LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

"ಮುರ್ಮು, ವಿ.ಸೋಮಣ್ಣ ಅವರ ಬೊಟ್ಸಾವಾನ್ ಪ್ರವಾಸ"

ನವದೆಹಲಿ: ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮುಜಿಯವರ ನಿಯೋಗದಲ್ಲಿ ಆಪ್ರಿಕಾ ದೇಶಗಳ ಪ್ರವಾಸದ ಕೊನೆಯ ಹಂತದಲ್ಲಿ ಬೊಟ್ಸಾವಾನ್ ದೇಶಕ್ಕೆ ದಿನಾಂಕ ೧೨.೧೧.೨೦೨೫ರಂದು ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿ ನೀಡಿದ್ದಾರೆ. ಗ್ಯಾಬೊರೋನ್‌ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಂದರ್ಬದಲ್ಲಿ ಬೊಟ್ಸಾವಾನದ ಅಧ್ಯಕ್ಷ ಎಚ್.ಇ.ದುಮಾ ಬೊಕೊ ಅವರು ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಗೌರವ ರಕ್ಷಕ ದಳದ ಗೌರವ ಹಾಗೂ ಸಾಂಪ್ರದಾಯಿಕ ಸ್ವಾಗತ ನೀಡಿದ ನೀಡಿದರು. ಇದು ಭಾರತ ಮತ್ತು ಬೊಟ್ಸಾವಾನ್ ದೇಶದ ಸದ್ಬಾವನೆ ಮತ್ತು ಪರಸ್ಪರ ಗೌರವದ ಸಾಕ್ಷಿಯಾಗಿತ್ತು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಬೋಟ್ಸವಾನದ ಗ್ಯಾಬೊರೊನ್‌ನ ರಾಷ್ಟ್ರಪತಿ ಕಛೇರಿಯಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮುಜೀಯವರ ನಿಯೋಗದಲ್ಲಿ ಬೊಟ್ಸಾವಾನದ ರಾಷ್ಟ್ರಪತಿಗಳಾದ ಹೆಚ್.ಇ. ದುಮಾ ಬೊಕೊ ಅವರೊಂದಿಗಿನ ಮಾತುಕತೆಯ ಸಭೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಭಾಗವಹಿಸಿದ್ದರು. ನಿಯೋಗವು ಬೊಟ್ಸಾವಾನದ ರಾಷ್ಟ್ರೀಯ ಸಂಸತ್ತಿಗೆ ಭೇಟಿ ನೀಡಿದ್ದು, ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮುಜಿಯವರು  ಬೊಟ್ಸಾವಾನದ ಸಂಸತ್ ಸಭೆಯನ್ನು ಉದ್ದೇಶಿಸಿ ಮಾತಾನಾಡಿದರು, ಭಾರತದ ಗೌರವಾನ್ವಿತ ರಾಷ್ಟ್ರಪತಿಗಳು ನ್ಯಾಯಯುತ, ಸುಸ್ಥಿರ ಅಭಿವೃದ್ದಿ ಮತ್ತು ಶಕ್ತಿಯುತ ಭಾರತ ಮತ್ತು ಬೊಟ್ಸಾವಾನದ ಸಂಬಂದ ಹಾಗೂ ಗುರಿಗಳ ಬಗ್ಗೆ ನಡೆಸಿದ ಸಭೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಭಾಗಿಯಾಗಿದ್ದರು.

ವ್ಯಾಪಾರ, ಹೂಡಿಕೆ, ಕೃಷಿ, ನವೀಕರಣಿಯ ಇಂಧನ, ಆರೋಗ್ಯ, ಶಿಕ್ಷಣ,ಕೌಶಲ್ಯ ಅಭಿವೃದ್ಧಿ, ರಕ್ಷಣೆ ಮತ್ತು ಡಿಜಿಟಲ್ ತಂತ್ರಜ್ಷಾನದಂತಹ ಪ್ರಮಖ ಕ್ಷೇತ್ರಗಳಲ್ಲಿ ಎರಡೂ ದೇಶಗಳ ಪರಸ್ಪರ ಸಹಕಾರ ಬಲಪಡಿಸುವಲ್ಲಿ ಸಹಕಾರಿಯಾಗುವಂತಹ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳೊಂದಿಗಿನ ನಿಯೋಗದಲ್ಲಿ ಬೊಟ್ಸವಾನ್ ದೇಶದ ಪ್ರವಾಸದಲ್ಲಿ ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ. ಸೋಮಣ್ಣ ಭಾಗಿಯಾಗಿದ್ದಾರೆ.ದಿನಾಂಕ ೧೪.೧೧.೨೦೨೫ರಂದು ಬೆಳಿಗ್ಗೆ ವಿದೇಶ ಪ್ರವಾಸದಿಂದ ಕೇಂದ್ರ ಸಚಿವ ವಿ.ಸೋಮಣ್ಣ ದೆಹಲಿಗೆ ತಲುಪಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು