ್ಥಿತಿ ಎದುರಾಗಿದೆ. ಕೂಡಲೇ ಎಚ್ಚೆತ್ತು ಅಧಿಕಾರಿಯನ್ನು ಹುಡುಕಿ ಎಂದಿದ್ದಾರೆ.
ಬಿಜೆಪಿಯ ಹಿರಿಯ ಶಾಸಕ ಸುರೇಶ್‌ಕುಮಾರ್ ಅವರು, ಮುಖ್ಯಮಂತ್ರಿಯವರು ರಾಜ್ಯದ ಹಣಕಾಸಿನ ಬಗ್ಗೆ ಯಾವುದೇ ಸ್ಪಷ್ಟನೆಯನ್ನು ನೀಡುತ್ತಿಲ್ಲ. ಈ ಬಗ್ಗೆ ಹಣಕಾಸಿನ ಬಗ್ಗೆ ಸ್ಪಷ್ಟ ಚಿತ್ರಣ ನೀಡಿ ಎಂದು ಒತ್ತಾಯಿಸಿದ್ದಾರೆ. ಬೊಕ್ಕಸದಲ್ಲಿ ಹಣವಿಲ್ಲದಿರುವುದಕ್ಕೆ ಇಂತಹ ಪರಿಸ್ಥಿತಿ ಎದುರಾಗಿದೆ ಎಂದಿದ್ದಾರೆ.