ನವದೆಹಲಿ: ಒಬಿಸಿ ಸಮುದಾಯಕ್ಕೆ ಸಿಗುತ್ತಿರುವ ಮೀಸಲಾತಿಯಲ್ಲಿ ಕಡಿತ ಮಾಡಿ ಮುಸ್ಲಿಮರಿಗೆ ಕೋಟಾ ನೀಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲ, ಇಂತಹ ಮೀಸಲಾತಿ ನೀತಿಯನ್ನು ಸಂವಿಧಾನ ರಚನಾಕಾರರು, ಅದರಲ್ಲೂ ಡಾ. ಬಿ.ಆರ್. ಅಂಬೇಡ್ಕರ್ ಅವರು ವಿರೋಧಿಸಿದ್ದರು ಎಂದು ತಮ್ಮ ಲೇಖನದಲ್ಲಿ ಉಲ್ಲೇಖಿಸಿದ್ದಾರೆ. ಸಾಮಾನ್ಯ ಕುಟುಂಬದಲ್ಲಿ ಜನಿಸಿದ ತಮಗೂ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸುವ ಅವಕಾಶವನ್ನು ಸಂವಿಧಾನ ನೀಡಿದೆ ಎಂದು ಮೋದಿ ಹೇಳಿದ್ದಾರೆ. ವ್ಯಕ್ತಿಯ ಜನ್ಮ ಅಥವಾ ಕುಟುಂಬದ ಆರ್ಥಿಕ ಸ್ಥಿತಿ ಅವರ ಭವಿಷ್ಯವನ್ನು ನಿರ್ಧರಿಸಬಾರದು...