ಬೆಂಗಳೂರು: ಹಾಲಿನ ದರ ಏರಿಕೆ ಸಂಬAಧ ಹಾಲು ಒಕ್ಕೂಟಗಳು ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲಿದ್ದು, ಇಂದೇ ಮುಹೂರ್ತ ಫಿಕ್ಸ್ ಆಗುವ ಸಾಧ್ಯತೆಯಿದೆ. ಬಮುಲ್ ಅಧ್ಯಕ್ಷ ಡಿಕೆ ಸುರೇಶ್ ಹಾಗೂ ಕೆಎಂಎಫ್ ಮಾಜಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದ ನಿಯೋಗ ಇಂದು ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲಿದೆ. ಈ ವೇಳೆ ಪ್ರತಿ ಲೀಟರ್ ಹಾಲಿನ ಮೇಲೆ 10 ರೂ. ಹೆಚ್ಚಳ ಮಾಡಲು ಪ್ರಸ್ತಾವನೆ ಸಲ್ಲಿಕೆ ಮಾಡಲಿದ್ದಾರೆ. ಜೊತೆಗೆ ಹಾಲಿನ ಜೊತೆಗೆ ಮೊಸರು, ಬೆಣ್ಣೆ, ತುಪ್ಪದ ಬೆಲೆ ಏರಿಕೆಗೂ ಮನವಿ ಮಾಡಲಿದ್ದಾರೆ.ಈಗಾಗಲೇ ಹಾಲು ಒಕ್ಕೂಟಗಳೊಂದಿಗೆ ಸಭೆ ನಡೆದಿದ್ದು, ದರ ಏರಿಕೆ ಬಗ್ಗೆ ಸರ್ಕಾರ ಇಂದೇ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.