LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Tumakuru

ತುಮಕೂರಿನಲ್ಲಿ ೧೧ ಮಂಗಗಳ ನಿಗೂಢ ಸಾವು

ತುಮಕೂರು: ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಕೇವಲ ಎರಡು ದಿನಗಳಲ್ಲಿ ೧೧ ಮಂಗಗಳು ನಿಗೂಢವಾಗಿ ಮೃತಪಟ್ಟಿದ್ದು, ವಿಷಪ್ರಾಶನವಾಗಿರುವ ಶಂಕೆ ವ್ಯಕ್ತವಾಗಿದೆ.
ದೇವರಾಯನದುರ್ಗ ಹಾಗೂ ದುರ್ಗದ ಹಳ್ಳಿ ನಡುವಿನ ಅರಣ್ಯ ಪ್ರದೇಶದಲ್ಲಿ ಕಳೆದ ಎರಡು ದಿನಗಳಲ್ಲಿ ಮಂಗಗಳ ಮೃತದೇಹಗಳು ಪತ್ತೆಯಾಗಿವೆ. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಒಂದರ ನಂತರ ಮತ್ತೊಂದರAತೆ ಮಂಗಗಳ ಮೃತದೇಹಗಳು ಪತ್ತೆ ಮಾಡಿದ್ದಾರೆ. ಅರಣ್ಯ ಪ್ರದೇಶದಲ್ಲಿ ನಡೆಸಿದ ಶೋಧ ಕಾರ್ಯದ ವೇಳೆ ಮೊದಲ ದಿನ ಏಳು ಮಂಗಗಳು, ಎರಡನೇ ದಿನ ನಾಲ್ಕು ಮಂಗಗಳ ಮೃತದೇಹಗಳು ಪತ್ತೆಯಾಗಿವೆ. ಪತ್ತೆಯಾದ ೧೧ ಮೃತದೇಹಗಳಲ್ಲಿ ಒಂಬತ್ತು ಸಾಮಾನ್ಯ ಮಂಗಗಳು ಹಾಗೂ ಎರಡು ಲಂಗೂರಗಳು ಎನ್ನಲಾಗಿದೆ. ಪ್ರಾಥಮಿಕ ಪರಿಶೀಲನೆಯಲ್ಲಿ ಮಂಗಗಳು ಯಾವುದೇ ಸೋಂಕು ಅಥವಾ ಕಾಯಿಲೆಯಿಂದ ಮೃತಪಟ್ಟಿಲ್ಲ ಎಂಬುದು ತಿಳಿದುಬಂದಿದೆ.
ಅರಣ್ಯಾಧಿಕಾರಿಗಳು ಸಾವಿನ ಕಾರಣ ಪತ್ತೆ ಹಚ್ಚಲು ಮುಂದಾಗಿ, ಊರ್ಡಿಗೆರೆಯ ಪಶು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಪರೀಕ್ಷೆಯ ವೇಳೆ ಮಂಗಗಳ ಕರುಳಿನಲ್ಲಿ ಅನ್ನ ಪತ್ತೆಯಾಗಿದ್ದು, ವಿಷ ಪ್ರಾಶನದಿಂದ ಸಾವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಇದನ್ನು ದೃಢಪಡಿಸಲು ಕೆಲವು ಮಾದರಿಗಳನ್ನು ಬೆಂಗಳೂರಿನ ಪಶು ವೈದ್ಯಕೀಯ ವಿದ್ಯಾಲಯಕ್ಕೆ ರವಾನೆ ಮಾಡಲಾಗಿದೆ. ಈ ಘಟನೆ ಸಂಬAಧ ತುಮಕೂರು ಪ್ರಾದೇಶಿಕ ವಲಯದ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ಮಂಗಗಳ ಸಾವಿನ ಹಿಂದಿರುವ ಕಾರಣ ಹಾಗೂ ದುಷ್ಕöÈತ್ಯವಿದೆಯೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು