LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

'ರವಿಕೆ ಪ್ರಸಂಗ' ಸಿನಿಮಾದ ಹಾಡು ಬಿಡುಗಡೆಗೊಳಿಸಿದ ಸಂಗೀತ ನಿರ್ದೇಶಕ ಗುರುಕಿರಣ್​

'ರವಿಕೆ ಪ್ರಸಂಗ' ಸಿನಿಮಾದ ಮನಸಲಿ ಜೋರು ಕಲರವ ಎಂಬ ಮೆಲೋಡಿ ಹಾಡನ್ನು ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್​ ಬಿಡುಗಡೆಗೊಳಿಸಿದ್ದಾರೆ.ಮಹಿಳೆಯರು ನಿತ್ಯ ಧರಿಸುವ ಸೀರೆ, ಓಲೆ, ಬಳೆ ಹಾಗು ಗೆಜ್ಜೆ ಸೇರಿದಂತೆ ಹಲವು ವಸ್ತುಗಳ ಬಗ್ಗೆ ಸಾಕಷ್ಟು ಹಾಡುಗಳು ಬಂದಿವೆ.

ಆದರೆ, ರವಿಕೆ ಬಗ್ಗೆ ಈವರೆಗೂ ಯಾವುದೇ ಹಾಡು, ಸಿನಿಮಾ ಮೂಡಿಬಂದಿಲ್ಲ. ಇದೀಗ ರವಿಕೆ ಕುರಿತಾಗಿಯೇ ಸಿನಿಮಾ ನಿರ್ಮಾಣವಾಗುತ್ತಿದ್ದು ಅದರ ಹೆಸರು 'ರವಿಕೆ ಪ್ರಸಂಗ'. ಹೆಣ್ಣು ಮಕ್ಕಳು ಯಾವುದೇ ಸಮಾರಂಭವಾದರೂ ಸೀರೆಗೆ ತಕ್ಕಂತೆ ರವಿಕೆ ಹೊಲಿಸಿಕೊಳ್ಳುವುದು ರೂಢಿ. ಅದೇ ರವಿಕೆಯ ಕುರಿತಾದ ಚಿತ್ರವೇ 'ರವಿಕೆ ಪ್ರಸಂಗ'. ಆಲ್​ ಮೋಸ್ಟ್​ ಶೂಟಿಂಗ್​ ಮುಗಿಸಿ ಬಿಡುಗಡೆಗೆ ಸಜ್ಜಾಗಿರುವ ಈ ಸಿನಿಮಾಗೆ ಸಂಗೀತ ನಿರ್ದೇಶಕ ಗುರುಕಿರಣ್​ ಸಾಥ್​ ಸಿಕ್ಕಿದೆ.

ಈ 'ರವಿಕೆ ಪ್ರಸಂಗ' ಸಿನಿಮಾದಲ್ಲಿ ಮನಸಲಿ ಜೋರು ಕಲರವ ಎಂಬ ಅದ್ಭುತವಾದ ಮೆಲೋಡಿ ಹಾಡು ಇದೆ. ಈ ಸಾಂಗ್​ ಅನ್ನು ಎವರ್​ಗ್ರೀನ್​ ಸೂಪರ್​ ಹಿಟ್​ ಮೆಲೋಡಿ ಹಾಡುಗಳನ್ನು ನೀಡಿರುವ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್​ ಬಿಡುಗಡೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ವರ್ಷದ ಅತ್ಯುತ್ತಮ ಮೆಲೋಡಿ ಹಾಡುಗಳ ಪಟ್ಟಿಯಲ್ಲಿ ಅಗ್ರಸ್ಥಾನ‌ ಪಡೆಯುವ ಎಲ್ಲ ಅಂಶಗಳನ್ನು ಈ ಹಾಡು ಹೊಂದಿದೆ.

ಈ ಅದ್ಭುತ ಸಾಂಗ್​ಗೆ ಕಿರಣ್ ಕಾವೇರಪ್ಪ ಅವರ ಅದ್ಭುತ ಸಾಹಿತ್ಯ, ಮಾನಸ ಹೊಳ್ಳ ಮಧುರವಾದ ಧ್ವನಿ ಹಾಗೂ ವಿನಯ್ ಶರ್ಮಾ ಅವರ ಇಂಪಾದ ಸಂಗೀತ ಇದೆ. ಈ ಮೆಲೋಡಿ ಹಾಡುಗಳು ಎಂದಿಗೂ ಜನರ ಜೀವನದ ಒಂದು ಅವಿಭಾಜ್ಯ ಅಂಗವಾಗಿರುತ್ತದೆ. ಎಲ್ಲ ಕಾಲದಲ್ಲೂ ಎಲ್ಲರನ್ನೂ ಆಕರ್ಷಿಸುವ ಹಲವಾರು ಮೆಲೋಡಿ ಹಾಡುಗಳು ಕೇಳುಗರನ್ನು ರಂಜಿಸುತ್ತದೆ.

ಕಿರುತೆರೆ ಕಾರ್ಯಕ್ರಮಗಳ ಮೂಲಕ ಕನ್ನಡಿಗರ ಮನಗೆದ್ದಿರುವ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ ಭಾರತಿ ಈ ಚಿತ್ರದ ಮೂಲಕ ಹೀರೋಯಿನ್​ ಆಗಿ ಹೊರಹೊಮ್ಮುತ್ತಿದ್ದಾರೆ. ಚಿತ್ರದಲ್ಲಿ ಗೀತಾ ಭಾರತಿ ಭಟ್ ಜೊತೆಗೆ ಸಂಪತ್ ಮೈತ್ರೇಯ, ರಾಕೇಶ್ ಮಯ್ಯ, ಸುನನ್ ರಂಗನಾಥ್, ಪದ್ಮಜಾರಾವ್, ರಘು ಪಾಂಡೇಶ್ವರ್ ಹೀಗೆ ಸಾಕಷ್ಟು ಅನುಭವಿ ಕಲಾವಿದರು ಅಭಿನಯಿಸಿದ್ದಾರೆ.

ಚಿತ್ರತಂಡ: ಈ ಸಿನಿಮಾಗೆ ಸಂತೋಷ್ ಕೊಡಂಕೇರಿ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಪಾವನ ಸಂತೋಷ್ ಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ವಿನಯ್ ಶರ್ಮ ಸಂಗೀತ ನಿರ್ದೇಶನ, ಮುರಳಿಧರ್ ಎನ್ ಛಾಯಾಗ್ರಹಣ ಹಾಗೂ ರಘು ಶಿವರಾಮ್ ಸಂಕಲನ ಚಿತ್ರಕ್ಕಿದೆ‌. ದೃಷ್ಟಿ ಮಿಡಿಯಾ ಮತ್ತು ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗಿದೆ. ಚಿತ್ರದ ಎಲ್ಲ ಕೆಲಸಗಳು ಮುಕ್ತಾಯವಾಗಿದ್ದು, ಬಿಡುಗಡೆಯ ಹೊಸ್ತಿಲಲ್ಲಿರುವ ರವಿ ಪ್ರಸಂಗ ಚಿತ್ರ ಮುಂದಿನ ವರ್ಷ ಪ್ರೇಕ್ಷಕರ ಮುಂದೆ ಬರಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು