LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಲೋಕಾಧಿಕಾರಿಗಳಿಗೆ ಆಧುನಿಕ ಸೌಲಭ್ಯ

ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಸಮರ ಸಾರುವ, ಲೋಕಾಯುಕ್ತ ಅಧಿಕಾರಿಗಳು ಇನ್ನಷ್ಟು ಸ್ಮಾರ್ಟ್ ಆಗಲಿದ್ದಾರೆ.ಲಂಚ ಪ್ರಕರಣಗಳ ತ್ವರಿತ ತನಿಖೆಗೆ ಪೂರಕವಾದ ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತಿರುವ ಲೋಕಾಯುಕ್ತದಲ್ಲಿ ಕಾರ್ಯನಿರ್ವಹಿಸುತ್ತಿರುವ ಇನ್ಸ್‍ಪೆಕ್ಟರ್ ಸೇರಿದಂತೆ ಮೇಲಿನ ಅಧಿಕಾರಿಗಳಿಗೆ ಸ್ಮಾರ್ಟ್ ಫೋನ್, ಲ್ಯಾಪ್ ಟಾಪ್ ಸಹಿತ ಹೊಸ ಸಮವಸ್ತ್ರ ನೀಡಲಾಗಿದೆ.

ಇನ್ಸ್‍ಪೆಕ್ಟರ್, ಡಿವೈಎಸ್ಪಿ ಹಾಗೂ ಎಸ್ಪಿ ಸೇರಿ 175 ಮಂದಿ ಅಧಿಕಾರಿಗಳಿಗೆ ಸ್ಯಾಮ್‍ಸಂಗ್ ಕಂಪನಿಯ ಸ್ಮಾರ್ಟ್ ಮೊಬೈಲ್ ಗಳನ್ನು ಈಗಾಗಲೇ ವಿತರಿಸಲಾಗಿದೆ. ಇದಕ್ಕೂ ಮುನ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದು ಸಮನ್ವಯತೆ ಸಾಧಿಸಲು ವೈಯಕ್ತಿಕ ಮೊಬೈಲ್ ಬಳಸುತ್ತಿದ್ದ ಅಧಿಕಾರಿಗಳು ಇದೀಗ ಲೋಕಾಯುಕ್ತ ಇಲಾಖೆಯಿಂದ ಮೊಬೈಲ್ ನೀಡಿರುವುದರಿಂದ ತನಿಖೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಸಹಕಾರಿಯಾಗಲಿದೆ.

ಡಿಜಿಟಲ್ ಸಾಕ್ಷ್ಯಕ್ಕೆ ನೆರವು:ದಾಳಿ ಅಥವಾ ಟ್ರ್ಯಾಪ್ ಕಾರ್ಯಾಚರಣೆ ಪ್ರಕರಣಗಳಲ್ಲಿ ಬಂಧಿತರಾಗುವವರಿಗೆ ಆಥವಾ ಆರೋಪಿತರಿಗೆ ದಾಖಲಾತಿ ಸಲ್ಲಿಕೆ ಹಾಗೂ ವಿಚಾರಣೆ ಹಾಜರಾಗುವಂತೆ ಸೇರಿದಂತೆ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ವಾಟ್ಸ್ ಆ್ಯಪ್ ಮೂಲಕ ನೊಟೀಸ್ ಕಳುಹಿಸಲು ಸ್ಮಾರ್ಟ್ ಮೊಬೈಲ್ ಪೂರಕವಾಗಿರಲಿದೆ.

ಡಿಜಿಟಲ್ ಸಾಕ್ಷ್ಯಾಧಾರ ಸಂಗ್ರಹಿಸಲು ಅಥವಾ ಪರಿಶೀಲಿಸಲು ನೆರವಿಗೆ ಬರಲಿದೆ.ಅಲ್ಲದೇ ಎಫ್‍ಐಆರ್ ದಾಖಲಿಸಲು ಇನ್ನಿತರ ಕೇಸ್‍ಗಳಿಗೆ ಸಂಬಂಧಿಸಿದಂತೆ ಬಳಸಲು ಅಗತ್ಯವಿರುವ ಅಧಿಕಾರಿಗಳಿಗೆ 108 ಕಂಪ್ಯೂಟರ್ ಹಾಗೂ 30 ಲ್ಯಾಪ್ ಟಾಪ್ ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಮವಸ್ತ್ರ ಕಡ್ಡಾಯ:
ಎನ್‍ಐಎ ಹಾಗೂ ನಗರ ಸಿಸಿಬಿ ಮಾದರಿಯಲ್ಲಿ ಲೋಕಾಯುಕ್ತ ಪೊಲೀಸರಿಗೂ ಸಮವಸ್ತ್ರ ನೀಡಲಾಗಿದ್ದು, ಜಾಕೆಟ್ ಮೇಲೆ ಕರ್ನಾಟಕ ಲೋಕಾಯುಕ್ತ ಎಂದು ನಮೂದಿಸಲಾಗಿದೆ. ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಸಂದರ್ಭಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ಧರಿಸಿಬೇಕು ಎಂದು ಲೋಕಾಯುಕ್ತರು ಸೂಚಿಸಿದ್ದಾರೆ.

ಹಲವು ಸಂದರ್ಭಗಳಲ್ಲಿ ದಾಳಿ ನಡೆಸಿದಾಗ ಅಧಿಕಾರಿಗಳೇ ಬಂದಿದ್ದರೂ ದಾಳಿಗೊಳಗಾದ ಅಧಿಕಾರಿ ಅಥವಾ ಕುಟುಂಬಸ್ಥರು ಸಹಕರಿಸುತ್ತಿರಲಿಲ್ಲ. ಎಷ್ಟೋ ಬಾರಿ ಮಾತಿನ ಚಕಮಕಿಗಳು ಸಹ ನಡೆದಿರುವ ಉದಾಹರಣೆಗಳಿವೆ. ಹೀಗಾಗಿ ಇಂತಹ ಗೋಡವೆಗಳಿಂದ ದೂರವಾಗಿಸಲು ಹಾಗೂ ಶಿಸ್ತು ಕಾಪಾಡಿಕೊಳ್ಳಲು ಎಲ್ಲ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಮವಸ್ತ್ರ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು