LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

`ನನ್ನ ಮಣ್ಣು, ನನ್ನ ದೇಶ' ಅಭಿಯಾನಕ್ಕೆ ಚಾಲನೆ

ಕೆ.ಆರ್.ನಗರ: ಹುತಾತ್ಮ ಯೋಧರನ್ನು ಗೌರವಿಸುವ ನಿಟ್ಟಿನಲ್ಲಿ ದೇಶಾದ್ಯಂತ `ಮೇರಿ ಮಾಟಿ ಮೇರಾ ದೇಶ್' (ನನ್ನ ಮಣ್ಣು, ನನ್ನ ದೇಶ) ಎಂಬ ಅಭಿಯಾನ ನಡೆಸುತ್ತಿರುವ ದೇಶದ  ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವುದು ದೇಶದ ಏಕತೆ ಸಂಕೇತವಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹೊಸಹಳ್ಳಿ ವೆಂಕಟೇಶ್  ಹೇಳಿದರು.

ಪಟ್ಟಣದ ತೋಪಮ್ಮನ ದೇವಸ್ಥಾನದ ಆವರಣದಲ್ಲಿ ಕೆ.ಆರ್.ನಗರ ತಾಲ್ಲೂಕು ಭಾರತೀಯ ಜನತಾ ಪಾರ್ಟಿ ವತಿಯಿಂದ ಹಮ್ಮಿಕೊಂಡಿದ್ದ ನನ್ನ ಮಣ್ಣು ನನ್ನ ದೇಶದ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ದೇಶಕ್ಕಾಗಿ ಪ್ರಾಣ ಬಲಿದಾನ ಮಾಡಿರುವ ಹುತಾತ್ಮರ ಸ್ಮರಣಾರ್ಥವಾಗಿ ಮೇರಿ ಮಾಟಿ ಮೇರಾ ದೇಶ್ ಎಂಬ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ.

ಅದರಂತೆ, ದೇಶದ ಮೂಲೆ ಮೂಲೆಗಳಿಂದಲೂ ಮೃತ್ತಿಕೆ ಸಂಗ್ರಹಿಸಲಾಗಿದೆ ಎಂದ ಅವರು ನನ್ನ ಮಣ್ಣು ನನ್ನ ದೇಶದ ಅಭಿಯಾನ ಅಡಿಯಲ್ಲಿ ಪ್ರತಿಗ್ರಾಮಗಳಲ್ಲೂ ಮಣ್ಣನ್ನು ಸಂಗ್ರಹಿಸಿ ದೆಹಲಿಗೆ ರವಾನೆ ಮಾಡಲಾಗುತ್ತದೆ ಎಂದು ತಿಳಿಸಿದರು
ರಾಷ್ಟ್ರೀಯ ಯುದ್ಧ ಸ್ಮಾರಕದ ಸಮೀಪದಲ್ಲೇ ಆ ಮಣ್ಣಿನಲ್ಲಿ ಗಿಡಗಳನ್ನು ನೆಟ್ಟು `ಅಮೃತ್ ಉದ್ಯಾನ' ನಿರ್ಮಿಸಲಾಗುವುದು. ಈ ಉದ್ಯಾನವು ಏಕ ಭಾರತ ಶ್ರೇಷ್ಠ ಭಾರತದ ಸಂಕೇತವಾಗಿ ಹೊರಹೊಮ್ಮಲಿದೆ ಎಂದು ತಿಳಿಸಿದರು.

ನಮ್ಮ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆಯಂತೆ ದೇಶಾದ್ಯಂತ ವಿನೂತನ ಅಭಿಯಾನವನ್ನು ಕೈಗೊಂಡಿದ್ದು, ನನ್ನ ಮಣ್ಣು ನನ್ನ ದೇಶ ಎಂಬ ಪರಿಕಲ್ಪನೆಯಲ್ಲಿ ದೇಶಾದ್ಯಂತ ದೇಶವಾಸಿಗಳು ಸಂಗ್ರಹಿಸಿ ನೀಡುವ ಮಣ್ಣಿನಲ್ಲಿ ದೆಹಲಿಯಲ್ಲಿ ಅಮೃತ ವಾಟಿಕಾ(ಅಮೃತ ವನ) ವನ್ನು ನಿರ್ಮಿಸುವುದು ಕೇಂದ್ರ ಸರಕಾರದ ಯೋಜನೆಯಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ನಿರ್ಮಾಣವಾಗುವ ಭವ್ಯ ವನದಲ್ಲಿ ದೇಶದ ಪ್ರತಿಯೊಬ್ಬನ ಪಾಲೂ ಇರಬೇಕು ಮತ್ತು ಇದು ದೇಶವಾಸಿಗಳಿಗೆ ಅಭಿಮಾನದ ಸಂಕೇತವೂ ಹೌದು ಎಂಬ ಕಲ್ಪನೆಯಲ್ಲಿ ಈ ಅಭಿಯಾನ ನಡೆಸಲಾಗುತ್ತಿದೆ. ಇಡೀ ದೇಶ ಒಂದು ಎಂಬ ಮನೋಭಾವನೆ ಪ್ರತಿಯೊಬ್ಬರಲ್ಲೂ ಮೂಡಿದಾಗ ಮಾತ್ರ ಸಶಕ್ತ ಸದೃಢ ರಾಷ್ಟ್ರ ನಿರ್ಮಿಸಲು ಸಾಧ್ಯ ಎಂಬುದು ಮೋದಿಯವರ ಆಶಯವಾಗಿದೆ ಎಂದು ತಿಳಿಸಿದರು.

ತಾಲ್ಲೂಕು ಅಧ್ಯಕ್ಷ ಕೆ ವೈ ಮಂಜು, ಜಿಲ್ಲಾ ಕಾರ್ಯದರ್ಶಿ ಸ್ವಪ್ನಾ, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಕಾಶ್, ನಟರಾಜ್, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೃಷ್ಣಯ್ಯ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ತಿಲಕ್, ಒಬಿಸಿ ಪ್ರಧಾನ ಕಾರ್ಯದರ್ಶಿ ಕೃಷ್ಣ, ಮಹಿಳಾ ಮೋರ್ಚಾ ಅಧ್ಯಕ್ಷೆ ದ್ರಾಕ್ಷಯಿಣಿ, ನಗರ ಪ್ರಧಾನ ಕಾರ್ಯದರ್ಶಿ ಕೆ ಆರ್ ಮಂಜು, ಎಸ್ ಸಿ ಮೋರ್ಚಾ ಅಧ್ಯಕ್ಷ ಮದುಚಂದ್ರ, ಮುಖಂಡರಾದ ಜಗದೀಶ್, ಶಿವಪ್ರಸಾದ್, ರಾಜಣ್ಣ, ಯೋಗೇಶ್, ಗಿರೀಶ್, ತಮ್ಮಣ್ಣೆಗೌಡ  ಮುಂತಾದವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು