LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಚೆನ್ನೈ ಸೂಪರ್ ಆಟಕ್ಕೆ ಮುಂಬೈ ಪಲ್ಟಿ 5ನೇ ಸ್ಥಾನಕ್ಕೆ ಹೈಜಂಪ್

ಮುಂಬೈ: ಸಂಜು ಸ್ಯಾಮ್ಸನ್‌ಅವರ ಎರಡನೇ ಸ್ಫೋಟಕ ಶತಕ ಮತ್ತು ಹೊಸೈನ್ ಅವರ ಸ್ಪಿನ್ ಕೈಚಳಕದ ನೆರವಿನಿಂದ ತವರಿನಲ್ಲೇ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 103 ರನ್‌ಗಳ ಭರ್ಜರಿ ಜಯ ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ಚೆನ್ನೈ 6 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿತು. ಕಠಿಣ ಸವಾಲನ್ನು ಬೆನ್ನಟ್ಟಿದ ಮುಂಬೈ 19 ಓವರ್‌ಗಳನ್ನು 104 ರನ್‌ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡು ಟೂರ್ನಿಯಲ್ಲಿ ಐದನೇ ಸೋಲು ಕಂಡಿತು.
ಈ ಪಂದ್ಯಕ್ಕೂ ಮೊದಲು ಚೆನ್ನೈ 8ನೇ ಸ್ಥಾನದಲ್ಲಿತ್ತು. ಇಂದಿನ ಭರ್ಜರಿ ಜಯದಿಂದಾಗಿ ಚೆನ್ನೈ ನೆಟ್ ರನ್ ರೇಟ್ 0.118 ಕ್ಕೆ ಏರಿದ್ದರಿಂದ 5ನೇ ಸ್ಥಾನಕ್ಕೆ ಜಿಗಿದಿದೆ. 7ನೇ ಸ್ಥಾನದಲ್ಲಿದ್ದ ಮುಂಬೈ 4 ಅಂಕಗಳೊAದಿಗೆ 8ನೇ ಸ್ಥಾನಕ್ಕೆ ಜಾರಿದೆ.
ಮುಂಬೈ 11 ರನ್ ಗಳಿಸುವಷ್ಟರಲ್ಲೇ ಕ್ವಿಂಟಾನ್ ಡಿ ಕಾಕ್, ನಮನ್ ಧಿರ್, ನಿಶ್ ಮಾಲೆವಾರ್ ಅವರ ವಿಕೆಟ್ ಕಳೆದುಕೊಂಡಿತು. ಈ ಸಮಯದಲ್ಲಿ ನಾಲ್ಕನೇ ವಿಕೆಟಿಗೆ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ 56 ಎಸೆತಗಳಲ್ಲಿ 73 ರನ್ ಜೊತೆಯಾಟವಾಡಿದರು.
84 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿದ್ದ ಮುಂಬೈ ನಂತರ 3 ರನ್ ಗಳಿಸುವಷ್ಟರಲ್ಲಿ ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರುದರ್‌ಪೋರ್ಡ್, ಸೂರ್ಯಕುಮಾರ್ ಯಾದವ್ ಅವರ ವಿಕೆಟ್ ಕಳೆದಕೊಳ್ಳುವ ಮೂಲಕ ಸೋಲಿನತ್ತ ಮುಖ
ಮಾಡಿತು.
ತಿಲಕ್ ವರ್ಮಾ 37 ರನ್(29 ಎಸೆತ, 5 ಬೌಂಡರಿ,)ಸೂರ್ಯಕುಮಾರ್ ಯಾದವ್ 35 ರನ್(30 ಎಸೆತ, 5 ಬೌಂಡರಿ) ಹೊಡೆದು ವಿಕೆಟ್ ಒಪ್ಪಿಸಿದರು. ಚೆನ್ನೈ ಪರ ಹೊಸೈನ್ 4 ವಿಕೆಟ್, ನೂರ್ ಅಹ್ಮದ್ 2 ವಿಕೆಟ್ ಪಡೆದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು