LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

ಮಕ್ಕಳ ಆರೋಗ್ಯ ರಕ್ಷಣೆಗಾಗಿ ತಪ್ಪದೇ ಪೋಲಿಯೋ ಹನಿ ಹಾಕಿಸಿ: ಮೋನಾ ರೋತ್

ಚಾಮರಾಜನಗರ: ಮಕ್ಕಳನ್ನು ಮಾರಕವಾಗಿ ಕಾಡುವ ಪೋಲಿಯೋ ರೋಗದಿಂದ ರಕ್ಷಿಸಿಕೊಳ್ಳಲು ಪ್ರತಿಯೊಬ್ಬ ನಾಗರಿಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಸಲಹೆ ಮಾಡಿದರು.ಚಾಮರಾಜನಗರ ತಾಲೂಕಿನ ಕುದೇರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಅವರಣದಲ್ಲಿಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲೆಯಾದ್ಯಂತ ಮೂರು ದಿನಗಳ ಕಾಲ ಆಯೋಜಿಸಲಾಗಿರುವ ‘ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ’ ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪಲ್ಸ್ ಪೋಲಿಯೋ ಅಭಿಯಾನವನ್ನು ಭಾರತದಲ್ಲಿ 1995ರಿಂದ ನಿರಂತರವಾಗಿ ರಾಷ್ಟ್ರೀಯ ಕಾರ್ಯಕ್ರಮವಾಗಿ ಆಯೊಜಿಸಲಾಗುತ್ತಿದೆ. ಎಲ್ಲಾ ಇಲಾಖೆಗಳ ಸಹಕಾರದಿಂದ ಜಿಲ್ಲೆಯಲ್ಲಿಯೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪೋಲಿಯೋ ಹನಿಯಿಂದ ಮಕ್ಕಳ ಶಾಶ್ವತ ಅಂಗವಿಕಲತೆ ತಡೆಯಬಹುದಾಗಿದೆ. ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ ಮಕ್ಕಳ ಉತ್ತಮ ಆರೋಗ್ಯ ಹಾಗೂ ಮುಂದಿನ ಭವಿಷ್ಯಕ್ಕಾಗಿ ಆಗತಾನೆ ಹುಟ್ಟಿದ ಮಗುವಿನಿಂದ 5 ವರ್ಷದ ಎಲ್ಲಾ ಮಕ್ಕಳಿಗೂ ಪೋಲಿಯೊ ಹನಿ ಹಾಕಿಸಲು ಪೋಷಕರು ಮುಂದಾಗಬೇಕು ಎಂದು ಸಿ.ಇ.ಒ ಮೋನಾ ರೋತ್ ಅವರು ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಇಲಾಖೆಯ ಮೈಸೂರು ವಿಭಾಗೀಯ ಕಚೇರಿಯ ಉಪನಿರ್ದೇಶಕರಾದ ಡಾ. ಮಲ್ಲಿಕಾ ಅವರು ಮಾತನಾಡಿ ಭಾರತ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದರೂ 1995ರಿಂದ ಈ ವರೆಗೂ ಪ್ರತಿವರ್ಷ 2-3 ಬಾರಿ ಕಾರ್ಯಕ್ರಮ ಏರ್ಪಡಿಸಿ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗುತ್ತಿದೆ. ಜಾಗೃತಿ ಹಾಗೂ ಮುನ್ನೆಚ್ಚರಿಕೆಯೇ ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ಪೋಲಿಯೋ ರೋಗದಿಂದ ಮಕ್ಕಳನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬ ಜವಾಬ್ದಾರಿಯುತ ನಾಗರಿಕರು ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವಂತೆ ಸಲಹೆ ಮಾಡಿದರು.ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ ಅವರು ದೇಶದಲ್ಲಿ ಆರಂಭದಿAದ ಈವರೆಗೂ ಪೋಲಿಯೋ ನಿರ್ಮೂಲನೆ ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಿದ್ದರ ಪರಿಣಾಮವಾಗಿ ಭಾರತ ಪೋಲಿಯೋ ಮುಕ್ತವಾಗಿದೆ. ಆದರೂ ನೆರೆಯ ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ದೇಶಗಳಲ್ಲಿ ಈಗಲೂ ಜೀವಂತವಾಗಿದೆ. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯಕ್ರಮ ಆಯೋಜಿಸುತ್ತಿದೆ. ಪೋಲಿಯೋ ಸಂಪೂರ್ಣ ನಿಯಂತ್ರಣೆಗಾಗಿ ಜಿಲ್ಲೆಯಲ್ಲಿ 5 ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಹನಿಯಿಂದ ವಂಚಿತವಾಗದAತೆ ನೋಡಿಕೊಳ್ಳಲು ಎಲ್ಲಾ ಇಲಾಖೆಗಳ ಸಹಕಾರ ಅಗತ್ಯ ಎಂದರು. ಈ ಬಾರಿ ಚಾಮರಾಜನಗರ ತಾಲೂಕಿನಲ್ಲಿ 23709, ಗುಂಡ್ಲುಪೇಟೆ 13992, ಕೊಳ್ಳೇಗಾಲ 12124, ಹನೂರು 11508 ಹಾಗೂ ಯಳಂದೂರು ತಾಲೂಕಿನಲ್ಲಿ 5268 ಮಕ್ಕಳು ಸೇರಿದಂತೆ ಒಟ್ಟು 66601 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಜೂನ್ 28ರಂದು ಬೆಳಿಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ಪೋಲಿಯೋ ಬೂತ್ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 29 ರಿಂದ ಜುಲೈ 1 ರವರೆಗೆ ಮನೆ ಮನೆ ಭೇಟಿ ನೀಡಿ ಲಸಿಕೆ ಹಾಕಲಾಗುವುದು. ಬಸ್ ಹಾಗೂ ರೈಲ್ವೆ ನಿಲ್ದಾಣ ಹಾಗೂ ಜನನಿಬಿಡ ಸ್ಥಳಗಳು ಸೇರಿದಂತೆ ಇತರೆ ಸ್ಥಳದಲ್ಲಿ ಮಕ್ಕಳಿಗೆ ಲಸಿಕೆ ಹಾಕಲು 23 ಟ್ರ್ಯಾನ್ಸಿಟ್ ಬೂತ್‌ಗಳು ಹಾಗೂ 5 ಮೊಬೈಲ್ ಬೂತ್‌ಗಳನ್ನು ಸಹ ತೆರೆಯಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್. ಚಿದಂಬರ ಅವರು ತಿಳಿಸಿದರು.ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ರಾಜೇಶ್‌ಕುಮಾರ್, ತಾಲೂಕು ವೈದ್ಯಾಧಿಕಾರಿ ಡಾ. ಶ್ರೀನಿವಾಸ್, ಕುದೇರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪೂರ್ಣಿಮ, ವಾರ್ತಾ ಇಲಾಖೆಯ ವಾರ್ತಾ ಸಹಾಯಕರಾದ ಸುರೇಶ್‌ಕುಮಾರ್, ಆರೋಗ್ಯ ಇಲಾಖೆಯ ಲೆಕ್ಕಪತ್ರ ವ್ಯವಸ್ಥಾಪಕರಾದ ಹೇಮಂತ್‌ಕುಮಾರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೋವಿಂದಯ್ಯ, ಅಂಗನವಾಡಿ ಮೇಲ್ವಿಚಾರಕರಾದ ಕಲಾವತಿ, ಗ್ರಾಮದ ಮುಖಂಡರಾದ ಆಶೋಕ್, ಮಧು, ರವಿ, ಪುಟ್ಟಶೆಟ್ಟಿ, ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು