LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಪ್ಯಾನ್ ಇಂಡಿಯಾ `ಪ್ಯಾರಾಡಾಕ್ಸ್' ಚಿತ್ರಕ್ಕೆ ಮುಹೂರ್ತ ನೃತ್ಯ ನಿರ್ದೇಶಕ

ಕ್ಯಾ.ಕಿಶೋರ್ ಈಗ ಮೊದಲ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. `ಪ್ಯಾರಾಡಾಕ್ಸ್' ಎಂಬ ಚಿತ್ರಕ್ಕೆ ಇದು. ಇದನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಿಸಲಾಗುತ್ತಿದೆ. ನಟಿ ಹನ್ಸಿಕಾ ಮೊಟ್ವಾನಿ ಅಭಿನಯ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ನಡೆಯಿತು.ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಬಗ್ಗೆ ಮಾಹಿತಿ ನೀಡಿದ ನಿರ್ದೇಶಕ ಕಿಶೋರ್, 'ಇದು ಪ್ಯಾನ್ ಇಂಡಿಯಾ ಸಿನಿಮಾ. ಅಂಗಾಂಗ ಕಳ್ಳತನ (ಆರ್ಗನ್ ಸ್ಕ್ಯಾಮ್) ಬಗ್ಗೆ ಸಿನಿಮಾ ಇರಲಿದ್ದು, ಮಹಿಳಾ ಪ್ರಧಾನ ಕಥೆ ಒಳಗೊಂಡಿದೆ. ಇಂಗ್ಲೀಷ್ ಸಿನಿಮಾ ರೀತಿ ಚಿತ್ರಕಥೆ ಇರಲಿದ್ದು ಸಸ್ಪೆನ್ಸ್, ಥ್ರಿಲ್ಲರ್ ಜಾನರ್ ಚಿತ್ರವಿದು. ನಾನು ನಿರ್ದೇಶಕನಾಗಬೇಕು ಎಂದು ಚಿತ್ರರಂಗಕ್ಕೆ ಬಂದಿದ್ದೆ. ಆದರೆ, ಚಿಕ್ಕಪ್ಪನಿಂದಾಗಿ ನೃತ್ಯ ನಿರ್ದೇಶಕನಾದೆ. ಒಂದಿಷ್ಟು ನಿರ್ದೇಶಕರ ಜೊತೆ ಕೆಲಸ ಮಾಡಿದ್ದು, ಈಗ 'ಪ್ಯಾರಾಡಾಕ್ಸ್' ಸ್ವತಂತ್ರ ನಿರ್ದೇಶನ ಮಾಡುತ್ತಿದ್ದೇನೆ. ಈ ಕಥೆಯನ್ನು ಕೇಳಿ ತುಂಬಾ ಇಷ್ಟಪಟ್ಟು ಕಾರ್ತಿಕ್ ರೆಡ್ಡಿ ಅವರು ನಿರ್ಮಾಣ ಮಾಡಲು ಮುಂದಾದರು. ಈಗಾಗಲೇ ಇವರ ಪ್ರೊಡಕ್ಷನ್ ನಲ್ಲಿ ಒಂದು ಸಿನಿಮಾ ನಡೆಯುತ್ತಿದೆ. ಇದು ಎರಡನೇ ಸಿನಿಮಾ. ಸೋನು ಸೋದ್, ಹನ್ಸಿಕಾ ಮೊಟ್ವಾನಿ, ರವಿಶಂಕರ್ ಸೇರಿದಂತೆ ಬೇರೆ ಬೇರೆ ಭಾಷೆಯ ಹಲವು ಕಲಾವಿದರು ಇದರಲ್ಲಿ ಅಭಿನಯ ಮಾಡಲಿದ್ದಾರೆ' ಎಂದು ಹೇಳಿದರು. ನಂತರ ಚಿತ್ರದ ನಿರ್ಮಾಪಕ ಕಾರ್ತಿಕ್ ರೆಡ್ಡಿ ಮಾತನಾಡಿ, 'ಇದೊಂದು ಸಾಮಾನ್ಯ ಸಿನಿಮಾ ಅಲ್ಲ. ಎಲ್ಲಾ ಭಾಷೆಗೂ ಹತ್ತಿರವಾಗುವ ಕಥೆ ಇದೆ. ಪ್ರೇಕ್ಷಕರಿಗೆ ಹೊಸ ಅನುಭವ ಈ ಚಿತ್ರ ನೀಡುತ್ತದೆ. ತಾಂತ್ರಿಕವಾಗಿ ಸಿನಿಮಾ ತುಂಬಾ ಚೆನ್ನಾಗಿ ಬರಲಿದೆ. ನಮ್ಮ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಎರಡನೇ ಸಿನಿಮಾ ಇದು. ಮೊದಲ ನಿರ್ಮಾಣದ 'ಶ್ಯಾಡೊ' ಇಂಗ್ಲಿಷ್ ಸಿನಿಮಾ ಮುಕ್ತಾಯದ ಹಂತದಲ್ಲಿದೆ. ಈ 'ಪ್ಯಾರಾಡಾಕ್ಸ್' ಚಿತ್ರವನ್ನು ಹಾಲಿವುಡ್ ಸಿನಿಮಾದಂತೆ ಮಾಡುವ ಯೋಚನೆಯಿದ್ದು, ಅದೇ ರೀತಿಯಲ್ಲಿ ಮಾಡುತ್ತಿದ್ದೇವೆ. ಯಾವುದೇ ಕೊರತೆ ಬಾರದ ಹಾಗೆ ಅದ್ದೂರಿಯಾಗಿ ಸಿನಿಮಾ ಮಾಡುತ್ತೇವೆ. ಪ್ರೇಕ್ಷಕರಿಗೆ ಕೊಡಬೇಕಾದ ಮನರಂಜನೆ ಕೊಡಲು ನಾವು ಪ್ರಯತ್ನ ಮಾಡತಾ ಇದ್ದೇವೆ. ಇದೊಂದು ಅದ್ಭುತ ಫ್ಯಾಂಟಸಿ ಸಿನಿಮಾ ಆಗಲಿದೆ ಎಂದು ಹೇಳಬಹುದು. ಬೇರೆ ಬೇರೆ ಭಾಷೆಯ 16 ಮುಖ್ಯ ಕಲಾವಿದರು ಈ ಚಿತ್ರದಲ್ಲಿರುತ್ತಾರೆ' ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು