LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಡಾ||ರಾಜ್ ಹುಟ್ಟುಹಬ್ಬದಂದು "ಮೈ ನೇಮ್ ಇಸ್ ರಾಜ್"(ಭಾಗ 3)

ಏಪ್ರಿಲ್ 24, ನಟ ಸಾರ್ವಭೌಮ ಡಾ||ರಾಜಕುಮಾರ್ ಅವರ 95 ನೇ ಹುಟ್ಟುಹಬ್ಬ. ಅಂದು ಸಂಜೆ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ "ಮೈ ನೇಮ್ ಇಸ್ ರಾಜ್"(ಭಾಗ 3) ಕಾರ್ಯಕ್ರಮ ನಡೆಯಲಿದೆ. ಸ್ವಾಮಿ ವಿವೇಕಾನಂದ ಟ್ರಸ್ಟ್ ಹಾಗೂ ಟೀಮ್ ಆತ್ರೇಯ ಈ ಸಮಾರಂಭವನ್ನು ಆಯೋಜಿಸಿದೆ. ಈ ಬಾರಿ " ರಾಜ್ ಗೀತ ನಮನ" ಎಂಬ ಹೆಸರಿನಲ್ಲಿ ಖ್ಯಾತ ಗಾಯಕ ಮನೋಜವಂ ಆತ್ರೇಯ ಅವರ ಸಾರಥ್ಯದಲ್ಲಿ ಹೆಸರಾಂತ ಗಾಯಕರು ಡಾ||ರಾಜ್ ಅವರ ಜನಪ್ರಿಯ ಗೀತೆಗಳನ್ನು ಹಾಡಲಿದ್ದಾರೆ. ಈ ಕಾರ್ಯಕ್ರಮದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ವಿವರಣೆ ನೀಡಿದರು.

ನಾನು ಹಾಗೂ ನನ್ನ ಕುಟುಂಬದವರು ಡಾ||ರಾಜಕುಮಾರ್ ಅವರ ಅಭಿಮಾನಿಗಳು. ಅವರ ಹುಟ್ಟುಹಬ್ಬದ ದಿನ ಏನಾದರೂ ಸಮಾರಂಭ ಮಾಡಬೇಕೆಂದುಕೊಂಡು ಟೀಮ್ ಆತ್ರೇಯ ತಂಡದಿಂದ ( Team Aatreya ) ಪ್ರತಿವರ್ಷ "ಮೈ ನೇಮ್ ಇಸ್ ರಾಜ್" ಎಂಬ ಹೆಸರಿನಲ್ಲಿ ಸಂಗೀತ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದ್ದೇವೆ.

ಇದರ ಜೊತೆಗೆ ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಮಾಡಿದ್ದೇವೆ. ಈ ಬಾರಿ ನಮ್ಮೊಂದಿಗೆ ಸ್ವಾಮಿ ವಿವೇಕಾನಂದ ಟ್ರಸ್ಟ್ ಕೂಡ ಜೊತೆಯಾಗಿದೆ. ಏಪ್ರಿಲ್ 24 ರ ಸಂಜೆ ನಗರದ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ "ಮೈ ನೇಮ್ ಇಸ್ ರಾಜ್" ಕಾರ್ಯಕ್ರಮ ನಡೆಯಲಿದೆ. "ಸರಿಗಮಪ" ಖ್ಯಾತಿಯ ಚನ್ನಪ್ಪ ಹುದ್ದರ್ , ಪೃಥ್ವಿ ಭಟ್, ಮೈತ್ರಿ ಅಯ್ಯರ್ ಸೇರಿದಂತೆ ಹೆಸರಾಂತ ಗಾಯಕರು ಅಂದು ಹಾಡಲಿದ್ದಾರೆ. ಹನ್ನೆರಡಕ್ಕೂ ಅಧಿಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ವಾದ್ಯ ಕಲಾವಿದರು ಈ ಕಾರ್ಯಕ್ರಮದಲ್ಲಿರುತ್ತಾರೆ.

ಡಾ||ರಾಜಕುಮಾರ್ ಅವರು ಸಿನಿಮಾ, ಧ್ವನಿಸುರುಳಿ ಸೇರಿದಂತೆ 5000 ಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದಾರೆ. ಡಾ||ರಾಜ್, ಕೇವಲ ಹಾಡುಗಾರರಷ್ಟೇ ಆಗಿರಲಿಲ್ಲ. ಕೆಲವು ವಾದ್ಯಗಳನ್ನು ನುಡಿಸುತ್ತಿದ್ದರು. ಅವರೊಬ್ಬ ಸರಸ್ವತಿ ಪುತ್ರ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಅದಕ್ಕೆ ಅವರು ಹಾಡಿರುವ ಮಾಣಿಕ್ಯ ವೀಣಾ, ನಾದಮಯ, ಮೇಘ ಬಂತು ಮೇಘ ಮುಂತಾದ ಹಾಡುಗಳೆ ಸಾಕ್ಷಿ. ಈ ಬಾರಿ "ಡಾ ರಾಜ್ ಗೀತ ನಮನ" ಎಂಬ ಹೆಸರಲ್ಲಿ ಅವರು ಹಾಡಿರುವ ಸಂಗೀತಮಯ ಹಾಡುಗಳನ್ನು ಪ್ರಸ್ತುತ ಪಡಿಸುತ್ತಾ ಅಣ್ಣವ್ರಲ್ಲಿದ್ದ ಒಬ್ಬ ಶ್ರೇಷ್ಠ ಸಂಗೀತಗಾರನನ್ನು ಗೌರವಿಸಿ ಈ ಕಾರ್ಯಕ್ರಮವನ್ನು ಸಮರ್ಪಿಸುತಿದ್ದೇವೆ.

ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಟಿಕೇಟ್ ಗಳು ಬುಕ್ ಮೈ ಶೋ ನಲ್ಲಿ ಲಭ್ಯವಿದೆ. ನಮ್ಮ ಸಮಾರಂಭಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು. ಟೀಂ ಆತ್ರೇಯ ತಂಡದ ಮನೋಜ್ ಹೊಸಮನಿ, ಶರಣ್, ವೇದಾಂತ್ ನರಸಿಂಹ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು