LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ದಾಲ್ ಸರೋವರ ತೀರದಲ್ಲಿ ಮೋದಿ ಯೋಗ ಪ್ರದರ್ಶನ

ಶ್ರೀನಗರ: ಪ್ರಧಾನಿ ಮೋದಿ ಅವರ 2 ದಿನಗಳ ಜಮ್ಮು ಮತ್ತು ಕಾಶ್ಮೀರ ಪ್ರವಾಸ ಇಂದು ಆರಂಭವಾಗಲಿದೆ. 3ನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಜಮ್ಮು ಮತ್ತು ಕಾಶ್ಮೀರಕ್ಕೆ ಮೋದಿ ಅವರ ಮೊದಲ ಭೇಟಿಯೂ ಇದಾಗಿದೆ.

ಶ್ರೀನಗರದಲ್ಲಿ ನಾಳೆ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ.ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವ್ಯಾಪಕ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಹಂತಗಳಲ್ಲಿ ಭದ್ರತೆ ನಿಯೋಜಿಸಲಾಗಿದೆ.ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲೆ ಪ್ರಮಾಣದ ಮತದಾನವಾಗಿದ್ದು, ಪ್ರಧಾನಿ ಅವರ ಈ ಭೇಟಿಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ.

ಈ ಹಿನ್ನೆಲೆಯಲ್ಲಿ ಶಿಷ್ಟಾಚಾರದ ಪ್ರಕಾರ, ಹಲವು ಹಂತಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೂಗೊಳ್ಳಲಾಗಿದೆ ಎಂದು ಕಾಶ್ಮೀರ ವಲಯದ ಐಜಿಪಿ ವಿಧಿ ಕುಮಾರ್ ಬರ್ಡಿ ತಿಳಿಸಿದ್ದಾರೆ.ಭದ್ರತಾ ಕ್ರಮದ ಭಾಗವಾಗಿ ಶ್ರೀನಗರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಡ್ರೋನ್ ಮತ್ತು ಕ್ವಾಡ್‍ಕಾಪ್ಟರ್ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಡ್ರೋನ್ ನಿಯಮಗಳು 2021ರ ನಿಬಂಧನೆಗಳ ಪ್ರಕಾರ ನಿಯಮ ಉಲ್ಲಂಘಿಸಿದವರಿಗೆ ದಂಡ ಹಾಗೂ ಶಿಕ್ಷೆ ವಿಧಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು