LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Udupi

"ಉಡುಪಿಯಲ್ಲಿ ಮೋದಿ ಭರ್ಜರಿ ರೋಡ್ ಶೋ "

ಉಡುಪಿ : ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ `ಲಕ್ಷ ಕಂಠ ಗೀತಾ ಪಾರಾಯಣ'ದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಇಂದು ಉಡುಪಿಗೆ ಆಗಮಿಸಿದ್ದು, ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿದ್ದರೆ ಇತ್ತ ಜನರು ಮೋದಿಗೆ ಹೂ ಮಳೆ ಸುರಿಸುತ್ತಿದ್ದಾರೆ. ದೃಶ್ಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಜನರು ನೆರೆದಿದ್ದರು.

ಮಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ ಪ್ರಧಾನಿ ಮೋದಿ ಉಡುಪಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿದ್ದು, ಉಡುಪಿ ಹೆಲಿಪ್ಯಾಡ್ ನಿಂದ ೨೦ ನಿಮಿಷಗಳ ರೋಡ್ ಶೋ ಮೂಲಕ ಶ್ರೀಕೃಷ್ಣ ಮಠಕ್ಕೆ ಹೊರಟಿದ್ದಾರೆ. ಬಳಿಕ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ ಮತ್ತು `ಸುವರ್ಣ ಕನಕನ ಕಿಂಡಿ' ಉದ್ಘಾಟಿಸಿದ್ದಾರೆ. ಉಡುಪಿ ಕೃಷ್ಣಮಠದಲ್ಲಿ ೧ ತಿಂಗಳ ಕಾಲ ಬೃಹತ್ ಗೀತೋತ್ಸವ ನಡೆಯಲಿದ್ದು, ಇಂದಿನಿಂದ ಬರೋಬ್ಬರಿ ೧ ಲಕ್ಷ ಭಕ್ತರಿಂದ ಲಕ್ಷ ಕಂಠ ಗೀತಾ ಉತ್ಸವ ಆಯೋಜನೆ ಮಾಡಲಾಗಿದೆ. ೧ ಲಕ್ಷ ಭಕ್ತರ ಜೊತೆ ಶ್ಲೋಕ ಪಠಣ ಮಾಡಲಿದ್ದಾರೆ.ಈ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದು, ಮೋದಿ ಕೊನೆಯ ೧೦ ಶ್ಲೋಕ ಪಠಿಸಿದ್ದಾರೆ.

ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ನಂತರ ಪ್ರಧಾನಿ ಮೋದಿಯವರು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಜೊತೆಗೆ ಮಾತುಕತೆ ನಡೆಸಿದ್ದಾರೆ
ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು