LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ವಿದ್ಯಾರ್ಥಿಗಳನ್ನು ಮೋದಿ ಸರ್ಕಾರ ದೇಶದ ಶತ್ರುಗಳಂತೆ ನೋಡುತ್ತಿದೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಸಿಜೆಪಿ ವಿದ್ಯಾರ್ಥಿ ಪ್ರತಿಭಟನೆ ಹಾಗೂ ನೀಟ್ ಪರೀಕ್ಷಾ ಅಕ್ರಮಗಳಿಗೆ ಸಂಬAಧಿಸಿದAತೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳನ್ನು ಮೋದಿ ಸರ್ಕಾರ ದೇಶದ ಶತ್ರುಗಳು ಎಂಬAತೆ ನಡೆಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಮಾಧ್ಯಮದಲ್ಲಿ ಪ್ರಕಟವಾದ ಲೇಖನದಲ್ಲಿ ಈ ಕುರಿತು ವಿಸ್ತೃತವಾಗಿ ಬರೆದಿರುವ ಸೋನಿಯಾ ಗಾಂಧಿ, ಸರ್ಕಾರದ ಧೋರಣೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.ಜುಲೈ 20 ರಂದು ದೆಹಲಿ ಪೊಲೀಸ್ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್, ಟೀಯರ್ ಗ್ಯಾಸ್ ಮತ್ತು ಪೆಲೆಟ್‌ಗಳನ್ನು ಬಳಸಿ ಹಿಂಸಾತ್ಮಕ ವಾಗಿ ಹತ್ತಿಕ್ಕಲು ಯತ್ನಿಸಿವೆ. ಮನೆಗೆ ಮರಳುತ್ತಿದ್ದ ವಿದ್ಯಾರ್ಥಿಗಳನ್ನೂ ಬಿಡದೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಸೋನಿಯಾ ಗಾಂಧಿ ಕಿಡಿಕಾರಿದ್ದಾರೆ. ಆ ದಿನದ ವಿಡಿಯೋಗಳು ಪ್ರತಿಯೊಬ್ಬರ ಮನಸ್ಸನ್ನು ಕಲಕಿವೆ. ಈಗಲಾದರೂ ಸ್ಪಷ್ಟವಾಗಿ ಹೇಳುವ ಸಮಯ ಬಂದಿದೆ `ನಿಲ್ಲಿಸಿ, ಇವರು ನಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಎಂದು ಸೋನಿಯಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿ ಸರ್ಕಾರವು ಸಾರ್ವಜನಿಕ ಶಿಕ್ಷಣದಿಂದ ಹಿಂದೆ ಸರಿಯುತ್ತಿದೆ. ಶಾಲಾ ಶಿಕ್ಷಣದ ಬಜೆಟ್ ಅನ್ನು 50% ಹಾಗೂ ಉನ್ನತ ಶಿಕ್ಷಣದ ಬಜೆಟ್ ಅನ್ನು 33% ರಷ್ಟು ಕಡಿತಗೊಳಿಸಲಾಗಿದೆ. ಕಳೆದ 12 ವರ್ಷಗಳಲ್ಲಿ ಸರ್ಕಾರ ಸುಮಾರು 1 ಲಕ್ಷ ಸರ್ಕಾರಿ
ಶಾಲೆಗಳನ್ನು ಮುಚ್ಚಿ 43000 ಖಾಸಗಿ ಶಾಲೆಗಳಿಗೆ ಉತ್ತೇಜನ ನೀಡಿದೆ ಎಂದು ಅವರು ಅಂಕಿಅಂಶ ಸಹಿತ ವಾಗ್ದಾಳಿ ನಡೆಸಿದ್ದಾರೆ. ಪರೀಕ್ಷಾ ಪದ್ಧತಿ ಮತ್ತು ಎನ್‌ಟಿಎ ಸುಧಾರಣೆಗೆ ಸಂಬಂಧಿಸಿದ ಸಂಸದೀಯ ಸಮಿತಿಯ ಶಿಫಾರಸುಗಳನ್ನು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿರಸ್ಕರಿಸಿದ್ದಾರೆ. ಇಷ್ಟೆಲ್ಲಾ ಗೊಂದಲಗಳು ಹಾಗೂ ವೈಫಲ್ಯಗಳು ಸಂಭವಿಸಿದರೂ ಅವರು ರಾಜೀನಾಮೆ ನೀಡದಿರುವುದು ವಿದ್ಯಾರ್ಥಿಗಳ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಸೋನಿಯಾ ಗಾಂಧಿ ಲೇಖನದಲ್ಲಿ ಉಲ್ಲೇಖಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು