LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಎಪಿಯಿಂದ ಮಾತ್ರ ರಾಮ ರಾಜ್ಯ ನಿರ್ಮಾಣ ಸಾಧ್ಯ: ಮೋಹನ್ ದಾಸರಿ

ಬೆಂಗಳೂರು: ದೇಶದ ಹೆಮ್ಮೆಯ ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಸಂದರ್ಭದಲ್ಲಿ ನಗರದಲ್ಲಿರುವ ಆಮ್ ಆದ್ಮಿ ಪಕ್ಷದ ಕೇಂದ್ರ ಕಾರ್ಯಾಲಯದಲ್ಲಿ ರಾಮ ಭಜನೆ ಹಾಗೂ ಸುಂದರ ಕಾಂಡ ಸ್ತೋತ್ರ ಪಠಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಆಮ್ ಆದ್ಮಿ ಪಕ್ಷದ ಮುಖಂಡರು, ನಾಯಕರು ಶ್ರದ್ಧಾಭಕ್ತಿಯಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾಮನಿಗೆ ಪೂಜೆ ಸಲ್ಲಿಸಿದರು. ರಾಮನ ಭಜನೆ ಮತ್ತು ಸ್ತೋತ್ರವನ್ನು ಎಲ್ಲರೂ ಪಠಿಸುವ ಮೂಲಕ ಅಯೋಧ್ಯೆ ರಾಮನಿಗೆ ಪ್ರಾರ್ಥನೆ ಸಲ್ಲಿಸಿದರು.

ಪೂಜೆಯ ಬಳಿಕ ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಮಾತನಾಡಿ, ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಮನ ಪ್ರತಿಷ್ಠಾಪನೆ ಮಾಡಿದ್ದಾರೆ. ಆದರೆ ರಾಮ ರಾಜ್ಯ ನಿರ್ಮಾಣ ಮಾಡುವುದು ಆಮ್ ಆದ್ಮಿ ಪಕ್ಷದಿಂದ ಮಾತ್ರ ಸಾಧ್ಯ ಎಂದರು.

ಎಲ್ಲರಿಗೂ ಉತ್ತಮ ಶಿಕ್ಷಣ, ಆರೋಗ್ಯ ಸಿಗಬೇಕು. ಬಡತನ ಇರಲೇಬಾರದು, ಯಾರು ಹಸಿವಿನಿಂದ ಸಾಯಬಾರದು. ಎಲ್ಲರೂ ಸುಖಶಾಂತಿಯಿಂದ ಬದುಕಬೇಕು ಎನ್ನುವುದೇ ರಾಮರಾಜ್ಯದ ಕಲ್ಪನೆಯಾಗಿದೆ. ಈಗಾಗಲೇ ದೆಹಲಿ ಮತ್ತು ಪಂಜಾಬ್‍ನಲ್ಲಿ ರಾಮ ರಾಜ್ಯ ನಿರ್ಮಾಣ ಮಾಡಲಾಗಿದೆ. ಇಡೀ ದೇಶದಲ್ಲಿ ರಾಮ ರಾಜ್ಯ ನಿರ್ಮಾಣ ಮಾಡಲು ಆಮ್ ಆದ್ಮಿ ಪಕ್ಷ ಪಣ ತೊಟ್ಟಿದೆ. ಅದಕ್ಕಾಗಿ ಈ ಕಾರ್ಯಕ್ರಮಗಳನ್ನು ನೆರವೇರಿಸಲಾಗಿದೆ ಎಂದು ಹೇಳಿದರು.

500 ವರ್ಷಗಳ ಕನಸು ನನಸಾಗುತ್ತಿದೆ. ದೇಶಾದ್ಯಂತ ಸಂಭ್ರಮ ಮನೆ ಮಾಡಿದೆ. ಕರ್ನಾಟಕ ಕೂಡ ರಾಮರಾಜ್ಯದಂತೆ ಆಗಬೇಕು. ಆಮ್ ಆದ್ಮಿ ಪಕ್ಷದಿಂದ ಮಾತ್ರ ಅದನ್ನು ಮಾಡಲು ಸಾಧ್ಯ ಎಂದರು. ರಾಮ ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ನಡೆಯಬೇಕು ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು